ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ

ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಿತರಾದ ಚಾಮರಾಜನಗರದ ಗೃಹಿಣಿ ಸಿರಿಧಾನ್ಯದ ಹೋಟೆಲ್ ಆರಂಭಿಸಿ ಯಶಸ್ವಿಯಾಗಿದ್ದಾರೆ. ಆರೋಗ್ಯಕರ ಆಹಾರ ಒದಗಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಿ, ಇತರ ಮಹಿಳೆಯರಿಗೂ ಉದ್ಯೋಗ ನೀಡಿದ್ದಾರೆ. ಸದ್ಯ ಚಾಮರಾಜನಗರದ ಗೃಹಿಣಿಯ ಈ ಸಾಧನೆ ಇತರರಿಗೂ ಮಾದರಿ ಆಗಿದೆ.

ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ
ಶ್ವೇತಾ ಶಿವಶಂಕರ
Image Credit source: tv9 kannada
Edited By:

Updated on: Feb 22, 2026 | 7:38 PM

ಚಾಮರಾಜನಗರ, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಡೆಸಿಕೊಡುವ ಜನಪ್ರಿಯ ಮನ್​ ಕಿ ಬಾತ್​​ ಕಾರ್ಯಕ್ರಮ ದೇಶಾದ್ಯಂತ ಪ್ರಸಿದ್ಧಿ ಪಡೆದುಕೊಂಡಿದೆ. ಇಂದಿನ (ಫೆ.22) ಮನ್ ಕಿ ಬಾತ್ (Mann Ki Baat)​​ನಲ್ಲಿ ಕರ್ನಾಟಕದ ರೈತರನ್ನು ಪ್ರಧಾನಿ ಮೋದಿ ಪ್ರಶಂಸಿದ್ದಾರೆ. ರಾಜ್ಯದ ಸಾಕಷ್ಟು ಜನರು ಒಳ್ಳೆಯ ಕೆಲಸ, ಕಾರ್ಯಗಳನ್ನು ಮಾಡಲು ಮನ್​ ಕಿ ಬಾತ್​​ ಪ್ರೇರಣೆ ಆಗಿದೆ. ಅದರಂತೆ ಚಾಮರಾಜನಗರದಲ್ಲಿ ಓರ್ವ ಗೃಹಿಣಿ ಮೋದಿ ಮಾತು ಕೇಳಿ ಸಿರಿಧಾನ್ಯದ ಹೋಟೆಲ್ ತೆರೆದು ಸ್ವಾವಲಂಬಿ ಬದಕು ಕಟ್ಟಿಕೊಂಡಿದ್ದಾರೆ.

ಆಕಾಶವಾಣಿಯಲ್ಲಿ ಬಿತ್ತರಗೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಮನ್​ ಕಿ ಬಾತ್ ಕಾರ್ಯಕ್ರಮದಿಂದ ಪ್ರೇರಣೆಗೊಂಡ ಚಾಮರಾಜನಗರ ತಾಲೂಕಿನ ಮೂಡ್ಲುಪುರ ಗ್ರಾಮದ ಶ್ವೇತಾ ಶಿವಶಂಕರ ಆರಾಧ್ಯ ಅವರು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸಿರಿಧಾನ್ಯದ ಆಹಾರದ ಹೋಟೆಲ್​​ ಅನ್ನು ಆರಂಭಿಸಿ ಯಶಸ್ವಿ ಆಗಿದ್ದಾರೆ.

ಇದನ್ನೂ ಓದಿ: ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

ಹೃದಯ ಸ್ನೇಹಿ ಕಡ್ಲೆಹುಳಿ ಹೋಟೆಲ್ ಆರಂಭಿಸಿ ಐದಾರು ಮಂದಿ ಮಹಿಳೆಯರಿಗೆ ಉದ್ಯೋಗ ನೀಡುವ ಜೊತೆಗೆ ಆರೋಗ್ಯಕರ ಆಹಾರ ಉಣ ಬಡಿಸುತ್ತಿದ್ದಾರೆ. ಸಿರಿಧಾನ್ಯದ ಉಪ್ಪಿಟ್ಟು, ಬಾತ್, ವಿವಿಧ ಬಗೆಯ ಪೇಯಗಳನ್ನು ಸವಿಯಲು ನಿತ್ಯ ನೂರಾರು ಜನರು ಇವರ ಹೋಟೆಲ್​ಗೆ ಆಗಮಿಸುತ್ತಿದ್ದು,  ಆರ್ಥಿಕ ಸ್ವಾವಲಂಬನೆ ಹೊಂದುತ್ತಿದ್ದಾರೆ.‌

ಪ್ರಧಾನಿ ಮೋದಿ ಮಾತೇ ಸ್ಪೂರ್ತಿ: ಶ್ವೇತಾ 

ಇನ್ನು ಈ ಬಗ್ಗೆ ಶ್ವೇತಾ ಅವರು ಮಾತನಾಡಿದ್ದು, ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ವಾವಲಂಬಿಗಳಾಗಬೇಕೆಂದು ನೀಡಿದ ಕರೆ ನನಗೆ ದೊಡ್ಡ ಪ್ರೇರಣೆಯಾಯಿತು. ಅವರ ಮಾತುಗಳಿಂದ ಸ್ಪೂರ್ತಿ ಪಡೆದು ಈ ಹೋಟೆಲ್ ಆರಂಭಿಸಿದ್ದು, ಐದು ತಿಂಗಳುಗಳು ಕಳೆದಿದೆ ಎಂದು ಹೇಳಿದರು.

Food

ಇಂದಿನ ಯುವ ಪೀಳಿಗೆಗೆ ಸಿರಿಧಾನ್ಯಗಳ ಮಹತ್ವವೇ ತಿಳಿದಿಲ್ಲ. ಅವು ನಮ್ಮ ಆಹಾರ ಪದ್ಧತಿಯಿಂದ ದೂರವಾಗಿವೆ. ಆ ಕಾರಣಕ್ಕೆ ಜನರಿಗೆ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸಿ, ಅವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿದಿನ ಒಂದು ಸಿರಿಧಾನ್ಯವನ್ನು ಬಳಸಿಕೊಂಡು ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ವಿವಿಧ ಕಾಳು ಪದಾರ್ಥಗಳನ್ನು ನೀಡುತ್ತಿದ್ದೇವೆ. ಮನೆಯಲ್ಲಿ ಹೇಗೆ ಅಡುಗೆ ಮಾಡುತ್ತೇವೆಯೋ ಅದೇ ರೀತಿ ಇಲ್ಲಿ ಸಹ ಸಿದ್ಧಪಡಿಸುತ್ತೇವೆ. ಟೇಸ್ಟಿಂಗ್ ಪೌಡರ್ ಅಥವಾ ಯಾವುದೇ ರಾಸಾಯನಿಕಗಳನ್ನು ಬಳಸುವುದಿಲ್ಲ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಮತ್ತು ಅವರ ಆರೋಗ್ಯದಲ್ಲಿಯೂ ಉತ್ತಮ ಬದಲಾವಣೆ ಕಂಡುಬಂದಿದೆ ಎಂದು ಶ್ವೇತಾ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು?

ಒಟ್ಟಿನಲ್ಲಿ ಮನ್ ಕಿ ಬಾತ್ ಪ್ರೇರಣೆ ಪಡೆದು ಹೋಟೆಲ್​ ಆರಂಭಿಸುವ ಮೂಲಕ ಶ್ವೇತಾ ಶಿವಶಂಕರ ಯಶಸ್ವಿಯಾಗಿದ್ದಾರೆ. ಜನರಿಗೆ ಉತ್ತಮ ಪೌಷ್ಠಿಕಾಂಶದ ಆಹಾರ ನೀಡುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us