ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ

ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 09, 2024 | 5:23 PM

ಚಾಮರಾಜನಗರ, ಜೂ.09: ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಇಂದು(ಜೂ.09) ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರಿಗೆ ಆಹ್ವಾನಿಸಲಾಗಿದೆ.

ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ

ಮೋದಿ ಅವರ ಮನ್‌ಕಿ ಬಾತ್​ನಿಂದ ಪ್ರೇರಣೆಗೊಂಡು ಕರಕುಶಲ ಉದ್ಯಮ ಆರಂಭಿಸಿದ್ದರು. ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು ಮಹಿಳೆಯರಿಗೆ ಉದ್ಯಮ ನೀಡುವ ಜೊತೆಗೆ
ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ವರ್ಷಾ ಸಾಧನೆಯ ಬಗ್ಗೆಯು ಮನ್.ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೋಕಲ್ ಫಾರ್ ಲೋಕಲ್ ಎಂದು ಪ್ರಶಂಸಿದ್ದರು. ಇದೀಗ ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ನವದೆಹಲಿ ತಲುಪಿದ್ದಾರೆ.

ಇದನ್ನೂ ಓದಿ: ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಆಕಾಶವಾಣಿಯಲ್ಲಿ ಪ್ರತಿ ತಿಂಗಳು ನಡೆಸಿಕೊಡುವ ಮನ್​ ಕಿ ಬಾತ್​ ಕಾರ್ಯಕ್ರಮವೊಂದರಲ್ಲಿ 2023 ನವೆಂಬರ್​ 27 ರಂದು ವರ್ಷಾ ಅವರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವರ್ಷಾ ಅವರು ಅಲಂಕಾರಿಕ ವಸ್ತುಗಳು ಮತ್ತು ವ್ಯಾನಿಟಿ ಬ್ಯಾಗ್ ನಂತಹ ವಸ್ತುಗಳ ಉತ್ಪಾದನೆ ಮಾಡುತ್ತಾ ಸ್ವಾವಲಂಬಿ ಆಗುವುದರ ಜೊತೆಗೆ ಹಲವರಿಗೆ ಉದ್ಯೋಗವನ್ನೂ ನೀಡಿದ್ದಾರೆ. ವೋಕಲ್ ಫಾರ್ ಲೋಕಲ್​ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sun, 9 June 24

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us