ದೀಪಾವಳಿ ಹಬ್ಬಕ್ಕೆ ಗಿಫ್ಟ್; ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶಕ್ಕೆ ಅನುಮತಿ

ಈ ಮೊದಲು ಮಲೆಮಹದೇಶ್ವರ ಬೆಟ್ಟದ ಬಳಿ ಇರುವ ನಾಗಮಲೆಗೆ ಮುಕ್ತ ಪ್ರವೇಶ ಇರಲಿಲ್ಲ. ದಿನಕ್ಕೆ ಕೇವಲ 200 ಜನರಿಗೆ ಮಾತ್ರ ಅನುಮತಿ ನೀಡಲಾಗುತ್ತಿತ್ತು. ಆನ್​ಲೈನ್​ನಲ್ಲಿ ಹೆಸರು ನೋಂದಾಯಿಸಿಕೊಂಡು, 200 ರೂ. ಶುಲ್ಕ ಪಾವತಿಸಿ ಈ ಬೆಟ್ಟಕ್ಕೆ ತೆರಳಬೇಕಿತ್ತು.

ದೀಪಾವಳಿ ಹಬ್ಬಕ್ಕೆ ಗಿಫ್ಟ್; ಚಾಮರಾಜನಗರದ ನಾಗಮಲೆಗೆ ಉಚಿತ ಪ್ರವೇಶಕ್ಕೆ ಅನುಮತಿ
ನಾಗಮಲೆ
Edited By:

Updated on: Nov 01, 2024 | 10:52 AM

ಹನೂರು: ಚಾಮರಾಜನಗರ ಜಿಲ್ಲೆಯ ಹನೂರಿನ ನಾಗಮಲೆಗೆ ತೆರಳುವ ಮಾದಪ್ಪನ ಭಕ್ತರಿಗೆ ಕರ್ನಾಟಕ ಸರ್ಕಾರ ಒಳ್ಳೆಯ ಸುದ್ದಿ ನೀಡಿದೆ. ದೀಪಾವಳಿ ಹಬ್ಬಕ್ಕೆ ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ನಾಗಮಲೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಷ್ಟು ದಿನ ಆನ್ ಲೈನ್​ನಲ್ಲಿ ನೋಂದಣಿ ಮಾಡಿಸಿಕೊಂಡು 200 ರೂ. ಶೂಲ್ಕ ಪಾವತಿಸಬೇಕಿತ್ತು. ಆದರೆ, ಇನ್ಮುಂದೆ ದೀಪಾವಳಿ, ಶಿವರಾತ್ರಿ ಹಾಗೂ ಯುಗಾದಿ ಹಬ್ಬಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುವುದು.

ಮಾದಪ್ಪನ ಭಕ್ತರಿಗೆ ಮಾತ್ರವಲ್ಲದೆ ಚಾರಣ ಪ್ರಿಯರಿಗೆ ಕೂಡ ನಾಗಮಲೆ ಅತ್ಯಂತ ಇಷ್ಟವಾದ ಸ್ಥಳ. ಇಲ್ಲಿಗೆ ತೆರಳಲು ಆನ್​ಲೈನ್​ನಲ್ಲಿ ನೋಂದಣಿ ಮಾಡಲು ಪರದಾಡುತ್ತಿದ್ದ ಮಾದಪ್ಪನ ಭಕ್ತರು ಈಗ ಉಚಿತವಾಗಿ ಪ್ರವೇಶಿಸಬಹುದು. ಅರಣ್ಯ ಇಲಾಖೆ ಪ್ರತಿದಿನ ಕೇವಲ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಿತ್ತು. ಇನ್ಮುಂದೆ ಪ್ರಮುಖ ಮೂರು ಹಬ್ಬಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಶಿವರಾತ್ರಿ ಜಾತ್ರೆ: ಮಲೆಮಹದೇಶ್ವರ ದೇಗುಲದಲ್ಲಿ ಬರೋಬ್ಬರಿ ಆದಾಯ ಸಂಗ್ರಹ, ಇಲ್ಲಿದೆ ನೋಡಿ ವಿವರ

ಅರಣ್ಯ ಇಲಾಖೆಯ ನಡೆಯಿಂದ ಮಾದಪ್ಪನ ಭಕ್ತರು ಖುಷಿಯಾಗಿದ್ದಾರೆ. ಅಂದಹಾಗೆ, ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ನಾಗಮಲೆ ಮಲೆಮಹದೇಶ್ವರ ಬೆಟ್ಟದಿಂದ 15 ಕಿ.ಮೀ. ದೂರದಲ್ಲಿದೆ. 77 ಮಲೆಗಳ ನಾಡು ಎಂದು ಹೆಸರಾಗಿರುವ ಮಲೆಮಹದೇಶ್ವರ ಕ್ಷೇತ್ರದಲ್ಲಿ ನಾಗಮಲೆ ಕೂಡ ಒಂದು ಪ್ರಮುಖ ಆಧ್ಯಾತ್ಮಕ ಸ್ಥಳವಾಗಿದೆ.

ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ: ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ

ನಾಗಮಲೆಯಲ್ಲಿ ಮಹದೇಶ್ವರ ಸ್ವಾಮಿಯ ವಿಗ್ರಹ ಕಲ್ಲಿನ ರೂಪದಲ್ಲಿದೆ. ಅದಕ್ಕೆ ಹಾವಿನ ಹೆಡೆಯ ಕಲ್ಲಿನ ಆಕೃತಿ ನೆರಳಾಗಿದೆ. ಬೆಟ್ಟಗಳ ಮೇಲಿರುವ ಈ ಕ್ಷೇತ್ರಕ್ಕೆ ಹೋಗಲು ದೊಡ್ಡ ದಾರಿಯಿಲ್ಲ. ಕಾಲುದಾರಿಯಲ್ಲೇ ಬೆಟ್ಟ ಹತ್ತಿ ಹೋಗಬೇಕು. ಈ ಬೆಟ್ಟ ಹತ್ತುವುದು ಸುಲಭವೇನಲ್ಲ. ಕಡಿದಾದ ದಾರಿಯಲ್ಲಿ ಬೆಟ್ಟವೇರಲು ಅನೇಕ ಚಾರಣಿಗರು ಕೂಡ ಬರುತ್ತಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us