AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!

ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ, ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತು ಸಫಾರಿ ಮಾಡಿದ್ದ ಬಂಡೀಪುರ ಸಫಾರಿ ಪಾಯಿಂಟ್ ಈಗ ಕುಡುಕರ ಅಡ್ಡೆಯಾಗಿದೆ. ಸಫಾರಿ ಕೇಂದ್ರ ಹಾಗೂ ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಖಾಲಿ ಬಾಟಲ್ ಪತ್ತೆಯಾಗಿದ್ದು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!
ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Oct 30, 2025 | 9:19 AM

Share

ಚಾಮರಾಜನಗರ, ಅಕ್ಟೋಬರ್ 30: ಗಡಿನಾಡು ಚಾಮರಾಜನಗರಕ್ಕೆ (Chamarajanagar) ಹುಲಿಗಳ ನಾಡು ಎಂಬ ಬಿರುದು ಕೂಡ ಇದೆ. ಇಂತಹ ಬಂಡೀಪುರ ಸಫಾರಿಗೆ ಮೈ ಮನ ಸೋಲದವರೇ ಇಲ್ಲ. ರಾಜ್ಯ ಹೊರ ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಷ್ಟೇ ಯಾಕೆ, ಖುದ್ದು ಪ್ರಧಾನಿ ನರೇಂದ್ರ ಮೋದಿ ಕೂಡ ಇಲ್ಲಿ ಸಫಾರಿ ಮಾಡಿ ಖುಷಿ ಪಟ್ಟಿದ್ದಾರೆ. ಇಂತಹ ಬಂಡೀಪುರ ಸಫಾರಿ ಕೇಂದ್ರವೀಗ ಕುಡುಕರ ಅಡ್ಡೆಯಾಗಿದೆ. ಮೇಲುಕಾಮನಹಳ್ಳಿ ಬಳಿ ಇರುವ ಸಫಾರಿ ಕೇಂದ್ರ ಹಾಗೂ ಡಿಸಿಎಫ್ ಪ್ರಭಾಕರನ್ ಅವರ ಕಚೇರಿಯ ಆವರಣದ ಸುತ್ತಮುತ್ತ ನೂರಾರು ಮದ್ಯದ ಖಾಲಿ ಬಾಟಲ್ ಪತ್ತೆಯಾಗಿದ್ದು, ಪರಿಸರವಾದಿಗಳು ಹಾಗೂ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಸಫಾರಿ ವಾಹನ ಚಾಲಕರು, ಅರಣ್ಯ ಸಿಬ್ಬಂದಿಯಿಂದಲೇ ಕೃತ್ಯ

ಸಾಮಾನ್ಯವಾಗಿ ಮೇಲುಕಾಮನಹಳ್ಳಿಯ ಡಿಸಿಎಫ್ ಕಚೇರಿ ಬಳಿ ಸಾಮಾನ್ಯರ ಪ್ರವೇಶವಿಲ್ಲ. ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆದರೆ ಇಲ್ಲೇ ಕೆಲಸ ಮಾಡುವ ಸಫಾರಿ ವಾಹನದ ಚಾಲಕರು, ಅರಣ್ಯ ಸಿಬ್ಬಂದಿಯೇ ಮದ್ಯ ಸೇವಿಸಿ ಬಾಟಲಿಗಳನ್ನು ಬೇಕಾಬಿಟ್ಟಿಯಾಗಿ ಬಿಸಾಡಿದ್ದಾರೆ. ಬಂಡಿಪುರದಲ್ಲಿ ಪರಿಸರ ಉಳಿಸಿ ಪ್ಲಾಸ್ಟಿಕ್ ಮುಕ್ತರನ್ನಾಗಿ ಮಾಡುತ್ತೇವೆಂದು ಭಾಷಣ ಮಾಡುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಬಂಡೀಪುರ ಟೈಗರ್ ಫಾರೆಸ್ಟ್ ಡಿಸಿಎಫ್ ಇದಕ್ಕೆ ಸೂಕ್ತ ಉತ್ತರ ನೀಡಬೇಕಾಗಿದೆ ಎಂದು ಪರಿಸರ ಪ್ರಿಯರು ಆಗ್ರಹಿಸಿದ್ದಾರೆ.

Bandipur Tiger Safari Dcf Office

ದೇಶ ಹಾಗೂ ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್, ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈ ರೀತಿ ಕುಡುಕರ ಅಡ್ಡೆಯಾಗಿ ಬದಲಾಗಿದ್ದು ಮಾತ್ರ ನಿಜಕ್ಕೂ ದುರಂತವೇ ಸರಿ ಎಂದು ಪರಿಸರವಾದಿ ರಘು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ 7 ಸ್ಥಳಗಳಲ್ಲಿ ಟ್ರೀ ಪಾರ್ಕ್, ದೇಶಿ ಮರಗಳ ರಕ್ಷಣೆಗೆ ಕ್ರಮ: ಮತ್ತೊಂದು ಮಹತ್ವದ ಯೋಜನೆಗೆ ಡಿಕೆ ಶಿವಕುಮಾರ್ ಚಿಂತನೆ

ಮಾತೆತ್ತಿದರೆ ಜನ ಸಾಮಾನ್ಯರ ಮೇಲೆ ಕೇಸ್ ದಾಖಲಿಸಿ ದಂಡಾಸ್ತ್ರ ಪ್ರಯೋಗಿಸುವ ಅರಣ್ಯ ಸಿಬ್ಬಂದಿಯ ಈ ದ್ವಂದ್ವ ನೀತಿಗೆ ಫುಲ್ ಸ್ಟಾಪ್ ಹಾಕಬೇಕಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲೇಬೇಕಿದೆ ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Thu, 30 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್