ಚಾಮರಾಜನಗರ, ಆಗಸ್ಟ್ 18: ಕೊಳ್ಳೇಗಾಲದ (Kollegala) ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ವಾಸವಾಗಿದ್ದ ದಂಪತಿ (Couple) ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗೇಶ್ (56) ಪತ್ನಿ ಸತ್ಯಲಕ್ಷ್ಮೀ (46) ಮೃತ ದುರ್ದೈವಿಗಳು. ದಂಪತಿ ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ (ಆ.17) ರಂದು ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಂಪತಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ತುಮಕೂರು: ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಸಂಭವಿಸಿದೆ. ಅನಿಲ್ ಕುಮಾರ್ (29), ಪುಟ್ಟರಾಜು (35) ಮೃತ ದುರ್ದೈವಿಗಳು. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಲಾರಿಗೆ ಹಿಬ್ಬಂದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿದ್ದ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗೆ ರಾಂಪುರ ಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಕೇರಳ ವಯನಾಡು ಗುಡ್ಡ ಕುಸಿತದಿಂದ ಪಾರಾಗಿ, ಮೂವರನ್ನ ರಕ್ಷಿಸಿದ ಕನ್ನಡಿಗನ ಸಾಹಸ ಕಥೆ ಇಲ್ಲಿದೆ
ಮೈಸೂರು: ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ಚಿರತೆ ದಾಳಿಯಲ್ಲಿ ಹಸು ಮೃತಪಟ್ಟಿದೆ. ರೈತ ಮಹೇಶ್ ಎಂಬುವರ ಜಮೀನಿನಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿದೆ. ಚಿರತೆ ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ