ಲೋಕಸಭೆ ಚುನಾವಣೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ

| Updated By: Ganapathi Sharma

Updated on: Apr 15, 2024 | 11:47 AM

Congress Guarantee Card Dstribution: ಗ್ಯಾರಂಟಿ ಕಾರ್ಡ್ ನೀಡಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಆಮಿಷ ಹುಟ್ಟುತ್ತಿದೆ ಎಂಬ ಆರೋಪಗಳ ಮಧ್ಯೆ ಇದೀಗ ಮತ್ತೆ ಗ್ಯಾರಂಟಿ ಕಾರ್ಡ್ ಹಂಚಿಕೆ ಆರಂಭಗೊಂಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಹಂಚಿಕೆ ಆರಂಭವಾಗಿದೆ.

ಲೋಕಸಭೆ ಚುನಾವಣೆ: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ಹಂಚಿಕೆ
Follow us on

ಚಾಮರಾನಜಗರ, ಏಪ್ರಿಲ್ 15: ಮತದಾರರನ್ನು ಸೆಳೆಯುವುದಕ್ಕಾಗಿ ‘ಗ್ಯಾರಂಟಿ ಕಾರ್ಡ್​’ಗಳನ್ನು (Guarantee Card) ನೀಡುವುದರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ವಿರೋಧ ವ್ಯಕ್ತಪಡಿಸಿದ್ದರ ನಡುವೆಯೂ ಇದೀಗ ಕಾಂಗ್ರೆಸ್ (Congress) ಪಕ್ಷವು ಆ ಕೆಲಸವನ್ನು ಮುಂದುವರಿಸಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ ನೀಡಿದ್ದ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಅದನ್ನೇ ಮಾಡಲು ಶುರು ಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಗ್ಯಾರಂಟಿ ಕಾರ್ಡ್ ಹಂಚಿಕೆ ಶುರುಮಾಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್ ಹಂಚಿಕೆ ಯಶಸ್ವಿಯಾದ ಕಾರಣ, ಇದೀಗ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಸುನೀಲ್ ‌ಬೋಸ್ ಪರ ಚುನಾವಣಾ ಪ್ರಚಾರದಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಯಿತು.

ಮಹಿಳೆಯರ ಹೆಸರು, ಆಧಾರ್ ಕಾರ್ಡ್ ನಂಬರ್, ಪೋನ್ ನಂಬರ್ ಮತ್ತಿತರ ವಿವರಗಳನ್ನು ಕೌಂಟರ್ ಫೈಲ್‌ಗೆ ಬರೆದುಕೊಂಡು ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ. ಇದಕ್ಕಾಗಿ ಮನೆಯಿಂದ ಆಧಾರ್ ಕಾರ್ಡ್ ತಂದು ಮಹಿಳೆಯರು ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ.

ಪ್ರತಿ ಬಡಕುಟುಂಬದ ಒಬ್ಬ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂ., ವಿದ್ಯಾವಂತ ಯುವಕನಿಗೆ 1 ಲಕ್ಷ ರೂ. ವೇತನದ ಮೊದಲ ಉದ್ಯೋಗದ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡುತ್ತಿದೆ. ಅಲ್ಲದೆ, ರೈತರ ಸಾಲ ಮನ್ನಾ ಸೇರಿದಂತೆ ಪಂಚ ಗ್ಯಾರಂಟಿಗಳ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ.

ಹೈಕೋರ್ಟ್ ಮೆಟ್ಟಿಲೇರಿದ್ದ ನಿಖಿಲ್ ಕುಮಾರಸ್ವಾಮಿ

2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಒಡ್ಡಲಾಗಿತ್ತು ಎಂದು ಆರೋಪಿಸಿದ್ದ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇತ್ತೀಚೆಗೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಇದು ಮರುಕಳಿಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್​ ನ್ಯಾಯಪೀಠ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯೆ ಕೋರಿ ನೋಟಿಸ್ ನೀಡಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಗ್ಯಾರಂಟಿ ಕಾರ್ಡ್ ಹಂಚಿಕೆಯನ್ನು ಕಾಂಗ್ರೆಸ್ ಮತ್ತೆ ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ