AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟ ಹೆಚ್ಚಿಸುವಂತೆ ಅಬಕಾರಿ ಇಲಾಖೆ ಒತ್ತಡ: ಸರ್ಕಾರದ ನಡೆಗೆ ಸಿಡಿದೆದ್ದ ಬಾರ್ ಮಾಲೀಕರು

ಕೇಂದ್ರ ಸರ್ಕಾರ ಜಿಎಸ್​ಟಿ ಕಡಿತ ಗೊಳಿಸಿದ್ದೇ ತಡ, ಕೆಲ ರಾಜ್ಯ ಸರ್ಕಾರಗಳು ನೀರಿನಿಂದ ಆಚೆ ಬಂದ ಮೀನಿನಂತೆ ವಿಲ ವಿಲನೆ ಒದ್ದಾಡ ತೊಡಗಿವೆ. ಹಣ ಸರಿದೂಗಿಸಲು ಪಡಬಾರದ ಪರಿಪಾಟಲು ಪಡುತ್ತಿವೆ. ಮತ್ತೊಂದೆಡೆ, ಅಬಕಾರಿ ಸುಂಕ ವಿಪರೀತ ಹೆಚ್ಚಳವಾದ ಕಾರಣ ಮದ್ಯ ಹಾಗೂ ಬಿಯರ್ ಮಾರಾಟದಲ್ಲಿ ಭಾರಿ ಕುಸಿತವಾಗಿರುವುದು ಇತ್ತೀಚೆಗೆ ತಿಳಿದುಬಂದಿದೆ. ಇದರ ಪರಿಣಾಮ ಈಗ ಕರ್ನಾಟಕದ ಬಾರ್ ಮಾಲೀಕರ ಹೆಗಲಮೇಲೂ ಬಿದ್ದಿದೆ.

ಮದ್ಯ ಮಾರಾಟ ಹೆಚ್ಚಿಸುವಂತೆ ಅಬಕಾರಿ ಇಲಾಖೆ ಒತ್ತಡ: ಸರ್ಕಾರದ ನಡೆಗೆ ಸಿಡಿದೆದ್ದ ಬಾರ್ ಮಾಲೀಕರು
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 16, 2025 | 11:02 AM

Share

ಚಾಮರಾಜನಗರ, ಅಕ್ಟೋಬರ್ 16: ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್ ಸರ್ಕಾರ (Congress) ಪಂಚ ಗ್ಯಾರಂಟಿಗಳ್ನು ನೀಡಿದೆ. ಮಹಿಳೆಯರಿಗೆ ಬಸ್ ಫ್ರೀ, ಉಚಿತ ವಿದ್ಯುತ್, ತಿಂಗಳಿಗೆ 2 ಸಾವಿರ ರೂ. ಮಹಿಳೆಯರ ಖಾತೆಗೆ ಹಣ ವರ್ಗಾವಣೆ, ಅನ್ನಭಾಗ್ಯ, ಸ್ಕಾಲರ್ ಶಿಪ್ ಎಂದು ಗ್ಯಾರಂಟಿಗಳ ಮೇಲೆ ಗ್ಯಾರಂಟಿಗಳನ್ನು ನೀಡಿದೆ. ಈ ಹಣದುಬ್ಬರ ಸರಿದೂಗಿಸಲು ಬೆಲೆಗಳ ಏರಿಕೆ ಕೂಡ ಮಾಡಿದೆ. ಆದರೆ ಕೇಂದ್ರ ಸರ್ಕಾರ ಜಿಎಸ್​​ಟಿ ಯಾವಾಗ ಕಡಿತ ಮಾಡಿತೋ ಕೆಲ ರಾಜ್ಯದ ಸರ್ಕಾರಗಳು ಒದ್ದಾಡತೊಡಗಿವೆ. ಜಿಎಸ್​ಟಿ ಪರಿಷ್ಕರಣೆಯಿಂದ ಆಗಬಹುದಾದ ನಷ್ಟವನ್ನು ಸರಿದೂಗಿಸಲು ಸರ್ಕಾರ ಈಗ ಅಬಕಾರಿ ಇಲಾಖೆಗೆ (Excise Department) ಸೂಚನೆ ಕೊಟ್ಟಿದ್ದು, ಇಲಾಖೆಯ ಸಿಬ್ಬಂದಿ ಬಾರ್ ಮಾಲೀಕರ ಪ್ರಾಣ ಹಿಂಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಒಂದು ಲೀಟರ್ ಮದ್ಯ ಮಾರಾಟ ಮಾಡುವಲ್ಲಿ 10 ಲೀಟರ್ ಮಾರಾಟ ಮಾಡಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಮೀಟಿಂಗ್ ಮಾಡಿ ಬಾರ್ ಲೈಸೆನ್ಸ್ ಹೊಲ್ಡರ್​ಗಳಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಬಾರ್ ಮಾಲೀಕರು ರಾಜ್ಯ ಸರ್ಕಾರ ಹಾಗೂ ಅಬಕಾರಿ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯದೆ ಇರುವವರನ್ನು ನಾವು ಹೇಗೆ ಕರೆತಂದು ವ್ಯಾಪಾರ ಮಾಡುವುದು? ವರ್ಷದಿಂದ ವರ್ಷಕ್ಕೆ ಸೇಲ್ಸ್ 10 ಪಟ್ಟು ಹೆಚ್ಚು ಮಾಡಿ ಅಂದರೆ ಹೇಗೆ ಸಾಧ್ಯ? ರಾಜ್ಯ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಮದ್ಯ ಮಾರಾಟಗಾರರ ವಿರುದ್ದ ಒತ್ತಡ ಹಾಕುವುದು ಸರಿಯಲ್ಲ ಎಂದು ಸರ್ಕಾರ ಹಾಗೂ ಅಬಕಾರಿ ಇಲಾಖೆ ವಿರುದ್ದ ಹರಿ ಹಾಯ್ದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರಿ ಕುಸಿತ: ಕಾರಣ ಏನು ಗೊತ್ತೇ?

ಏನೇ ಹೇಳಿ, ಮದ್ಯಮುಕ್ತ ಹಾಗೂ ತಂಬಾಕುಮುಕ್ತ ರಾಜ್ಯ ಮಾಡುತ್ತೇವೆ ಎಂದು ಆಗಾಗ ಬಿಲ್ಡಪ್ ಕೊಡುವ ಸರ್ಕಾರಗಳು ಈಗ ಅದನ್ನೇ ಹಣದ ಆಸೆಗಾಗಿ ಹಿಂಬಾಗಿಲಿನಿಂದ ಬೆಂಬಲಿಸಿ ದ್ವಂದ್ವ ನೀತಿ ಪ್ರದರ್ಶಿಸುತ್ತಿವೆ. ಇದೇ ರೀತಿ ಒತ್ತಡ ಮುಂದುವರಿದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ನಡೆಸುವ ಎಚ್ಚರಿಕೆಯನ್ನೂ ಬಾರ್ ಮಾಲೀಕರು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!