
ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ರವೀಶ್ ಅಟ್ಟಾಡಿಸಿ ಬೆನ್ನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದಾರೆ.
6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ಇಂದು (ಜನವರಿ 29) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ ಆಯೋಜಿಸಲಾಗಿತ್ತು. ಹೀಗಾಗಿ ವರದ ರವೀಶ್,ಕುಣಗಳ್ಳಿ ಗ್ರಾಮದಿಂದಕಾರಿನಲ್ಲಿ ಹೋಗುವ ವೇಳೆ ಸಿನೀಮಿಯಾ ರೀತಿಯಲ್ಲಿ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಚೂರಿಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಎಡಗೈಗೆ ಚಾಕು ತಾಕಿದ್ದರಿಂದ ಸದ್ಯ ರವೀಶ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದುತ್ತಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ವಧುವಿನ ಮಾಜಿ ಬಾಯ್ ಫ್ರೆಂಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಕಾರ್ಯ ನಡೆಸಿದ್ದಾರೆ.
ಈ ಬಗ್ಗೆ ರವೀಶ್ ಮಾಧ್ಯಮದವರ ಜತೆ ಮಾತನಾಡಿ, 6 ತಿಂಗಳ ಹಿಂದೆಯಷ್ಟೇ ನನಗೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜತೆ ಎಂಗೇಜ್ಮೇಟ್ ಆಗಿತ್ತು. ಜನವರಿ 30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದವು ಯಾರು ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸದ್ಯ ಮದ್ವೆಯಾಗಬೇಕಿದ್ದ ಯುವತಿಯ ಲವರ್ ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯದ ಅಸಲಿಯತ್ತು ಬಯಲಿಗೆ ಬರಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:16 pm, Thu, 29 January 26