Sign In

By signing in or creating an account, you agree with Associated Broadcasting Company's Terms & Conditions and Privacy Policy.

77 ಮಲೆಯ ಒಡೆಯ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ

ಕಾನನದ ದಟ್ಟಾರಣ್ಯದ ನಡುವೆ ಇರುವ ದೇವಾಲಯವದು. ಪವಾಡ ಪುರಷನ ಪವಾಡಕ್ಕೆ ಬೆರಗಾಗಿ ಕೋಟ್ಯಾಂತರ ಭಕ್ತ ವೃಂದ ಹೊಂದಿರುವ ಪ್ರದೇಶವದು. 77 ಮಲೆಯ ಒಡೆಯನಾದ ಮಾದಪ್ಪನ ಪುಣ್ಯ ಸನ್ನಿಧಾನದಲ್ಲಿಗ ಕುಡುಟರದ್ದೇ ಹಾವಳಿಯಾಗಿದೆ. ಅಕ್ರಮ ಮದ್ಯ ಮಾರಾಟದಿಂದ ಮಾದಪ್ಪನ ಬೆಟ್ಟದ ಪವಿತ್ರ್ಯಕ್ಕೆ ಧಕ್ಕೆಯಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಆಗುತ್ತಿದ್ದು, ಅಧಿಕಾರಿಗಳು ದಾಳಿ ಮಾಡಿದ್ದಾರೆ.

77 ಮಲೆಯ ಒಡೆಯ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ
ಮಲೆ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ

Updated on: Mar 09, 2025 | 9:55 AM

ಚಾಮರಾಜನಗರ, ಮಾರ್ಚ್ 09: ಏಳು ಮಲೆ ಎಪ್ಪತ್ತೇಳು ಮಲೆಯ ಒಡೆಯ, ದಂಡಕಾರಣ್ಯದ ನಡುವೆ ಬೆಟ್ಟದಲ್ಲಿ ನೆಲೆ ನಿಂತಿರುವ ಮಹದೇಶ್ವರ ಬೆಟ್ಟದಲ್ಲಿ (Mahadeshwara Hill) ಅಕ್ರಮ ಮದ್ಯದ ಘಾಟು ಹೆಚ್ಚಾಗಿದೆ. ಮದ್ಯ ಹಾಗೂ ತಂಬಾಕು ಮುಕ್ತ ಮಲೆ ಮಹದೇಶ್ವರ ಬೆಟ್ಟದ ಹೊತ್ತಾಸೆಗೆ ಬೆಟ್ಟದಲ್ಲೆ ವಾಸಿಸುವ ಕೆಲ ಕಿಡಿಗೇಡಿಗಳು ಸಂಚಕಾರ ತಂದಿದ್ದಾರೆ. ಪಾವಿತ್ರ್ಯಕ್ಕೆ ತೊಡಕಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ (Liquor) ಮಾರಾಟ ಆಗುತ್ತಿದ್ದು, ಶನಿವಾರ (ಮಾ.08) ರಂದು ನಡೆದ ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್ ಮದ್ಯ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆಚ್ಚಿನ ಜಿಲ್ಲೆಗಳಲ್ಲಿ ಚಾಮರಾಜನಗರ ಜಿಲ್ಲೆ ಕೂಡ ಒಂದು. ಯಾರೇ ಮುಖ್ಯಮಂತ್ರಿಯಾದರೂ ಚಾಮರಾಜನಗರ ಜಿಲ್ಲೆಗೆ ತೆರಳಲು ಹಿಂದೇಟು ಹಾಕುತ್ತಾರೆ. ಚಾಮರಾಜನಗರ ಜಿಲ್ಲೆಗೆ ಹೋದರೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ವಾಡಿಕೆ ಇದೆ. ಆದರೆ, ಸಿಎಂ ಸಿದ್ದರಾಮಯ್ಯ ಅನೇಕ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿ ಆ ಕಳಂಕವನ್ನು ದೂರವಾಗಿಸಿದ್ದಾರೆ.

ಜೊತೆಗೆ ಮಲೆ ಮಹದೇಶ್ವರ ಬೆಟ್ಟವನ್ನ ಮದ್ಯ ಮುಕ್ತ ಪ್ರದೇಶವನ್ನಾಗಿಸುವ ಸಂಕಲ್ಪ ಮಾಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಕೆಡಿಪಿ ಸಭೆಯಲ್ಲಿ ಖಡಕ್ ಆಗಿ ಸೂಚನೆ ನೀಡಿದ್ದಾರೆ. ಇವೆಲ್ಲರ ನಡುವೆ ಈಗ ಮತ್ತೆ ಮಲೆ ಮಹದೇಶ್ವರ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿಯಾಗಿದೆ. ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡುತ್ತಿದ್ದ ಸಿದ್ದಪ್ಪ ಹಾಗೂ ಮುತ್ತುರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ
Image
ಬಿಆರ್‌ಟಿ ಅರಣ್ಯದಲ್ಲಿ ಹುಲಿ ಸಂತತಿ ಹೆಚ್ಚಳಕ್ಕೆ ಸೋಲಿಗರ ಶ್ಲಾಘಿಸಿದ ಮೋದಿ
Image
ಪ್ರಧಾನಿ ಮೋದಿ ಭೇಟಿ ಬಳಿಕ ಬಂಡೀಪುರ ಪ್ರವಾಸಿಗರ ಸಂಖ್ಯೆ, ಆದಾಯ ಹೆಚ್ಚಳ
Image
ಬಂಡೀಪುರದಲ್ಲಿ ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ
Image
ಮತ್ತೆ ಕೋಟ್ಯಧಿಪತಿಯಾದ ಮಲೆ ಮಹದೇಶ್ವರ: ಹುಂಡಿಯಲ್ಲಿ ಸಿಕ್ತು 1.94 ಕೋಟಿ ರೂ.

ಇದನ್ನೂ ನೋಡಿ: ಹೂ, ಹಣ್ಣು, ತರಕಾರಿಗಳಿಂದ ಮಾದಪ್ಪನ ದೇಗುಲ ಅಲಂಕಾರ

ಅಕ್ರಮ ಮದ್ಯ ಮಾರಟಗಾರರ ಜೊತೆ ಅಧಿಕಾರಿಗಳ ಕೈವಾಡವಿದೆ ಎಂಬ ಆರೋಪವೂ ಕೇಳಿಬಂದಿದೆ. ಜಿಲ್ಲಾ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಡಿಸಿ ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕಿದೆ. ಹಾಗಿದಲ್ಲಿ ಮಾತ್ರ ಮಾದಪ್ಪನ ಕ್ಷೇತ್ರದ ಪಾವಿತ್ರ್ಯ ಉಳಿಸಿಕೊಳ್ಳಲು ಸಾದ್ಯವಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್