AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಪ್ಪನ ಸನ್ನಿಧಾನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!ಮಾಯ್ಕಾರನ ಬಳಿ ಇಷ್ಟಾರ್ಥ ಸಿದ್ದಿಗಾಗಿ ವಿಶೇಷ ಪ್ರಾರ್ಥನೆ

ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ ಉಘೇ ಮಾದಪ್ಪ ಎನ್ನುವ ಝೇಂಕಾರದ ನಾದ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರದ ಮಹಿಳೆಯರು, ಇದೆಲ್ಲ ಎಲ್ಲಿ ಅಂತೀರಾ? ಹೌದು, ಇದು ಕಂಡು ಬಂದಿದ್ದು ಮಲೆಮಹದೇಶ್ವರನ ದೀಪಾವಳಿ ರಥೋತ್ಸವದಲ್ಲಿ.

ಮಾದಪ್ಪನ ಸನ್ನಿಧಾನಕ್ಕೆ ಹರಿದು ಬಂದ ಲಕ್ಷಾಂತರ ಭಕ್ತಗಣ!ಮಾಯ್ಕಾರನ ಬಳಿ ಇಷ್ಟಾರ್ಥ ಸಿದ್ದಿಗಾಗಿ ವಿಶೇಷ ಪ್ರಾರ್ಥನೆ
ಮಲೆ ಮಹದೇಶ್ವರ ಬೆಟ್ಟ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 14, 2023 | 5:42 PM

ಚಾಮರಾಜನಗರ, ನ.14: ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟ(Male Mahadeshwara Betta). ಈ ಬೆಟ್ಟದಲ್ಲಿ ನೆಲಸಿರುವ ಮಲೆ ಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಇಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ ಮೂರು ಬಾರಿ ಅಂದರೆ, ಶಿವರಾತ್ರಿ , ಯುಗಾದಿ ಹಾಗೂ ದೀಪಾವಾಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಇಂದು(ನ.14) ಬೆಟ್ಟದಲ್ಲಿ ಮಾದಪ್ಪನ ದೀಪಾವಳಿ ರಥೋತ್ಸವ, ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಮಾದಪ್ಪನ ರಥೋತ್ಸವವನ್ನು ಕಣ್ತುಂಬಿಕೊಂಡಿದ್ದಾರೆ.

ಇನ್ನು ಉಘೇ ಉಘೇ ಮಾದಪ್ಪ ಎನ್ನುತ್ತಾ ಅಸಂಖ್ಯಾತ ಮಂದಿ ಭಕ್ತರು ಮಾದಪ್ಪನ ತೇರು ಎಳೆದು, ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು, ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನ ಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದರು.

ಇದನ್ನೂ ಓದಿ:ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಹಾಲರವಿ ಸೇವೆ, ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಭಕ್ತ ಸಮೂಹ

ಲಕ್ಷಾಂತರ ಸಂಖ್ಯೆಯಲ್ಲಿ ಹರಿದು ಬಂದ ಭಕ್ತಗಣ

ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಕೂಡ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಮಾದಪ್ಪನ ಸನ್ನಿಧಿಯಲ್ಲಿ ದೀಪಾವಳಿಯ ಮೊದಲನೆ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವೆ ಉತ್ಸವ ನಡೆದಿತ್ತು. ಮೂರನೇ ದಿನವಾದ ಇಂದು ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ