ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಗ್ರಾ.ಪಂಚಾಯತಿ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ

ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇದೀಗ ಚಾಮರಾಜನಗರ ಜಿಲ್ಲೆಯ ಹನೂರು (Hanur) ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ, ಪಂಚಾಯತಿ ಅಧ್ಯಕ್ಷೆ ಪುತ್ರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಗ್ರಾ.ಪಂಚಾಯತಿ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ಅತ್ಯಾಚಾರ
ಆರೋಪಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: May 28, 2024 | 11:06 PM

ಚಾಮರಾಜನಗರ, ಮೇ.28: ಚಾಮರಾಜನಗರ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಹನೂರು(Hanur)ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಈ ಹಿನ್ನಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಭಿಕೆಯ ಪುತ್ರ ವೈದೇಶ್ ಮೇಲೆ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ.

ವಿಡಿಯೋ ವೈರಲ್ ಮಾಡೋದಾಗಿ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿ ವತಿಯಿಂದ ಮನೆ ಕಟ್ಟಿಸಿ ಕೊಡಬೇಕೆಂದರೆ ನನ್ನ ಜೊತೆ ಮಲಗಬೇಕೆಂದು ಆರೋಪಿ ಹೇಳಿದ್ದನಂತೆ. ಜೊತೆಗೆ ಪದೇ ಪದೇ ಮಹಿಳೆಯನ್ನ ಮಂಚಕ್ಕೆ ಕರೆದು ಪೀಡಿಸುತ್ತಿದ್ದ. ಆತನ ಕಾಟ ತಾಳಲಾರದೆ ವೈದೇಶ್​ನನ್ನ ಸಂತ್ರಸ್ಥೆ ಮನೆಗೆ ಕರೆದಿದ್ದಾರೆ. ಈ ವೇಳೆ ಸಂತ್ರಸ್ಥೆ ಮನೆ ಒಳ ಹೊಕ್ಕಿ ಮಹಿಳೆಯನ್ನು ವಿವಸ್ತ್ರ ಗೊಳಿಸಿ, ಫೋಟೋ ಹಾಗೂ ವಿಡಿಯೋವನ್ನ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದ. ಸಹಕರಿಸದಿದ್ರೆ ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್ ಮಾಡೋದಾಗಿ ಧಮ್ಕಿ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾನೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಶಾಲೆಯಲ್ಲೇ ಶಿಕ್ಷಕನಿಂದ ಅತ್ಯಾಚಾರ, 7ನೇ ಕ್ಲಾಸ್ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿ

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದ್ದು, ಮನನೊಂದ ಮಹಿಳೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವೈದೇಶ್ ಹಾಗೂ ವೀಡಿಯೋ ವೈರಲ್ ಮಾಡಿದ ಬಸಮಣಿ , ಶಿವಮ್ಮ ಎಂಬುವರ ವಿರುದ್ದ ಐಪಿಸಿ ಸೆಕ್ಷನ್ 376, 384, 417, 509 ಮತ್ತು ಐಟಿ ಕಾಯ್ದೆ 66(ಇ), 67, 67(ಎ) ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.

ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಹಾವೇರಿ: ಡ್ರಾಪ್ ಕೊಡುವ ನೆಪದಲ್ಲಿ ಅನ್ಯಕೋಮಿನ ಯುವಕನೊಬ್ಬ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕೆಂಚಾಯಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಾಹಿದುಲ್ಲಾ ಅಂಗರಗಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಇನ್ನು ಕೃತ್ಯದ ಬಳಿಕ ಆರೋಪಿ ಶಾಹಿದುಲ್ಲಾ ಅಂಗರಗಟ್ಟಿ ಪರಾರಿಯಾಗಿದ್ದಾನೆ. ಮಾಸೂರು ಗ್ರಾಮದಿಂದ ಸಂತೆ ಮಾಡಿಕೊಂಡು ಊರಿಗೆ ತೆರಳುತ್ತಿದ್ದ ಮಹಿಳೆಗೆ ಊರಿಗೆ ಡ್ರಾಪ್ ಕೊಡುವ ನೆಪದಲ್ಲಿ, ಬೈಕ್ ನಲ್ಲಿ ಹತ್ತಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM