ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ವಿಜೃಂಭಣೆಯ ದೀಪಾವಳಿ ಜಾತ್ರಾ ಮಹೋತ್ಸವ: ಭಕ್ತರಿಗೆ ಪ್ರಮುಖ ಸೂಚನೆಗಳು ಇಲ್ಲಿವೆ!

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಲಿದೆ. ಬೆಟ್ಟಕ್ಕೆ ಬೈಕ್ ಹಾಗೂ ಆಟೋಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಕೌದಳ್ಳಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸಂಚಾರಕ್ಕಾಗಿ 350ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ನವೆಂಬರ್ 10ರಂದು ವೈಭವದ ಮಹಾರಥೋತ್ಸವ ಜರುಗಲಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ವಿಜೃಂಭಣೆಯ ದೀಪಾವಳಿ ಜಾತ್ರಾ ಮಹೋತ್ಸವ: ಭಕ್ತರಿಗೆ ಪ್ರಮುಖ ಸೂಚನೆಗಳು ಇಲ್ಲಿವೆ!
ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ವಿಜೃಂಭಣೆಯ ದೀಪಾವಳಿ ಜಾತ್ರಾ ಮಹೋತ್ಸವ
Edited By:

Updated on: Nov 06, 2026 | 10:41 AM

ಮುಖ್ಯಾಂಶಗಳು

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ 5 ದಿನ ದೀಪಾವಳಿ ಜಾತ್ರಾ ಮಹೋತ್ಸವ.
  • ಬೆಟ್ಟಕ್ಕೆ ಬೈಕ್, ಆಟೋ ಪ್ರವೇಶ ಬಂದ್; ಕೌದಳ್ಳಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ.
  • ಭಕ್ತರ ಸಾರಿಗೆ ಅನುಕೂಲಕ್ಕಾಗಿ 350ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳು ನಿಯೋಜನೆ.

ಚಾಮರಾಜನಗರ, ನವೆಂಬರ್ 06: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ ಸಿಕ್ಕಿದೆ. ನವೆಂಬರ್ 6 ರಿಂದ ನವೆಂಬರ್ 10 ರವರೆಗೆ ನಡೆಯಲಿರುವ ಈ ಅದ್ದೂರಿ ಉತ್ಸವದಲ್ಲಿ ಕರ್ನಾಟಕ ಹಾಗೂ ನೆರೆಯ ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಐದು ದಿನಗಳ ಪೂಜಾ ಕಾರ್ಯಕ್ರಮಗಳ ವಿವರ

  • ನವೆಂಬರ್ 6 (ಶುಕ್ರವಾರ): ದೀಪಾವಳಿ ಜಾತ್ರಾ ಮಹೋತ್ಸವಾರಂಭ.
  • ನವೆಂಬರ್ 7: ಶ್ರೀ ಸ್ವಾಮಿಗೆ ಎಣ್ಣೆ ಮಜ್ಜನ ಪೂಜೆ ಮತ್ತು ವಿಶೇಷ ಉತ್ಸವ.
  • ನವೆಂಬರ್ 8: ನರಕ ಚತುರ್ದಶಿ ಪ್ರಯುಕ್ತ ವಿಶೇಷ ಸೇವೆಗಳು.
  • ನವೆಂಬರ್ 9: ದೀಪಾವಳಿ ಅಮಾವಾಸ್ಯೆಯಂದು ಬೆಳಿಗ್ಗೆ 9:30ರ ನಂತರ ಧಾರ್ಮಿಕ ‘ಹಾಲರುವೆ ಉತ್ಸವ’.
  • ನವೆಂಬರ್ 10: ಬೆಳಿಗ್ಗೆ 7:30 ರಿಂದ 8:40 ರ ಶುಭ ಲಗ್ನದಲ್ಲಿ ವೈಭವದ ದೀಪಾವಳಿ ‘ಮಹಾರಥೋತ್ಸವ’.

ಜಾತ್ರೆಯ ಪ್ರತಿದಿನ ಬೆಳಿಗ್ಗೆ 6:30 ರಿಂದ ಸಂಜೆ 6:30 ರವರೆಗೆ ಹಾಗೂ ರಾತ್ರಿ 8:30 ರಿಂದ ರಾತ್ರಿ ಬೀಗಮುದ್ರೆ ಹಾಕುವವರೆಗೆ ಭಕ್ತರಿಗೆ ಶ್ರೀ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Loading...

ಸಂಚಾರ ನಿರ್ಬಂಧ ಹಾಗೂ ಕೌದಳ್ಳಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ

ಬೆಟ್ಟದಲ್ಲಿ ತೀವ್ರ ವಾಹನ ದಟ್ಟಣೆ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಚಾಮರಾಜನಗರ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ನವೆಂಬರ್ 6 ರ ಸಂಜೆ 6 ಗಂಟೆಯಿಂದ ನವೆಂಬರ್ 10 ರ ಸಂಜೆ 6 ಗಂಟೆಯವರೆಗೆ ಬೆಟ್ಟಕ್ಕೆ ದ್ವಿಚಕ್ರ ವಾಹನಗಳು (ಬೈಕ್) ಹಾಗೂ ಆಟೋಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಬೈಕ್ ಮತ್ತು ಆಟೋಗಳಲ್ಲಿ ಬರುವ ಭಕ್ತರು ತಮ್ಮ ವಾಹನಗಳನ್ನು ಕೌದಳ್ಳಿ ಗ್ರಾಮದಲ್ಲಿ ಗುರುತಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ, ಅಲ್ಲಿಂದ ಬಸ್‌ಗಳ ಮೂಲಕ ಬೆಟ್ಟಕ್ಕೆ ತೆರಳಲು ಸೂಚಿಸಲಾಗಿದೆ.

350ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ

ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 350ಕ್ಕೂ ಹೆಚ್ಚು ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ. ಚಾಮರಾಜನಗರ, ಕೊಳ್ಳೇಗಾಲ, ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ನಗರಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Fri, 6 November 26

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us