AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳ್ಳೇಗಾಲ ರೆಸಾರ್ಟ್​ನಲ್ಲಿ ನಡೀತು ಡ್ರಗ್ಸ್ ಪಾರ್ಟಿ; ಗಾಂಜಾ, ಚರಸ್ ಸೇವಿಸಿ ಮೋಜುಮಸ್ತಿಯಲ್ಲಿದ್ದವರು ಪೊಲೀಸ್ ಬಲೆಗೆ!

ಚಾಮರಾಜನಗರದ ಕೊಳ್ಳೇಗಾಲದಲ್ಲಿ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಪೊಲೀಸರ ದಾಳಿ ನಡೆದಿದೆ. ಫಯಾಜ್ ಖಾನ್ ರೆಸಾರ್ಟ್‌ನಲ್ಲಿ 50ಕ್ಕೂ ಹೆಚ್ಚು ಮಂದಿ ಸೇರಿ ಗಾಂಜಾ, ಚರಸ್ ಸೇವಿಸಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ 15 ಮಂದಿ ಡ್ರಗ್ಸ್ ಸೇವನೆ ದೃಢಪಟ್ಟಿದ್ದು, ತನಿಖೆ ಮುಂದುವರಿದಿದೆ. ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.

ಕೊಳ್ಳೇಗಾಲ ರೆಸಾರ್ಟ್​ನಲ್ಲಿ ನಡೀತು ಡ್ರಗ್ಸ್ ಪಾರ್ಟಿ; ಗಾಂಜಾ, ಚರಸ್ ಸೇವಿಸಿ ಮೋಜುಮಸ್ತಿಯಲ್ಲಿದ್ದವರು ಪೊಲೀಸ್ ಬಲೆಗೆ!
ಕೊಳ್ಳೇಗಾಲ ರೆಸಾರ್ಟ್​ನಲ್ಲಿ ನಡೀತು ಡ್ರಗ್ಸ್ ಪಾರ್ಟಿImage Credit source: deccanherald
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Apr 04, 2026 | 11:27 AM

Share

ಚಾಮರಾಜನಗರ, ಏಪ್ರಿಲ್ 04: ಜಿಲ್ಲೆಯ ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ (Drugs Party) ಪ್ರಕರಣ ಸಂಚಲನ ಮೂಡಿಸಿದೆ. ಬೆಂಗಳೂರು ಮೂಲದ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪಾರ್ಟಿ ಪೊಲೀಸರ ದಾಳಿ ವೇಳೆ ಬಯಲಾಗಿದೆ. ಜಹೀರ್ ಜನ್ಮದಿನದ ಅಂಗವಾಗಿ ವಿಶೇಷವಾಗಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢ

ಪಾರ್ಟಿಯಲ್ಲಿ ಭಾಗಿಯಾದವರು ಗಾಂಜಾ ಹಾಗೂ ಚರಸ್ ಸೇವಿಸಿ ಮೋಜುಮಸ್ತಿಯಲ್ಲಿ ತೊಡಗಿದ್ದರು. ಬಳಿಕ ಪೊಲೀಸರು ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ 15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಪಾರ್ಟಿ ಕೊಳ್ಳೇಗಾಲದ ಎ1 ಕಾಂಟ್ರಾಕ್ಟರ್ ಫಯಾಜ್ ಖಾನ್ ಅವರ ರೆಸಾರ್ಟ್‌ನಲ್ಲಿ ನಡೆದಿದ್ದು, ಈ ವಿಚಾರ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ. ಫಯಾಜ್ ಖಾನ್ ಪ್ರಭಾವಿ ರಾಜಕೀಯ ಸಂಪರ್ಕ ಹೊಂದಿರುವ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ನಾಯಕರ ಆಪ್ತನೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಪಾರ್ಟಿಯಲ್ಲಿ ಜಹೀರ್ ಕುಟುಂಬ ಸದಸ್ಯರೂ ಭಾಗಿಯಾಗಿದ್ದರೆಂದು ಮೂಲಗಳು ತಿಳಿಸಿವೆ. ಮಹಿಳೆಯರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಲೇಡಿ ಕಾನ್ಸ್ಟೇಬಲ್‌ಗಳು ವಿಚಾರಣೆ ಮುಂದುವರಿಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳನ್ನು ಕೊಳ್ಳೇಗಾಲ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಇನ್ನಷ್ಟು ಮಾಹಿತಿಗಾಗಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ