AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ. ಯಾಕೆ ಅಂತೀರಾ? ಇಲ್ಲಿದೆ ನೋಡಿ.

ಚಾಮರಾಜನಗರ: ಸಂಬಳಕ್ಕೆ ಪರದಾಟ, ಇಂದಿರಾ ಕ್ಯಾಂಟೀನ್ ಬಂದ್​ ಮಾಡುವ ಎಚ್ಚರಿಕೆ ಕೊಟ್ಟ ಸಿಬ್ಬಂದಿ
ಚಾಮರಾಜನಗರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 06, 2023 | 2:00 PM

Share

ಚಾಮರಾಜನಗರ, ಆ.6: ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ಗೆ ಮರುಜೀವ ಬಂದಿತ್ತು. ಇನ್ನು ಈ ಕುರಿತು ಮಾತನಾಡಿದ್ದ ಸಿಎಂ ‘ಇಂದಿರಾ ಕ್ಯಾಂಟೀನ್ (Indira Canteen) ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ. ಈವರೆಗೆ ಪಾಲಿಕೆ ಶೇ.70, ಸರ್ಕಾರ 30% ಅನುದಾನ ನೀಡುತ್ತಿತ್ತು. ಇನ್ಮುಂದೆ ಸರ್ಕಾರ, ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ. ಎಲ್ಲೆಲ್ಲಿ ಹೊಸ ಕ್ಯಾಂಟೀನ್​ ಪ್ರಾರಂಭಿಸಬೇಕೆಂಬ ಬಗ್ಗೆಯೂ ಚರ್ಚೆ ಮಾಡಿ ಪಟ್ಟಿ ಕೊಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು. ಆದರೀಗ ಚಾಮರಾಜನಗರ ಇಂದಿರಾ ಕ್ಯಾಂಟೀನ್​ನ್ನು​ ಸಿಬ್ಬಂದಿಗಳು ಬಂದ್​ ಮಾಡಲು ಮುಂದಾಗಿದ್ದಾರೆ.

ಜಿಲ್ಲೆಯ ನಾಲ್ಕೂ ಇಂದಿರಾ ಕ್ಯಾಂಟೀನ್​ಗಳು ಆಗಲಿದೆ ಬಂದ್

ಕಳೆದ ಎಂಟು ತಿಂಗಳಿನಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನಲೆ ಬೇಸತ್ತ ಸಿಬ್ಬಂದಿಗಳು ಬಂದ್​ ಮಾಡುವ ನಿರ್ಧಾರ ಮಾಡಿದ್ದಾರೆ. ಹೌದು, ಸರ್ಕಾರದಿಂದ ಒಂದು ಮುಕ್ಕಾಲು ಕೋಟಿ ರೂಪಾಯಿ ಬಿಲ್ ಆಗುವುದು ಬಾಕಿಯಿದ್ದು, ಟೆಂಡರ್‌ದಾರ ಸಿಬ್ಬಂದಿಗೆ ಸಂಬಳ ನೀಡುತ್ತಿಲ್ಲ. ಟೆಂಡರ್‌ದಾರರನ್ನು ಸಂಬಳ ಕೇಳಿದರೆ ಫೋನ್ ರಿಸೀವ್ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರತಿ ಭಾನುವಾರ ಜಗಳೂರು ಪಟ್ಟಣದಲ್ಲಿ ಕಸಗುಡಿಸುವೆ ಎಂದ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ, ಇಂದಿರಾ ಕ್ಯಾಂಟೀನ್​​ನಲ್ಲಿ ಊಟ ಮಾಡಿದರು

ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರ

ಇನ್ನು ಸಂಬಳವಿಲ್ಲದೆ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಕಡಿಮೆ ದರದಲ್ಲಿ ಊಟ ತಿಂಡಿ ಸಿಗಲಿದೆ ಎಂದು ಬರುವ ಬಡವರು, ಶ್ರಮಿಕರಿಗೆ ಇದರಿಂದ ತೊಂದರೆ ಆಗಲಿದೆ. ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮೂರು, ನಾಲ್ಕು ದಿನದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರಂತೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್