AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ

ಚಾಮರಾಜನಗರ ಜಿಲ್ಲೆಯಲ್ಲೊಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಮದುವೆ ಆರತಕ್ಷತೆಗೆಂದು ತೆರಳುತ್ತಿದ್ದ ವರನ ಕಾರನ್ನು ಗ್ಯಾಂಗ್​​ವೊಂದು ಸಿನಿಮೀಯ ರೀತಿಯಲ್ಲಿ ಅಡ್ಡಿಗಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟದಲ್ಲಿ ಆಯೋಜಿಸಲಾಗಿದ್ದ ಮದುವೆ ಆರತಕ್ಷತೆ ಕಾರ್ಯಕ್ಕೆ ಹೋಗುತ್ತಿದ್ದ ವೇಳೆ ವರನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ
Groom Raveesh
Shivaprasad B
| Edited By: |

Updated on:Jan 29, 2026 | 10:27 PM

Share

ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ರವೀಶ್ ಅಟ್ಟಾಡಿಸಿ ಬೆನ್ನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದಾರೆ.

ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದಾಗ ದಾಳಿ

6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ಇಂದು (ಜನವರಿ 29) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ ಆಯೋಜಿಸಲಾಗಿತ್ತು. ಹೀಗಾಗಿ ವರದ ರವೀಶ್,ಕುಣಗಳ್ಳಿ ಗ್ರಾಮದಿಂದಕಾರಿನಲ್ಲಿ ಹೋಗುವ ವೇಳೆ  ಸಿನೀಮಿಯಾ ರೀತಿಯಲ್ಲಿ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಚೂರಿಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​

ಘಟನೆಯಲ್ಲಿ ಎಡಗೈಗೆ ಚಾಕು ತಾಕಿದ್ದರಿಂದ ಸದ್ಯ ರವೀಶ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದುತ್ತಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ವಧುವಿನ ಮಾಜಿ ಬಾಯ್ ಫ್ರೆಂಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಕಾರ್ಯ ನಡೆಸಿದ್ದಾರೆ.

ಹಲ್ಲೆಗೊಳಗಾದ ಮಧುಮಗ ಹೇಳಿದ್ದೇನು?

ಈ ಬಗ್ಗೆ ರವೀಶ್ ಮಾಧ್ಯಮದವರ ಜತೆ ಮಾತನಾಡಿ, 6 ತಿಂಗಳ ಹಿಂದೆಯಷ್ಟೇ ನನಗೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜತೆ ಎಂಗೇಜ್ಮೇಟ್ ಆಗಿತ್ತು. ಜನವರಿ 30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದವು ಯಾರು ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸದ್ಯ ಮದ್ವೆಯಾಗಬೇಕಿದ್ದ ಯುವತಿಯ ಲವರ್​​​​ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯದ ಅಸಲಿಯತ್ತು ಬಯಲಿಗೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Thu, 29 January 26

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ