ಚಾಮರಾಜನಗರ: ಬೈಕ್ಗೆ ಅಪರಿಚಿತ ಕಾರು ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಅಪರಿಚಿತ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿನ್ನಲೆ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಗುಂಡ್ಲುಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಚಾಮರಾಜನಗರ, ಜು.06: ಹಿಟ್ ಆ್ಯಂಡ್ ರನ್ಗೆ ಇಬ್ಬರು ಬೈಕ್ ಸವಾರರು ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ಬೈಕ್ಗೆ ಅಪರಿಚಿತ ಕಾರು ಡಿಕ್ಕಿ(Accident)ಯಾಗಿ ಸೋಮಹಳ್ಳಿ ನಿವಾಸಿಗಳಾದ ಮಹಾದೇವಸ್ವಾಮಿ ಹಾಗೂ ನಾಗೇಂದ್ರ ಎಂಬುವವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ಬಳಿಕ ಕಾರು ನಿಲ್ಲಿಸದೇ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಗುಂಡ್ಲುಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೈ-ಬೆಂ ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ನಲ್ಲಿ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾದ ಘಟನೆ ಮಂಡ್ಯ ತಾಲೂಕಿನ ಕೋಣನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಸಂಪೂರ್ಣ ಜಖಂ ಆಗಿದೆ. ಚಾಲಕನ ತಲೆ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ರಕ್ತದ ಮಡುವಿನಲ್ಲಿ ನರಳಾಡಿದ ಚಾಲಕನನ್ನ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೇಗ ಅಪಘಾತ ಮಾಡಿ; ಸಿಕ್ಕಾಪಟ್ಟೆ ಟ್ರೋಲ್ ಆಯ್ತು ಮಂಗಳೂರು- ಮಡಿಕೇರಿ ಹೆದ್ದಾರಿಯ ಬೋರ್ಡ್
ಕುರಿ ಕಳ್ಳನ ಬಂಧನ
ನೆಲಮಂಗಲ: ಕುರಿ ಕಳ್ಳನನ್ನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತನ್ವಿರ್ ಪಾಷ(39)ಬಂಧಿತ ಆರೋಪಿ. ಇತನಿಂದ 5 ಕುರಿ ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ಟೆಂಪೋ, ಓಮಿನಿ, ಮೊಬೈಲ್ ಜಪ್ತಿ ಮಾಡಲಾಗಿದ. ರಾತ್ರಿ ಸಮಯದಲ್ಲಿ ಮಟನ್ ಅಂಗಡಿ ಶೆಡ್ಗಳಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ, ಇದೀಗ ಚಿಕ್ಕಬಾಣಾವರದಲ್ಲಿ ಮಹಮ್ಮದ್ ಅವರ ಮಟನ್ ಸ್ಟಾಲ್ ದೊಡ್ಡಿಯಲ್ಲಿದ್ದ ಕುರಿಗಳನ್ನ ಕದಿಯುವ ವೇಳೆ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ