‘ಕೈ’ ಕಡೆ ವಾಲಿದ ಶ್ರೀನಿವಾಸ್ ಪ್ರಸಾದ್ ರಿಂದ ಬಿಜೆಪಿಗೆ ಆಗುವ ಲಾಭ-ನಷ್ಟವೇನು?

ದಿನ ಕಳೆದಂತೆ ಲೋಕಸಭಾ ಚುನಾವಣಾ ಕಾವು ರಂಗೇರುತ್ತಿದೆ. ಚಾಮರಾಜನಗರವನ್ನ ಗೆಲ್ಲಲೇ ಬೇಕೆಂದು ಪಣ ತೊಟ್ಟಿರುವ ಸಿಎಂಗೆ ಶ್ರೀನಿವಾಸ್ ಪ್ರಸಾದ್​ರ ಬೆಂಬಲ ದೊಡ್ಡ ಶಕ್ತಿಯನ್ನ ಕೊಟ್ಟಿದೆ. ಹಾಗಾದರೆ ಶ್ರೀನಿವಾಸ್ ಪ್ರಸಾದ್​ರಿಂದ ಎರಡೂ ಪಕ್ಷಗಳಿಗಾಗುವ ಲಾಭ-ನಷ್ಟ ಆದರೂ ಏನು ಅಂತೀರಾ? ಈ ಸ್ಟೋರಿ ಓದಿ.

‘ಕೈ’ ಕಡೆ ವಾಲಿದ ಶ್ರೀನಿವಾಸ್ ಪ್ರಸಾದ್ ರಿಂದ ಬಿಜೆಪಿಗೆ ಆಗುವ ಲಾಭ-ನಷ್ಟವೇನು?
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 16, 2024 | 8:52 PM

ಚಾಮರಾಜನಗರ, ಏ.16: ದಿನ ಕಳೆದಂತೆ ಲೋಕಸಭಾ ಚುನಾವಣಾ(Lok sabha election) ಕಾವು ರಂಗೇರುತ್ತಿದೆ. ಶತಾಯ ಗತಾಯ ಗೆಲುವು ಸಾಧಿಸಲೇ ಬೇಕೆಂದು ಕಾಂಗ್ರೆಸ್​ ಪಣ ತೊಟ್ಟು ನಿಂತಿದ್ದು, ಈಗಾಗಲೇ ಆಪರೇಷನ್ ಮೇಲೆ ಆಪರೇಷನ್ ಮಾಡಿ ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್​ರ(Srinivas Prasad) ಕುಟುಂಬ ವರ್ಗದವರಿಗೆ ಟ್ಯಾಕಲ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರೆ, ಮತ್ತೊಂದೆಡೆ ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಶ್ರೀನಿವಾಸ್ ಪ್ರಸಾದ್​ರ ಸಹೋದರ ಪ್ರಚಾರ ನಡೆಸಲು ಆರಂಭಿಸಿದ್ದು, ಈಗ ಬಿಜೆಪಿ ಪಾಳಯದಲ್ಲಿ ನಡುಕ ಎದುರಾಗಿದೆ.

ಇನ್ನು ಕಳೆದ ಬಾರಿ ದ್ರುವ ನಾರಾಯಣ್​ರ ವಿರುದ್ದ ಸ್ಪರ್ಧೆ ಮಾಡಿದ್ದ ಬಿಜೆಪಿ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್, ಕೇವಲ ಒಂದುವರೆ ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು ಬಿಜೆಪಿ ಪಕ್ಷಕ್ಕೆ ಬಂದು ಅಧಿಕಾರ ಅನುಭವಿಸಿ ಈಗ ಕೊನೆ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಮಾಡುತ್ತಿದ್ದಾರೆಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಾರೆ ಪ್ರತಿಷ್ಠೆಯ ಕಣವಾದ ಚಾಮರಾಜನಗರವನ್ನ ಗೆಲ್ಲಲೇ ಬೇಕೆಂದು ಪಣ ತೊಟ್ಟು ನಿಂತಿರುವ ಸಿದ್ದರಾಮಯ್ಯಗೆ, ಇತ್ತ ಲಿಂಗಾಯತ, ಒಕ್ಕಲಿಗ ಅಸ್ತ್ರ ಬಳಸುವುದಕ್ಕೆ ಉಭಯ ನಾಯಕರು ಮುಂದಾಗಿದ್ದು, ಇದು ಕೈ ನಾಯಕರಲ್ಲಿಯೂ ಭಯ ಸೃಷ್ಠಿಸಿದೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ

ಮೊನ್ನೆಯಷ್ಟೇ ಬಿಎಸ್​ ಯಡಿಯೂರಪ್ಪನವರು ಶ್ರೀನಿವಾಸ್ ಪ್ರಸಾದ್ ಮನೆಗೆ ತೆರಳಿ ಮೋದಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದರು. ಆದರೆ, ಆರೋಗ್ಯದ ನೆಪ ಹೇಳಿ ಕಾರ್ಯಕ್ರಮಕ್ಕೆ ಬರಲ್ಲವೆಂದು ಹೇಳಿದ್ದರು. ಒಟ್ಟಾರೆ ದಿನ ಕಳೆದಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟಫ್ ಫೈಟ್ ಇದ್ದು, ಮತದಾರಪ್ರಭು ಯಾರ ಕೈ ಹಿಡಿಯುತ್ತಾನೊ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Published On - 8:49 pm, Tue, 16 April 24

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್