ಏಪ್ರಿಲ್ 9ರಂದು ಪ್ರಧಾನಿ ಕರ್ನಾಟಕ ಪ್ರವಾಸ; ಬಂಡೀಪುರದಲ್ಲಿ ಸಫಾರಿ ನಡೆಸಲಿರುವ ನರೇಂದ್ರ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಮೇಲಿಂದ ಮೇಲೆ ಆಗಮಿಸಿ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.

ಏಪ್ರಿಲ್ 9ರಂದು ಪ್ರಧಾನಿ ಕರ್ನಾಟಕ ಪ್ರವಾಸ; ಬಂಡೀಪುರದಲ್ಲಿ ಸಫಾರಿ ನಡೆಸಲಿರುವ ನರೇಂದ್ರ ಮೋದಿ
ಏಪ್ರಿಲ್ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿರುವ ಪ್ರಧಾನಿ ಮೋದಿ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on:Mar 31, 2023 | 8:09 AM

ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಆರು ಬಾರಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಏಳನೇ ಬಾರಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಬಾರಿಯ ವಿಶೇಷತೆ ಎಂದರೆ ಪ್ರಧಾನಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಹೌದು, ಹುಲಿ ಯೋಜನೆಗೆ (Project Tiger) 50 ವರ್ಷ ತುಂಬಿದ ಹಿನ್ನೆಲೆ ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಫಾರಿ ನಂತರ ಮೋದಿ ಅವರು ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ (ಮಾರ್ಚ್ 16) ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಸೇರಿದಂತೆ ಒಟ್ಟು 16,000 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಚುನಾವಣೆ ದಿನಾಂಕ ಹಾಗೂ ನೀತಿ ಸಂಹಿತಿ ಜಾರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಚುನಾವಣೆ ದೃಷ್ಟಿಯಲ್ಲಿ ಜನರನ್ನು ಯಾವ ರೀತಿ ಮೋಡಿ ಮಾಡಲಿದ್ದಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: PM Narendra Modi: ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿದ ಮೋದಿ

ದೇಶದಲ್ಲೇ ಮೊದಲು ಘೋಷಣೆಯಾದ 9 ಹುಲಿಯೋಜನೆಗಳ ಪೈಕಿ ಬಂಡೀಪುರವು ಒಂದು. ಬಂಡೀಪುರವನ್ನು 1974 ರಲ್ಲಿ ಪ್ರಾಜೆಕ್ಟ್ ಟೈಗರ್ ಅಡಿಯಲ್ಲಿ ಹುಲಿಮೀಸಲು ಪ್ರದೇಶವಾನ್ನಾಗಿ ಮಾಡಲಾಗಿದೆ. ಈ ಉದ್ಯಾನವನವು ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆ ತಾಲೂಕಿನಲ್ಲಿ ಇದೆ. ಮೈಸೂರು ನಗರದಿಂದ 80 ಕಿಲೋಮೀಟರ್ ದೂರದಲ್ಲಿ ಊಟಿಯ ಪ್ರಮುಖ ಪ್ರವಾಸಿ ತಾಣವಾಗಿದೆ. ಹೀಗಾಗಿ ಇಲ್ಲಿಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಉದ್ಯಾನವು 874 ಚದರಕಿಲೋಮೀಟರ್ (337 ಚದರಮೈಲಿ) ಪ್ರದೇಶವನ್ನು ಹೊಂದಿದೆ. ಇದು ಭಾರತದ ಅಳಿವಿನಂಚಿನಲ್ಲಿರುವ ವನ್ಯಜೀವಿಗಳ ಹಲವಾರು ಜಾತಿಗಳನ್ನು ರಕ್ಷಿಸುತ್ತದೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 am, Fri, 31 March 23

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್