ಆಕ್ಸಿಜನ್ ವ್ಯತ್ಯಯ: 24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದ ಸಚಿವ ಸುರೇಶ್ ಕುಮಾರ್

ಆಸ್ಪತ್ರೆಯಲ್ಲಿ 24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ. ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿರುವವರೂ ಮೃತಪಟ್ಟಿದ್ದಾರೆ. ಸೀರಿಯಸ್ ಇದ್ದವರು ಕೊನೇ ಗಳಿಗೆಯಲ್ಲಿ ಆಸ್ಪತ್ರೆಗೆ ಬಂದವರು ಸಾವನ್ನಪ್ಪಿದ್ದಾರೆ. ಆದ್ರೆ, ಎಲ್ಲರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದು ಸಚಿವ ಸುರೇಶ್​ ಕುಮಾರ್ ಹೇಳಿದ್ದಾರೆ.

ಆಕ್ಸಿಜನ್ ವ್ಯತ್ಯಯ: 24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದ ಸಚಿವ ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
Follow us
| Updated By: sandhya thejappa

Updated on:May 03, 2021 | 1:43 PM

ಚಾಮರಾಜನಗರ: ನಗರದ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲಿ 22 ರೋಗಿಗಳು ಮೃತಪಟ್ಟಿರುವ ಪ್ರಕರಣ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಆಸ್ಪತ್ರೆಯಲ್ಲಿ 24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ. ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿರುವವರೂ ಮೃತಪಟ್ಟಿದ್ದಾರೆ ಎಂದು ಸಚಿವ ಸುರೇಶ್​ಕುಮಾರ್ ಹೇಳಿದ್ದಾರೆ. ಮೈಸೂರಿನಿಂದ ನಮಗೆ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ. ಆಕ್ಸಿಜನ್ ಸಮಸ್ಯೆ, ಇತರ ಸಮಸ್ಯೆಗಳಿಂದ ರೋಗಿಗಳು ಮೃತಪಟ್ಟಿದ್ದಾರೆ ಚಾಮರಾಜನಗರ ಡಿಸಿ ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ.

ಆಕ್ಸಿಜನ್ ಪ್ಲಾಂಟ್ ಇದ್ರೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳು ಸಾವನ್ನಪ್ಪಿದ್ದಾರೆ. 65 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಇದೆ. ಕೋಟ್ಯಂತರ ರೂ. ಖರ್ಚು ಮಾಡಿ ಪ್ಲಾಂಟ್ ಮಾಡಿದ್ದಾರೆ. ಆದರೆ ಪ್ಲಾಂಟ್‌ಗೆ ಆಕ್ಸಿಜನ್ ಪೂರೈಕೆಯಾಗದಿದ್ದರೆ ಹೇಗೆ? ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದರೂ ವ್ಯರ್ಥ. ಸರ್ಕಾರ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ಸರ್ಕಾರ ಮಾತ್ರ ಆಕ್ಸಿಜನ್ ಸಮಸ್ಯೆ ಇಲ್ಲ ಎಂದು ಹೇಳಿಕೆ ನೀಡುತ್ತಿದೆ. ಇನ್ನು ತಕ್ಷಣ ಚಾಮರಾಜನಗರಕ್ಕೆ ತೆರಳುವಂತೆ ಸಿಎಂ ಸೂಚನೆ ಮೇರೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಚಾಮರಾಜನಗರಕ್ಕೆ ಪ್ರಯಾಣ ಬೆಳೆಸಿದ್ದಾರೆ.

50 ಆಕ್ಸಿಜನ್ ಸಿಲಿಂಡರ್ ರವಾನೆ ಮಾಡಿರುವುದಾಗಿ ತಿಳಿಸಿದ ಪ್ರತಾಪ್ ಸಿಂಹ ಇನ್ನು ಈ ಘಟನೆ ಬಳಿಕ ರಾತ್ರಿ ಫೇಸ್‌ಬುಕ್‌ನಲ್ಲಿ ಪ್ರತಾಪ್ ಸಿಂಹ ಪೋಸ್ಟ್‌ ಹಾಕಿದ್ದು ಆಕ್ಸಿಜನ್‌ಗಾಗಿ ಚಾಮರಾಜನಗರ ಡಿಸಿ ಮನವಿ ಮಾಡಿದ್ದರು. ಚಾಮರಾಜನಗರ ಡಿಸಿ, ಮೈಸೂರು ಅಪರ ಜಿಲ್ಲಾಧಿಕಾರಿ ಜತೆ ಫೋನ್‌ನಲ್ಲಿ ಚರ್ಚೆ ನಡೆಸಿದ ಬಳಿಕ 50 ಆಕ್ಸಿಜನ್ ಸಿಲಿಂಡರ್ ರವಾನೆ ಮಾಡಲಾಗಿದೆ. ರಾತ್ರಿ 2 ಗಂಟೆಗೆ ಆಕ್ಸಿಜನ್ ಮುಗಿಯುವ ಮಾಹಿತಿ ಹಿನ್ನೆಲೆಯಲ್ಲಿ ತುರ್ತಾಗಿ ಆಕ್ಸಿಜನ್ ಕಳುಹಿಸಿರುವುದಾಗಿ ರಾತ್ರಿ ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಪೋಸ್ಟ್ ಹಾಕಿದ್ದಾರೆ.

24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಆಸ್ಪತ್ರೆಯಲ್ಲಿ 24 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ. ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿರುವವರೂ ಮೃತಪಟ್ಟಿದ್ದಾರೆ. ಸೀರಿಯಸ್ ಇದ್ದವರು ಕೊನೇ ಗಳಿಗೆಯಲ್ಲಿ ಆಸ್ಪತ್ರೆಗೆ ಬಂದವರು ಸಾವನ್ನಪ್ಪಿದ್ದಾರೆ. ಆದ್ರೆ, ಎಲ್ಲರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದು ಸಚಿವ ಸುರೇಶ್​ಕುಮಾರ್ ಹೇಳಿದ್ದಾರೆ.

ಸಕಾಲಕ್ಕೆ ಆಕ್ಸಿಜನ್ ಬಂದಿದ್ದರೆ ರೋಗಿಗಳು ಸಾಯುತ್ತಿರಲಿಲ್ಲ ಆಕ್ಸಿಜನ್ ಬರುವುದು ತಡವಾಗಿದ್ದರಿಂದ 24 ಸಾವುಗಳು ಸಂಭವಿಸಿವೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ವೈದ್ಯರು ಹೇಳಿದ್ದಾರೆ ಎಂದು ಟಿವಿ9ಗೆ ಮಾಜಿ ಸಂಸದ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ. ಚಾಮರಾಜನಗರಕ್ಕೆ ಸಕಾಲಕ್ಕೆ ಆಕ್ಸಿಜನ್ ಬಂದಿಲ್ಲ. ಸಕಾಲಕ್ಕೆ ಆಕ್ಸಿಜನ್ ಬಂದಿದ್ದರೆ ರೋಗಿಗಳು ಸಾಯುತ್ತಿರಲಿಲ್ಲ. ಚಾಮರಾಜನಗರದಲ್ಲಿ ಯಾವುದೇ ಪೂರ್ವಸಿದ್ಧತೆ ಇಲ್ಲ. ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಸ್ಥಗಿತವಾದರೆ ಚಾಮರಾಜನಗರದಲ್ಲಿ ಪ್ರಾಣಹಾನಿಯಾಗುತ್ತದೆ. ಈ ಮಾತನ್ನು ನಾನು ಅಧಿಕಾರಿಗಳಿಗೆ ಹೇಳಿದ್ದೆ ನಿನ್ನೆ ಸಚಿವ ಸುರೇಶ್ ಕುಮಾರ್‌ಗೆ ಕರೆ ಮಾಡಿದ್ದೆ. ಆದರೆ ಅವರು ನನ್ನ ಸಂಪರ್ಕಕ್ಕೆ ಸಿಗಲಿಲ್ಲ. ಬೆಳಗ್ಗೆ ಕರೆ ಮಾಡಿ ಸಾರಿ ಎಂದು ಅವರು ಹೇಳಿದರು. ಬಳಿಕ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.

ಇವತ್ತಿಗೆ ಆಗುವಷ್ಟು ಸಿಲಿಂಡರ್‌ಗಳು ಮಾತ್ರ ಇದೆ. ನಾಳೆ ಏನಾಗತ್ತೋ ಎಂದು ಗೊತ್ತಿಲ್ಲ. ಒಂದು ವಾರಕ್ಕೆ ಆಗುವಷ್ಟು ಆಕ್ಸಿಜನ್ ಇರಬೇಕಾಗುತ್ತೆ. ಚಾಮರಾಜನಗರದ ಜನತೆ ಭಯದಲ್ಲಿ ಜೀವಿಸುತ್ತಿದ್ದಾರೆ. ಸ್ಥಳಕ್ಕೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಬಂದಿಲ್ಲ. ಸಂಸದ ಶ್ರೀನಿವಾಸಪ್ರಸಾದ್ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸಂಸದ ಧ್ರುವನಾರಾಯಣ ತಿಳಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ವ್ಯತ್ಯಯ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರೂ ಸೇರಿ 22 ರೋಗಿಗಳ ಸಾವು

ಇದನ್ನೂ ಓದಿ: ಆಮ್ಲಜನಕ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್ ಸಿದ್ಧಪಡಿಸಿದ ಚಾಮರಾಜನಗರ ಜಿಲ್ಲಾಡಳಿತ

Published On - 11:50 am, Mon, 3 May 21