ಓರ್ವ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ಟರೆ ಬೊಕ್ಕಸಕ್ಕೆ ಹೊರೆ: ಆಹಾರ ಸಚಿವ ಉಮೇಶ್ ಕತ್ತಿ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆಗೆ ಪ್ರತಿರೋಧ ವ್ಯಕ್ತವಾಗಿದ್ದು, ರೈತ ಸಂಘದ ಕಾರ್ಯಕರ್ತರು ತೆರಕಣಾಂಬಿಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

ಓರ್ವ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು,  10 ಕೆಜಿ ಕೊಟ್ಟರೆ ಬೊಕ್ಕಸಕ್ಕೆ ಹೊರೆ: ಆಹಾರ ಸಚಿವ ಉಮೇಶ್ ಕತ್ತಿ
ಉಮೇಶ್ ಕತ್ತಿ
Follow us
TV9 Web
| Updated By: guruganesh bhat

Updated on:Aug 26, 2021 | 8:30 PM

ಚಾಮರಾಜನಗರ: ಆಹಾರ ಇಲಾಖೆಯಲ್ಲಿ 4 ಕೋಟಿ 1 ಲಕ್ಷ ಫಲಾನುಭವಿಗಳಿದ್ದು, ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಲುತ್ತದೆ ಎಂದು ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ನಾವೀಗ ಆಹಾರ ಭದ್ರತೆ ಯೋಜನೆಯಲ್ಲಿ‌ 5 ಕೆಜಿ ಅಕ್ಕಿ ಕೊಡುತ್ತೇವೆ. ಸಿದ್ದರಾಮಯ್ಯ ಪದೇಪದೆ 10 ಕೆಜಿ ಅಕ್ಕಿ ಕೊಡುತ್ತೇವೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಹೆಚ್ಚುವರಿ ಆಹಾರ ಧಾನ್ಯ ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಅವರು ಹೇಳಿದರು.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮ ಹೇಳಿಕೆಗೆ ಪ್ರತಿರೋಧ ವ್ಯಕ್ತವಾಗಿದ್ದು, ರೈತ ಸಂಘದ ಕಾರ್ಯಕರ್ತರು ತೆರಕಣಾಂಬಿಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: 

ಅನ್ಯಾಯ ಮುಂದುವರೆದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು, ನಾನು ಕಳಂಕ ರಹಿತ: ಉಮೇಶ ಕತ್ತಿ

Kabul Blast: ಕಾಬೂಲ್ ವಿಮಾನ ನಿಲ್ದಾಣದ ಬಳಿ ಪ್ರಬಲ ಬಾಂಬ್​ ಸ್ಫೋಟ

(Karnataka Food Minister Umesh katti says 5kg of rice for 1 month is enough for one person 10kg is a burden)

Published On - 7:59 pm, Thu, 26 August 21