ಚಾಮರಾಜನಗರ: ಬೈಕ್​ಗೆ ಅಪರಿಚಿತ ಕಾರು ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಅಪರಿಚಿತ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿನ್ನಲೆ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಗುಂಡ್ಲುಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಾಮರಾಜನಗರ: ಬೈಕ್​ಗೆ ಅಪರಿಚಿತ ಕಾರು ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2024 | 6:32 PM

ಚಾಮರಾಜನಗರ, ಜು.06: ಹಿಟ್ ಆ್ಯಂಡ್​ ರನ್​ಗೆ ಇಬ್ಬರು ಬೈಕ್​​ ಸವಾರರು ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ಬೈಕ್​ಗೆ ಅಪರಿಚಿತ ಕಾರು ಡಿಕ್ಕಿ(Accident)ಯಾಗಿ ಸೋಮಹಳ್ಳಿ ನಿವಾಸಿಗಳಾದ ಮಹಾದೇವಸ್ವಾಮಿ ಹಾಗೂ ನಾಗೇಂದ್ರ ಎಂಬುವವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ಬಳಿಕ ಕಾರು ನಿಲ್ಲಿಸದೇ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಗುಂಡ್ಲುಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೈ-ಬೆಂ ಎಕ್ಸ್​ಪ್ರೆಸ್​ ವೇನಲ್ಲಿ ಅಪಘಾತ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ನಲ್ಲಿ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾದ ಘಟನೆ ಮಂಡ್ಯ ತಾಲೂಕಿನ ಕೋಣನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರಿನ ಚಾಲಕನ ನಿಯಂತ್ರಣ ತಪ್ಪಿ  ಕಾರು​ ಪಲ್ಟಿಯಾಗಿದ್ದು, ಸಂಪೂರ್ಣ ಜಖಂ ಆಗಿದೆ. ಚಾಲಕನ ತಲೆ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ರಕ್ತದ ಮಡುವಿನಲ್ಲಿ ನರಳಾಡಿದ ಚಾಲಕನನ್ನ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೇಗ ಅಪಘಾತ ಮಾಡಿ; ಸಿಕ್ಕಾಪಟ್ಟೆ ಟ್ರೋಲ್ ಆಯ್ತು ಮಂಗಳೂರು- ಮಡಿಕೇರಿ ಹೆದ್ದಾರಿಯ ಬೋರ್ಡ್ 

ಕುರಿ ಕಳ್ಳನ ಬಂಧನ

ನೆಲಮಂಗಲ: ಕುರಿ ಕಳ್ಳನನ್ನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತನ್ವಿರ್ ಪಾಷ(39)ಬಂಧಿತ ಆರೋಪಿ. ಇತನಿಂದ
5 ಕುರಿ ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ಟೆಂಪೋ, ಓಮಿನಿ, ಮೊಬೈಲ್ ಜಪ್ತಿ ಮಾಡಲಾಗಿದ. ರಾತ್ರಿ ಸಮಯದಲ್ಲಿ ಮಟನ್ ಅಂಗಡಿ ಶೆಡ್​ಗಳಲ್ಲಿ ಕುರಿ ಕಳ್ಳತನ ಮಾಡುತ್ತಿದ್ದ, ಇದೀಗ ಚಿಕ್ಕಬಾಣಾವರದಲ್ಲಿ ಮಹಮ್ಮದ್ ಅವರ ಮಟನ್ ಸ್ಟಾಲ್ ದೊಡ್ಡಿಯಲ್ಲಿದ್ದ ಕುರಿಗಳನ್ನ ಕದಿಯುವ ವೇಳೆ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us