ಓರ್ವ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಈ ಹೇಳಿಕೆಗೆ ನಾನು ಬದ್ಧ: ಆಹಾರ ಸಚಿವ ಉಮೇಶ್ ಕತ್ತಿ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಂತಹ ಘಟನೆಗಳು ಸಮಾಜದಲ್ಲಿ ನಡೆಯುತ್ತಲೇ ಇರುತ್ತವೆ. ಇಂತಹ ಘಟನೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಉಡಾಫೆ ಹೇಳಿಕೆ ನೀಡಿದ್ದಾರೆ.

ಓರ್ವ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಈ ಹೇಳಿಕೆಗೆ ನಾನು ಬದ್ಧ: ಆಹಾರ ಸಚಿವ ಉಮೇಶ್ ಕತ್ತಿ
ಉಮೇಶ್ ಕತ್ತಿ
Follow us
TV9 Web
| Updated By: guruganesh bhat

Updated on: Aug 27, 2021 | 7:30 PM

ಚಾಮರಾಜನಗರ; ಓರ್ವ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, ನಿನ್ನೆ ನೀಡಿದ್ದ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಒಂದು ತಿಂಗಳಿಗೆ ಒಬ್ಬ ವ್ಯಕ್ತಿಗೆ ಐದು ಕೆಜಿ ಅಕ್ಕಿ ಸಾಕು. ಜನರು ರೊಟ್ಟಿ, ಚಪಾತಿ, ಬೇಳೆ ತಿಂದು ಅನ್ನ ತಿನ್ನುತ್ತಾರೆ. ನಾನು ಕೂಡ 2 ಚಪಾತಿ ತಿಂದು ಸ್ವಲ್ಪ ಅನ್ನ ತಿನ್ನುತ್ತೇನೆ. ಸದ್ಯ ನಾವೀಗ 5 ಕೆಜಿ ಕೊಡ್ತಿದ್ದೇವೆ, ಅದನ್ನೇ ಮುಂದುವರೆಸುತ್ತೇವೆ ಎಂದು ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾನೆ’ ಎಂದ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿಯೇ ಸಂಬೋಧಿಸಿ ಮಾತನಾಡಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಂತಹ ಘಟನೆಗಳು ಸಮಾಜದಲ್ಲಿ ನಡೆಯುತ್ತಲೇ ಇರುತ್ತವೆ. ಇಂತಹ ಘಟನೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಉಡಾಫೆ ಹೇಳಿಕೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿ ಗೃಹ ಸಚಿವರೇ ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ನಾನೇನು ಮಾಡಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ವಿವಾದಕ್ಕೆ ಕಾರಣವಾಗಿದ್ದ ಆಹಾರ ಸಚಿವರ ಹೇಳಿಕೆ ಆಹಾರ ಇಲಾಖೆಯಲ್ಲಿ 4 ಕೋಟಿ 1 ಲಕ್ಷ ಫಲಾನುಭವಿಗಳಿದ್ದು, ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಲುತ್ತದೆ ಎಂದು ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮ ಹೇಳಿಕೆ ನೀಡಿದ್ದರು. ನಾವೀಗ ಆಹಾರ ಭದ್ರತೆ ಯೋಜನೆಯಲ್ಲಿ‌ 5 ಕೆಜಿ ಅಕ್ಕಿ ಕೊಡುತ್ತೇವೆ. ಸಿದ್ದರಾಮಯ್ಯ ಪದೇಪದೆ 10 ಕೆಜಿ ಅಕ್ಕಿ ಕೊಡುತ್ತೇವೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಹೆಚ್ಚುವರಿ ಆಹಾರ ಧಾನ್ಯ ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಅವರು ಹೇಳಿದ್ದರು.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮ ಹೇಳಿಕೆಗೆ ಪ್ರತಿರೋಧ ವ್ಯಕ್ತವಾಗಿದ್ದು, ರೈತ ಸಂಘದ ಕಾರ್ಯಕರ್ತರು ತೆರಕಣಾಂಬಿಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: 

ಓರ್ವ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ಟರೆ ಬೊಕ್ಕಸಕ್ಕೆ ಹೊರೆ: ಆಹಾರ ಸಚಿವ ಉಮೇಶ್ ಕತ್ತಿ

(Karnataka Food Minister Umesh Katti says 5kg per month is enough for a person I adhere to this statement)