AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಶೂಟೌಟ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ, ಹೊರಬರುತ್ತಾ ಅಸಲಿ ಸತ್ಯ?

ಚಾಮರಾಜನಗರ ಮೂವರ ಶೂಟೌಟ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಇನ್ನೊಂದಡೆ ಮ್ಯಾಜಿಸ್ಟ್ರೀಟ್ ತನಿಖೆಗೆ ನೀಡಲಾಗಿದೆ. ಇದರ ಮಧ್ಯೆ ಇದೀಗ ಈ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದ್ದು, ಮೂವರ ಸಾವಿನ ಕುರಿತು ಸತ್ಯಾ ಸತ್ಯತೆ ತಿಳಿಯಲು ಮಾನವ ಹಕ್ಕುಗಳ ಆಯೋಗದ ಡಿವೈ ಎಸ್ಪಿ ಅಶ್ವತ್ಥನಾರಾಯಣ ಮತ್ತು ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದೆ.

ಚಾಮರಾಜನಗರ ಶೂಟೌಟ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ, ಹೊರಬರುತ್ತಾ ಅಸಲಿ ಸತ್ಯ?
ಶೂಟೌಟ್​​​​ನಲ್ಲಿ ಮೃತಪಟ್ಟವರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 19, 2026 | 10:17 PM

Share

ಚಾಮರಾಜನಗರ, (ಆಗಸ್ಟ್ 19): ಹನೂರಿನ ಕಾವೇರಿ ವನ್ಯಧಾಮ ವ್ಯಾಪ್ತಿಯ ಮರಿಮಂಗಲ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್‌ ಪ್ರಕರಣದಲ್ಲಿ (Hanur Shoot Out Case) ಇದೀಗ ಮಾನವ ಹಕ್ಕುಗಳ ಆಯೋಗ ಪ್ರವೇಶಿಸಿದೆ. ಬೇಟೆಯಾಡಲು ಬಂದು ಅರಣ್ಯ ಇಲಾಖೆ ಮೇಲೆ ದಾಳಿ ಮಾಡಲು ಯತ್ನಿಸಿದ್ದು, ಇದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತಮ್ಮ ಆತ್ಮ ರಕ್ಷಣೆಗೆ ಪ್ರತಿದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದ್ರೆ, ಅಸಲಿ ಏನಾಗಿದೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ. ಹೀಗಾಗಿ ಈ ಬಗ್ಗೆ ರಾಜಕೀಯ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಇನ್ನೊಂದೆಡೆ ಮ್ಯಾಜಿಸ್ಟ್ರೀಟ್ ತನಿಖೆ ನಡೆಸಿದೆ. ಇದೆಲ್ಲದರ ನಡುವೆ ಮಾನವ ಹಕ್ಕುಗಳ ಆಯೋಗ ಎಂಟ್ರಿಕೊಟ್ಟಿದ್ದು, ಮೂವರ ಸಾವಿನ ಕುರಿತು ಸತ್ಯಾ ಸತ್ಯತೆ ತಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಡಿವೈಎಸ್ಪಿ ಅಶ್ವತ್ಥನಾರಾಯಣ ಮತ್ತು ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ ತನಿಖೆ ಹನೂರ ನಲ್ಲಿ ಪ್ರಾರಂಭವಾಗಿದ್ದು, ಆಯೋಗದ ಅಧ್ಯಕ್ಷರ ಆದೇಶದ ಅನುಸಾರ ಡಿವೈಎಸ್ಪಿ ಅಶ್ವತ್ ನಾರಾಯಣ ಮತ್ತು ತಂಡ ತನಿಖೆ ನಡೆಯುತ್ತಿದೆ. ಇನ್ನು ಕಾವೇರಿ ವನ್ಯಜೀವಿಧಾಮದ ಎಸಿಎಫ್ ಮರಿಸ್ವಾಮಿ ಅವರು ಮಾನವ ಹಕ್ಕು ಆಯೋಗಕ್ಕೆ ಎಲ್ಲಾ ವಿವರ ನೀಡಿದರು. ಶೂಟೌಟ್ ನಡೆದ ಸ್ಥಳ ಸೇರಿ‌ದಂತೆ ಧ್ವಂಸಗೊಂಡ ಕಳ್ಳಬೇಟೆ ಶಿಬಿರಗಳಿಗೆ ಭೇಟಿ ನೀಡಿದ್ದು, ಯಾವ ಸ್ಥಳದಲ್ಲಿ ಶೂಟ್ ಮಾಡಲಾಯಿತು? ಎಲ್ಲಿ ಮಾಂಸ ಸಿಕ್ಕಿತು? ಮೂವರು ಎಲ್ಲಿದ್ದರು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಒಟ್ಟು ನಾಲ್ಕು ಜನರಲ್ಲಿ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದರೆ, ಇನ್ನುಳಿದ ಓರ್ವ ಎಸ್ಕೇಪ್ ಆಗಿದ್ದು, ಇದೀಗ ಅಜ್ಞಾತ ಸ್ಥಳದಲ್ಲಿರುವ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದರೆ ಅಸಲಿ ಸತ್ಯಾಂಶ ಹೊರಬರಲಿದೆ. ಆದ್ರೆ, ಆ ವ್ಯಕ್ತಿ ನಿಗೂಢವಾಗಿ ಕಾಣೆಯಾಗಿದ್ದು, ಅಲ್ಲಿಂದಲೇ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾನೆ.

ವಿಡಿಯೋದಲ್ಲಿ ಏನಿದೆ?

ಆ.15ರಂದು ಬೆಳಗಿನ ಜಾವ 5:20 ಆಗಿತ್ತು. ಈ ವೇಳೆ ನಾನು ಬೆಟ್ಟದಿಂದ ಕೆಳಗಿಳಿದು ಬಂದಿದ್ದೆ. ಅರಣ್ಯ ಇಲಾಖೆ ಸಿಬ್ಬಂದಿ ಬಂದರು, ಕೂಡಲೇ ಶೂಟ್ ಮಾಡಿದರು. ಇದರಿಂದ ಭಯಗೊಂಡು ಓಡಿ ಹೋದೆ. 5 ನಿಮಿಷ ಆದ್ಮೇಲೆ ಯಾವುದೇ ಶಬ್ದ ಇರಲಿಲ್ಲ. ನಂಗೆ ಹುಷಾರಿರಲಿಲ್ಲ ಹೀಗಾಗಿ ನಾನು ಅಲ್ಲಿಂದ ಓಡಿ ಮನೆಗೆ ಬಂದೆ, ಬಳಿಕ ನನ್ನನ್ನು ಆಸ್ಪತ್ರೆಗೆ ಸೇರಿಸಿದರು. ಇದೀಗ ಅರಣ್ಯ ಇಲಾಖೆಯವರು ಸಾಕ್ಷಿ ಆಗಲು ನನ್ನನ್ನು ಹುಡುಕುತ್ತಿದ್ದಾರೆ. ನಂಗೆ ಭಯವಾಗ್ತಿದೆ. ಪೊಲೀಸರೇ ನನಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More