AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ

ಅಸ್ವಸ್ಥಗೊಂಡಿರುವ ಮಕ್ಕಳಿಗೆ ವರಿಯಾಲ, ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, 7 ಮಂದಿ ವಿದ್ಯಾರ್ಥಿಗಳನ್ನೂ ಡಿಸ್ಚಾರ್ಜ್‌ ಮಾಡಲಾಗಿದೆ.

Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma|

Updated on: Jul 27, 2023 | 6:12 PM

Share

ಚಾಮರಾಜನಗರ: ಮಧ್ಯಾಹ್ನ ಊಟ ಸೇವಿಸಿದ ಬಳಿಕ 7 ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Desai Residential School) ನಡೆದಿದೆ. ಒಟ್ಟು 210 ಶಾಲಾ ಮಕ್ಕಳು ಊಟ ಮಾಡಿದ್ದು, ಈ ಪೈಕಿ 7 ಮಕ್ಕಳು ಅಸ್ವಸ್ಥರಾಗಿದ್ದಾರೆ. ಊಟ ಮಾಡಿದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂದಿನಂತೆಯೇ ಮಧ್ಯಾಹ್ನಕ್ಕೆ ಮೆಂತೆ ಭಾತ್ ಮಾಡಲಾಗಿತ್ತು. ಅದನ್ನು ಸೇವಿಸಿದ ನಂತರ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ಉಳಿದೆಲ್ಲ ವಿದ್ಯಾರ್ಥಿಗಳು ಸಹಜವಾಗಿಯೇ ಇದ್ದಾರೆ ಎಂದು ಶಾಲಾ ಮೂಲಗಳು ತಿಳಿಸಿವೆ.

ಅಸ್ವಸ್ಥಗೊಂಡಿರುವ ಮಕ್ಕಳಿಗೆ ವರಿಯಾಲ, ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, 7 ಮಂದಿ ವಿದ್ಯಾರ್ಥಿಗಳನ್ನೂ ಡಿಸ್ಚಾರ್ಜ್‌ ಮಾಡಲಾಗಿದೆ. ಮಕ್ಕಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗಿತ್ತು. ಪರಿಣಾಮವಾಗಿ ಅವರು ಅಸ್ವಸ್ಥಗೊಂಡಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: Chamarajanagar: ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ವಸತಿ ಶಾಲೆಯ ಪ್ರಿನ್ಸಿಪಾಲ್ ಸಸ್ಪೆಂಡ್

ಕೆಲವು ದಿನಗಳ ಹಿಂದೆ ಚಾಮರಾಜನಗರದ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ವಸತಿ ಶಾಲೆಯ ಪ್ರಾಂಶುಪಾಲ  ಕುಮಾರಸ್ವಾಮಿ ಎಂಬವರನ್ನು ಅಮಾನತುಗೊಳಿಸಲಾಗಿತ್ತು. ವಸತಿ ನಿಲಯದ ಶುಚಿತ್ವ, ಆಹಾರ ಸಾಮಾಗ್ರಿಗಳ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಆರೋಪ ಕೂಡ ಕೇಳಿಬಂದಿತ್ತು. ನಂತರ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

ಇತ್ತೀಚೆಗೆ ರಾಜ್ಯದ ಹಲವೆಡೆ ಶಾಲೆಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಲುಷಿತ ನೀರು ಸೇವಿಸಿ ವಿದ್ಯಾರ್ಥಿಗಳು, ಜನರು ಅಸ್ವಸ್ಥಗೊಂಡ ವಿದ್ಯಮಾನಗಳು ವರದಿಯಾಗಿದ್ದವು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ