ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗ, ರವಿಶಂಕರ್ ಆಶ್ರಮದ ಬಳಿ ಕಾನ್ಶ್ ಫೌಂಡೇಶನ್‌ನಲ್ಲಿ ಅಂತ್ಯಕ್ರಿಯೆ

ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್‌ನಲ್ಲಿ ಶಾಸಕ ಎನ್.ಮಹೇಶ್‌ರ ಪತ್ನಿ ವಿಜಯಾ ಮಹೇಶ್ ಅಂತ್ಯಕ್ರಿಯೆ ನೆರವೇರಲಿದೆ.

ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗ, ರವಿಶಂಕರ್ ಆಶ್ರಮದ ಬಳಿ ಕಾನ್ಶ್ ಫೌಂಡೇಶನ್‌ನಲ್ಲಿ ಅಂತ್ಯಕ್ರಿಯೆ
ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ ಪತ್ನಿ ವಿಜಯಾ ಮಹೇಶ್

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಮಹೇಶ್(66) ತಡರಾತ್ರಿ 11ಗಂಟೆ ವೇಳೆಗೆ ನಿಧನರಾಗಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್‌ನಲ್ಲಿ ಶಾಸಕ ಎನ್.ಮಹೇಶ್‌ರ ಪತ್ನಿ ವಿಜಯಾ ಮಹೇಶ್ ಅಂತ್ಯಕ್ರಿಯೆ ನೆರವೇರಲಿದೆ.

ಶಾಸಕ ಎನ್.ಮಹೇಶ್‌ ಮತ್ತು ವಿಜಯಾ ಇಬ್ಬರದ್ದು ಲವ್ ಕಂ ಅರೇಂಜ್ ಮ್ಯಾರೇಜ್. ಇವರಿಬ್ಬರು ಒಂದೇ ಕಡೆ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಪ್ರೀತಿ ಹುಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಸುಮಾರು 37 ವರ್ಷಗಳ ಸುಖಕರ ದಾಂಪತ್ಯ ಜೀವನ ನಡೆಸಿದ್ದಾರೆ. ವಿಜಯ ಮೂಲತಃ ಕನಕಪುರದವರು. ಮೈಸೂರಿನ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರಿಗೆ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿತ್ತು.ಬೆಂಗಳೂರಿನ ಅಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ತಡರಾತ್ರಿ 11ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಕಳೆದು ಒಂದು ವರ್ಷದ ಹಿಂದೆಯಷ್ಟೇ ಮಗನಿಗೆ ಮದುವೆ ಮಾಡಲಾಗಿತ್ತು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಶಾಸಕ ಎನ್. ಮಹೇಶ್ (N Mahesh) ಇತ್ತೀಚೆಗಷ್ಟೆ ಬಿಜೆಪಿ ಪಕ್ಷಕ್ಕೆ (Karnataka BJP) ಸೇರ್ಪಡೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎನ್. ಮಹೇಶ್ ಗೆಲುವು ಸಾಧಿಸಿದ್ದರು. ಆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಬಿಎಸ್ಪಿ ಮೈತ್ರಿ ಮಾಡಿಕೊಂಡಿತ್ತು. ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಬಿಎಸ್ಪಿಯಿಂದ ಎನ್. ಮಹೇಶ್ ಶಾಸಕರಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದರು.

ಅದಾದ ಬಳಿಕ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಬಹುಮತ ಸಾಬೀತುಪಡಿಸಲು ವಿಫಲವಾಗಿದ್ದರಿಂದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿ ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆ ಸರ್ಕಾರದಲ್ಲಿ ಎನ್. ಮಹೇಶ್ ಅವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್. ಮಹೇಶ್ 2018ರ ಅಕ್ಟೋಬರ್ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ವೇಳೆ ಆಪರೇಷನ್ ಕಮಲಕ್ಕೆ ಒಳಗಾಗಿ 17 ಶಾಸಕರು ರಾಜೀನಾಮೆ ನೀಡಿದ್ದರಿಂದ ಮೈತ್ರಿ ಸರ್ಕಾರ ಪತನವಾಯಿತು.

ಇದನ್ನೂ ಓದಿ: ಮರ ಕಡಿಯುವ ಶಬ್ದ ಆಲಿಸಿಕೊಂಡು ಹೋಗಿ ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್

N Mahesh: ಕೊಳ್ಳೇಗಾಲದ ಬಿಎಸ್​ಪಿ ಉಚ್ಛಾಟಿತ ಶಾಸಕ ಎನ್. ಮಹೇಶ್ ಬಿಜೆಪಿಗೆ ಸೇರ್ಪಡೆ

Click on your DTH Provider to Add TV9 Kannada