ಕೊಳ್ಳೇಗಾಲ: ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಭಾರಿ ಗಲಾಟೆ, ಚಾಕುವಿನಿಂದ ಇರಿದು ಮರ್ಮಾಂಗಕ್ಕೆ ಒದ್ದು ಹಲ್ಲೆ

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನಾಭರಣದ ವಿಚಾರವಾಗಿ ವಧು-ವರರ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. 100 ಗ್ರಾಂ ಚಿನ್ನದ ಬೇಡಿಕೆ ಈಡೇರದಿದ್ದಕ್ಕೆ ವಧುವಿನ ಕಡೆಯವರು ವರನ ಸಂಬಂಧಿಕರಿಗೆ ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದ ಮದುವೆ ಮನೆ ರಣಾಂಗಣವಾಗಿದೆ.

ಕೊಳ್ಳೇಗಾಲ: ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಭಾರಿ ಗಲಾಟೆ, ಚಾಕುವಿನಿಂದ ಇರಿದು ಮರ್ಮಾಂಗಕ್ಕೆ ಒದ್ದು ಹಲ್ಲೆ
ಗಲಾಟೆ ನಡೆದ ಆರ್​ಎಸ್ ಫಂಕ್ಷನ್ ಹಾಲ್‌ ಹಾಗೂ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿರುವುದು
Image Credit source: tv9
Edited By:

Updated on: Apr 29, 2026 | 2:01 PM

ಚಾಮರಾಜನಗರ, ಏಪ್ರಿಲ್ 29: ಮದುವೆ (Marriage) ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಕೊಳ್ಳೇಗಾಲದ ಆರ್​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ. ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಲಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲದ ಆರ್​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದ್ದೇನು?

ಮುದಾಸಿರ್ ಮತ್ತು ಗುಲ್ನಾಜ್ ಭಾನು ಎಂಬವರ ವಿವಾಹ ಇಂದು (ಏಪ್ರಿಲ್ 29) ನಿಶ್ಚಯವಾಗಿತ್ತು. ಆದರೆ ಮಂಗಳವಾರ ರಾತ್ರಿ ನಡೆದ ಅರಶಿಣ ಶಾಸ್ತ್ರದ ವೇಳೆ ವರನ ಕಡೆಯವರು ಒಂದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ವಧುವಿನ ಕುಟುಂಬಸ್ಥರು ತಕರಾರು ತೆಗೆದಿದ್ದರು. ಈ ಮನಸ್ಥಾಪದ ನಡುವೆಯೇ ಚಿನ್ನಾಭರಣದ ವಿಚಾರ ಮುನ್ನೆಲೆಗೆ ಬಂದಿದೆ. ವಧುವಿನ ಕಡೆಯವರು 100 ಗ್ರಾಂ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ವರನ ಕಡೆಯವರು ಕೇವಲ 30 ಗ್ರಾಂ ಚಿನ್ನ ತಂದಿದ್ದರು. ಇದರಿಂದ ಆಕ್ರೋಶಗೊಂಡ ವಧುವಿನ ಕುಟುಂಬಸ್ಥರು ಮದುವೆಯೇ ಬೇಡ ಎಂದು ಗಲಾಟೆ ಆರಂಭಿಸಿದ್ದಾರೆ.

ಮರ್ಮಾಂಗಕ್ಕೆ ಒದ್ದು ಚಾಕು ಇರಿತ

ಬುಧವಾರ ಮುಂಜಾನೆ ವರನ ಪರವಾಗಿ ಸಂಬಂಧಿ ಮೊಹಮ್ಮದ್ ಕೈಸರ್ ರಾಜಿ ಮಾತುಕತೆಗೆ ತೆರಳಿದ್ದಾರೆ. ಈ ವೇಳೆ ತಮಿಳುನಾಡಿನಿಂದ ಬಂದಿದ್ದ ವಧುವಿನ ಸಂಬಂಧಿಕರು ರೊಚ್ಚಿಗೆದ್ದು ಕೈಸರ್ ಅವರ ಮರ್ಮಾಂಗಕ್ಕೆ ಒದ್ದು, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯೆಬ್ ಹಾಗೂ ವಧುವಿನ ಕಡೆಯ ಫೈರೋಜ್ ಖಾನ್, ಅಬ್ದುಲ್ ವಾಹೀದ್ ಮತ್ತು ಅಬ್ದುಲ್ ಆರೀಫ್ ಮೇಲೂ ಹಲ್ಲೆ ನಡೆದಿದೆ.

ಇದನ್ನೂ ಓದಿ: ನಗರಸಭೆ ಅಧಿಕಾರಿಗಳ ಸುಳ್ಳು ಹೇಳಿಕೆ ಡಿಸಿ ಎದುರೇ ಬಯಲು: ಕಳ್ಳಾಟ ತಿಳಿಯುತ್ತಿದ್ದಂತೆ TV9 ಕ್ಯಾಮರಾಮ್ಯಾನ್ ಮೇಲೆ ಅಧಿಕಾರಿ ದರ್ಪ

ಗಾಯಾಳುಗಳಿಗೆ ಮೊದಲು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಹಾಗೂ ಚಾಮರಾಜನಗರದ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us