AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar News: ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದ ವ್ಯಕ್ತಿ ಸಾವು

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ನೀರು ಎಂದು ತಿಳಿದು ಟಾಯ್ಲೆಟ್ ಕ್ಲೀನಿಂಗ್​ಗೆ ಬಳಸುವ ಆ್ಯಸಿಡ್ ಕುಡಿದು ಮೃತಪಟ್ಟಿರುವ ಘಟನೆ ಚಾಮರಾನಗರ ಜಿಲ್ಲೆಯಲ್ಲಿ ನಡೆದಿದೆ.

Chamarajanagar News: ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದ ವ್ಯಕ್ತಿ ಸಾವು
ಸಿದ್ದರಾಜು, ಮೃತ ವ್ಯಕ್ತಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 25, 2023 | 11:42 AM

Share

ಚಾಮರಾಜನಗರ, (ಜುಲೈ.25): ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ನೀರೆಂದು (Water) ಆ್ಯಸಿಡ್(Acid )ಕುಡಿದು ಮೃತಪಟ್ಟಿರುವ ಘಟನೆ ಚಾಮರಾಜನಗರ(Chamarajnagar) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಸಿದ್ದರಾಜು (40) ಮೃತ ದುರ್ದೈವಿ. ಮೊನ್ನೆ(ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ (Drunk Man) ನೀರು ಎಂದು ಭಾವಿಸಿ ಟಾಯ್ಲೆಟ್ ಕ್ಲೀನಿಂಗ್​ಗೆ ಬಳಸುವ ಆ್ಯಸಿಡ್ ಕುಡಿದಿದ್ದಾನೆ. ಬಳಿಕ ಬಿದ್ದು ಒದ್ದಾಡುತ್ತಿದ್ದ ಸಿದ್ದರಾಜುನನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ದುರದೃಷ್ಟವಶಾತ್ ನಿನ್ನೆ(ಜುಲೈ 24) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ನಿರಂತರ ಮಳೆಯಿಂದಾಗಿ ದಾವಣಗೆರೆಯಲ್ಲಿ ಮಗು, ವಿಜಯಪುರದಲ್ಲಿ ವೃದ್ಧೆ ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವು

ಕೋಲಾರ, (ಜುಲೈ 25): ಮಾವು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ಮಾವು ಮಾರುಕಟ್ಟೆಯಲ್ಲಿ ನಡೆದಿದೆ. ಇಂದಿರಾನಗರ ನಿವಾಸಿ ಶಫಿ(35) ಮೃತಪಟ್ಟ ವ್ಯಕ್ತಿ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:37 am, Tue, 25 July 23

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್