ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್​ಕೇರ್​; ಮಹಿಳೆಗೆ ಕೆಲಸ ನೀಡಲು ಮೀನಾಮೇಷ

ದೇವರು ವರ ಕೊಟ್ಟರೂ ಪೂಜಾರಿ ವರ ಕೊಟ್ಟಿಲ್ಲ ಎನ್ನುವ ಹಾಗಾಗಿದೆ ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳ ನಡೆ. ನ್ಯಾಯಯುತವಾಗಿ ಸಿಗಬೇಕಿದ್ದ ಕೆಲಸಕ್ಕೆ ಅಡ್ಡಿಯಾದ ಅಧಿಕಾರಿಗಳ ವಿರುದ್ದ ದೂರುದಾರೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅಷ್ಟಕ್ಕೂ ಆಗಿದ್ದಾದರೂ ಏನು ಅಂತೀರಾ? ಈ ಸ್ಟೋರಿ ಓದಿ.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್​ಕೇರ್​; ಮಹಿಳೆಗೆ ಕೆಲಸ ನೀಡಲು ಮೀನಾಮೇಷ
ಹೈಕೋಟ್​ ಆದೇಶವಿದ್ದರೂ ಚಾಮರಾಜನಗರದಲ್ಲಿ ಮಹಿಳೆಗೆ ಕೆಲಸ ನೀಡಲು ಅಧಿಕಾರಿಗಳು ಮೀನಾಮೇಷ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 20, 2024 | 7:18 PM

ಚಾಮರಾಜನಗರ, ಆ.20: ತನ್ನ ಕೆಲಸ ಪಡೆದುಕೊಳ್ಳಲು ಕಚೇರಿಯಿಂದ ಕಚೇರಿ ತಿರುಗುತ್ತಿರುವ ಮಹಿಳೆ ಹೆಸರು ಮಂಜುಳಾ, ಚಾಮರಾಜನಗರ (Chamarajanagar) ತಾಲೂಕಿನ ಮಲ್ಲಯ್ಯನಪುರ ಗ್ರಾಮಸ್ಥೆ. 25 ವರ್ಷಗಳಿಂದ ಅತ್ತೆ ನಾಗಮ್ಮ ಮಲ್ಲಯ್ಯನಪುರ ಗ್ರಾಮದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ, ಸೇವಾ ಅವಧಿ ಮುಗಿಯುವ ಮೊದಲೇ ನಾಗಮ್ಮ ಅವರು ಅನಾರೋಗ್ಯ ಕಾರಣದಿಂದ ಮೃತ ಪಟ್ಟಿದ್ದಾರೆ. ಈ ಹಿನ್ನಲೆ ಅನುಕಂಪ ಆಧಾರದ ಮೇಲೆ ಕೆಲಸ ನೀಡುವಂತೆ ಮನವಿ ಮಾಡಿದರು. ಮೊದಲು ಬಿಡುಗಡೆಯಾದ ಜಾಬ್ ಲೀಸ್ಟ್​ನಲ್ಲಿ ಮಂಜುಳಾ ಹೆಸರು ಕೂಡ ಬಂದಿತ್ತು. ಆದ್ರೆ, ಮಂಜುಳಾಗೆ ಕೆಲಸ ನೀಡದೆ ಸ್ಥಳೀಯರಲ್ಲದ ಬೇರೊಬ್ಬರಿಗೆ ಇಲಾಖೆ ಕೆಲಸ ನೀಡಿದೆ.

ಹೈಕೋರ್ಟ್ ಮೊರೆ ಹೋಗಿದ್ದ ಮಂಜುಳಾ

ಯಾವಾಗ ಮಂಜುಳಾಗೆ ಕೆಲಸ ಸಿಗಲಿಲ್ಲವೋ ಆಕೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸುದೀರ್ಘವಾಗಿ ವಿಚಾರಣೆ ನಡೆಸಿದ ಮಾನ್ಯ ಉಚ್ಛನ್ಯಾಯಾಲಯ, ಈಗ ಮಂಜುಳಾರಿಗೆ ಕೆಲಸ ನೀಡುವಂತೆ ಆದೇಶಿಸಿದೆ. ಅದು ಅಲ್ಲದೆ ನ್ಯಾಯಾಲಯದ ಆದೇಶ ಬಂದು ಎರಡು ವಾರ ಕಳೆಯುವುದರೊಳಗೆ ಕೆಲಸ ನೀಡುವಂತೆ ಸೂಚಿಸಿದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಕೆಲಸ ನೀಡದೆ ಅಲೆದಾಡಿಸುತ್ತಿದ್ದಾರೆ.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ; ತಿಂಗಳು ಕಳೆದರೂ ಸಂತ್ರಸ್ಥರಿಗೆ ಸಿಕ್ಕಿಲ್ಲ ಇನ್ನೂ ಪರಿಹಾರ

ಹೈಕೋರ್ಟ್ ಆದೇಶಕ್ಕೆ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡದೆ ನಮ್ಮನ್ನ ಸತಾಯಿಸ್ತಾ ಇದ್ದಾರೆ ಎಂದು ದೂರುದಾರೆ ಮಂಜುಳಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮೂಲಕ  ಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲವಾ ಎಂಬ ಪ್ರಶ್ನೆ ಮೂಡಿದೆ. ಈಗ ದೂರುದಾರೆ ಮಂಜುಳ “ಕಟ್ಮೆಂಟ್” ಆಫ್ ಕೋರ್ಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ತಕ್ಕ ಶಾಸ್ತಿಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ