AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಕಾಡಂಚಿನ ಜನರಿಗೆ ಗುಡ್ ನ್ಯೂಸ್; ಜನವನ ಸಾರಿಗೆ ಸೇವೆ ಆರಂಭ

ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಜನರಿಗೆ ಮಲೆ ಮಹದೇಶ್ವರ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ. ನಿರ್ವಹಣೆ ಕೊರತೆಯಿಂದ ನಿಂತು ಹೋಗಿದ್ದ ಜನವನ ಸಾರಿಗೆ ಇಂದಿನಿಂದ ಆರಂಭವಾಗಿದೆ. ಅರಣ್ಯ ಇಲಾಖೆಯಿಂದ ಮಲೆ ಮಹದೇಶ್ವರ ಪ್ರಾಧಿಕಾರಕ್ಕೆ ವಾಹನಗಳ ಹಸ್ತಾಂತರ ಮಾಡಲಾಗಿದ್ದು ಇನ್ನೂ ಮುಂದೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನವನ ಸಾರಿಗೆ ಸೇವೆ ಲಭ್ಯವಾಗಲಿದೆ.

ಮಲೆ ಮಹದೇಶ್ವರ ಕಾಡಂಚಿನ ಜನರಿಗೆ ಗುಡ್ ನ್ಯೂಸ್; ಜನವನ ಸಾರಿಗೆ ಸೇವೆ ಆರಂಭ
ಜನವನ ಸಾರಿಗೆ ಸೇವೆಗೆ ಚಾಲನೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 02, 2023 | 12:13 PM

Share

ಚಾಮರಾಜನಗರ, ನ.02: ಕಾಡಿನ ಪೋಡಿಗಳಲ್ಲಿ ವಾಸ ಮಾಡುವ ಜನರ ಇಷ್ಟು ದಿನದ ಕೂಗಿಗೆ ಈಗ ಜೀವ ಬಂದಂತಾಗಿದೆ. ಜನವನ ಕಾರ್ಯಕ್ರಮವನ್ನ (Janavana Sarige) ಜಾರಿಗೆ ತಂದು ಅರ್ಧಕ್ಕೆ ನಿಲ್ಲಿಸಿದ್ದ ಪ್ರಾಧಿಕಾರ ಮತ್ತೆ ಎಚ್ಚೆತ್ತುಕೊಂಡಿದೆ. ಇಂದು ಅಧಿಕೃತವಾಗಿ ಜನವನ ಯೋಜನಾ ಕಾರ್ಯಕ್ರಮವನ್ನು ಜಾರಿ ಮಾಡಲಾಗಿದೆ. ಕಾಡಂಚಿನ ಜನರಲ್ಲಿ ಈ ಯೋಜನೆ ಮಂದಹಾಸ ಮೂಡಿಸಿದೆ. ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಪೂಜೆ ಸಲ್ಲಿಸುವ ಮೂಲಕ ಜನವನ ಸಾರಿಗೆಗೆ ಚಾಲನೆ ನೀಡಿದ್ದಾರೆ. ಶಾಸಕ ಮಂಜುನಾಥ್, ಡಿಸಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹೋ ಸೇರಿದಂತೆ ಇತರ ಅಧಿಕಾರಿಗಳು ಭಾಗಿಯಾಗಿದ್ದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ವ್ಯಾಪ್ತಿಯಲ್ಲಿ 18ಕ್ಕೂ ಹೆಚ್ಚು ಗ್ರಾಮಗಳಿವೆ. ಈ ಗ್ರಾಮದ ಜನರ ಸ್ಥಿತಿ ಬಹಳ ಶೋಚನೀಯವಾಗಿತ್ತು. ಮಕ್ಕಳು ಶಿಕ್ಷಣ ಪಡೆಯಬೇಕಾದರೆ ಕಾಡು ಪ್ರಾಣಿಗಳ ಭಯದ ನಡುವೆ ಹೆಜ್ಜೆ ಹಾಕುವ ಪರಿಸ್ಥಿತಿಯಿತ್ತು. ಅನೇಕ ಮಕ್ಕಳು ಈ ಭಯಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದಾರೆ. ಇನ್ನು ಪೋಷಕರು ಕೂಡ ಭಯದಿಂದ ಮಕ್ಕಳಿಗೆ ಶಾಲೆ ಬಿಡಿಸಿ ಮನೆಯಲ್ಲಿ ಕೂರಿಸಿದ್ದಾರೆ. ಈ ಗ್ರಾಮಗಳ ಜನರಿಗೆ ಮೂಲಭೂತ ಸೌಕರ್ಯ ಕೂಡ ಮರೀಚಿಕೆ. ಪಡಿತರ ಪಡೆಯಬೇಕಾದರೆ ಹತ್ತಾರು ಕಿ.ಮೀ ಸಾಗಬೇಕು. ಅಲ್ಲಿಂದ ಪಡಿತರ ಹೊತ್ತು ನಡೆದುಕೊಂಡೇ ಮನೆಗೆ ಹೋಗುವ ಪರಿಸ್ಥಿತಿ. ಕಾಡು ಪ್ರಾಣಿಗಳ ದಾಳಿಯಿಂದ ಸತ್ತ ನಿದರ್ಶನ ಕೂಡ ಸಾಕಷ್ಟಿದೆ. ಇದಕ್ಕೆಲ್ಲಾ ಮುಖ್ಯವಾಗಿ ಒಂದು ವೇಳೆ ಆರೋಗ್ಯ ಹದಗೆಟ್ರೆ ಅಂತಹವರ ಪರಿಸ್ಥಿತಿ ಮಾದಪ್ಪನಿಗೆ ಅಚ್ಚು ಮೆಚ್ಚು ಅನ್ನೋ ರೀತಿಯಿತ್ತು.

ಇದನ್ನೂ ಓದಿ: ರಾಯಚೂರು: ದಲಿತ ಮುಖಂಡನ ಬರ್ಬರ ಹತ್ಯೆ ಪ್ರಕರಣ; ಮೂವರ ಬಂಧನ

ಡೋಲಿ ಕಟ್ಟಿಕೊಂಡು ಗ್ರಾಮದ ಒಂದಷ್ಟು ಜನರು ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸುತ್ತಿದ್ದ ಘಟನೆಗಳು ಬಹಳ. ದಾರಿ ಮಧ್ಯೆಯೇ ಗರ್ಬೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡು ಮಗು ಸಾವನ್ನಪ್ಪಿದ್ದ ಘಟನೆ ಕೂಡ ನಡೆದಿದೆ. ಅದೇ ರೀತಿ ರೋಗಿಗಳು ಸಾವನ್ನಪ್ಪಿದ್ದಾರೆ. ನಮಗೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸಿ ಅನ್ನೋ ಕೂಗು ಬಹಳ ವರ್ಷಗಳಿಂದ ಕೇಳಿ ಬಂದಿತ್ತು. ಹೀಗಾಗಿ ಜನರ ಕಷ್ಟಕ್ಕೆ ಸ್ಪಂದಿಸುವ ಕೆಲಸಕ್ಕೆ ಅರಣ್ಯಾಧಿಕಾರಿಗಳು ಮುಂದಾಗಿದ್ದರು. 24*7 ವಾಹನ ಸೌಲಭ್ಯ ಒದಗಿಸಿದ್ದರು. ಆದರೆ ಯೋಜನೆ ಆರಂಭವಾದ ಮೂರು ತಿಂಗಳೊಳಗೆ ನಿರ್ವಹಣೆ ಕೊರತೆಯಿಂದ ಜನವನ ಸಾರಿಗೆ ಸೇವೆ ಸ್ಟಾಪ್ ಆಗಿತ್ತು. ಹೀಗೆ ಅರ್ಧಕ್ಕೆ ನಿಂತಿದ್ದ ಯೋಜನೆಗೆ ಈಗ ಮತ್ತೆ ಮರು ಜೀವ ಬಂದಿದೆ. ಇಂದು ಜನವನ ಸಾರಿಗೆಗೆ ಮತ್ತೆ ಚಾಲನೆ ನೀಡಲಾಗಿದೆ.

janavana sarige starts in male mahadeshwara hills chamarajanagar

ಜನವನ ಸಾರಿಗೆ

ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ಬರ್ತಿದೆ. ಆದರೂ ಕೂಡ ಸ್ಥಳೀಯ ಜನರ ಕೂಗು ಪ್ರಾಧಿಕಾರಕ್ಕೆ ಕೇಳ್ತಿಲ್ವಾ ಎಂದು ಅನೇಕ ಬಾರಿ ಜನ ಆಕ್ರೋಶ ಹೊರಹಾಕಿದ್ದರು. ಇದೀಗಾ ಕಾಡಂಚಿನ ಜನರ ಸೇವೆಗೆ ಮಲೆ ಮಹದೇಶ್ವರ ಪ್ರಾಧಿಕಾರ ಮುಂದಾಗಿದೆ. ನಾಲ್ಕು ವಾಹನಗಳನ್ನು ಪ್ರಾಧಿಕಾರದ ವೆಚ್ಚದಲ್ಲಿ ಜನರಿಗೆ ಸೌಲಭ್ಯ ಒದಗಿಸಲು ತೀರ್ಮಾನಿಸಲಾಗಿದೆ. ಅರಣ್ಯ ಇಲಾಖೆಯಿಂದ ಜನವನ ವಾಹನಗಳನ್ನು ಪ್ರಾಧಿಕಾರವೇ ವಹಿಸಿಕೊಂಡು ಜನರಿಗೆ ಸೇವೆ ಒದಗಿಸಲು ತಯಾರಿ ನಡೆಸಿತ್ತು. ಇಂದು ಈ ಸೇವೆ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು ಜನರಲ್ಲಿ ಮಂದಹಾಸ ಮೂಡಿಸಿದೆ.

ದುರ್ಗಮ ಹಾದಿಯಲ್ಲಿ ಸಂಚಾರ ಮಾಡಲು ಹೆದರುತ್ತಿದ್ದ ಜನರು ಇದೀಗಾ ಜನವನ ಸಾರಿಗೆ ಆರಂಭದಿಂದ ನಿಟ್ಟುಸಿರು ಬಿಡುವಂತಾಗಿದೆ. ಅನಾರೋಗ್ಯಕ್ಕೆ ತುತ್ತಾದವರು, ಶಾಲಾ ಮಕ್ಕಳಿಗೆ ಸೌಲಭ್ಯ ಸಿಕ್ಕಿದಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ