ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ

ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 09, 2024 | 5:23 PM

ಚಾಮರಾಜನಗರ, ಜೂ.09: ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರಿಗೆ ಆಹ್ವಾನಿಸಲಾಗಿದೆ.

ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ

ಮೋದಿ ಅವರ ಮನ್‌ಕಿ ಬಾತ್​ನಿಂದ ಪ್ರೇರಣೆಗೊಂಡು ಕರಕುಶಲ ಉದ್ಯಮ ಆರಂಭಿಸಿದ್ದರು. ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು ಮಹಿಳೆಯರಿಗೆ ಉದ್ಯಮ ನೀಡುವ ಜೊತೆಗೆ ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ವರ್ಷಾ ಸಾಧನೆಯ ಬಗ್ಗೆಯು ಮನ್.ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೋಕಲ್ ಫಾರ್ ಲೋಕಲ್ ಎಂದು ಪ್ರಶಂಸಿದ್ದರು. ಇದೀಗ ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ನವದೆಹಲಿ ತಲುಪಿದ್ದಾರೆ.

ಇದನ್ನೂ ಓದಿ: ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯಲ್ಲಿ ಪ್ರತಿ ತಿಂಗಳು ನಡೆಸಿಕೊಡುವ ಮನ್​ ಕಿ ಬಾತ್​ ಕಾರ್ಯಕ್ರಮವೊಂದರಲ್ಲಿ 2023 ನವೆಂಬರ್​ 27 ರಂದು ವರ್ಷಾ ಅವರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವರ್ಷಾ ಅವರು ಅಲಂಕಾರಿಕ ವಸ್ತುಗಳು ಮತ್ತು ವ್ಯಾನಿಟಿ ಬ್ಯಾಗ್ ನಂತಹ ವಸ್ತುಗಳ ಉತ್ಪಾದನೆ ಮಾಡುತ್ತಾ ಸ್ವಾವಲಂಬಿ ಆಗುವುದರ ಜೊತೆಗೆ ಹಲವರಿಗೆ ಉದ್ಯೋಗವನ್ನೂ ನೀಡಿದ್ದಾರೆ. ವೋಕಲ್ ಫಾರ್ ಲೋಕಲ್​ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sun, 9 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್