ಕೌಟುಂಬಿಕ ಕಲಹ: ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ, ಓರ್ವ ಮಗು ಸಾವು

ಕೌಟುಂಬಿಕ ಕಲಹದಿಂದ ನೊಂದಿದ್ದ ತಾಯಿ ತನ್ನ ಹೆತ್ತ ಮಕ್ಕಳಿಗೂ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದೆ.

ಕೌಟುಂಬಿಕ ಕಲಹ: ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ, ಓರ್ವ ಮಗು ಸಾವು
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Jul 12, 2023 | 12:52 PM

ಚಾಮರಾಜನಗರ: ಕೌಟುಂಬಿಕ ಕಲಹ ಹಿನ್ನಲೆ ಮಕ್ಕಳಿಗೆ ಊಟದಲ್ಲಿ ವಿಷ ಬೆರಸಿ ತಾನೂ ವಿಷ(Poison) ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಹೆತ್ತ ತಾಯಿ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದೆ(Death).

ಕೌಟುಂಬಿಕ ಕಲಹದಿಂದ ನೊಂದಿದ್ದ ತಾಯಿ ತನ್ನ ಹೆತ್ತ ಮಕ್ಕಳಿಗೂ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ್ದ ತಾಯಿ, ಇಬ್ಬರು ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಿಸದೆ ಸಿಂಧು ಎಂಬ ಹೆಸರಿನ 6 ವರ್ಷದ ಬಾಲಕಿ ಮೃತಪಟ್ಟಿದೆ. ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಯಲ್ಲಿ ತಾಯಿ ಶೀಲ ಹಾಗೂ ಮಗು ಯಶವಂತ್​ ಚಿಕಿತ್ಸೆ ಮುಂದುವರೆದಿದೆ. ಪ್ರತಿದಿನ ಕುಡಿದು ಬಂದು ಪತ್ನಿ ಶೀಲ ಜೊತೆಗೆ ಪತಿ ಜಗಳವಾಡುತ್ತಿದ್ದ. ಇದರಿಂದ ಬೇಸತ್ತು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಾಮರಾಜನಗರದ ಯುವಕ; ಮೃತನ ಆಸೆಯಂತೆ ಕುಟುಂಬಸ್ಥರಿಂದ ನೇತ್ರದಾನ

ತೋರಣಗಲ್​ನ ಜಿಂದಾಲ್ ಆಸ್ಪತ್ರೆ ವೈದ್ಯ ಆತ್ಮಹತ್ಯೆ

ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಸಂಜೀವಿನಿ ಆಸ್ಪತ್ರೆಯ ವೈದ್ಯರೊಬ್ವರು ನಿನ್ನೆ ಸಂಜೆ ವಿದ್ಯಾನಗರ ಬಡಾವಣೆಯ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷವಷ್ಟೇ ಈ ಆಸ್ಪತ್ರೆಯ ಸೇವೆಗೆ ಸೇರಿದ್ದ 62 ವರ್ಷದ ಎಸ್.ಪಿ.ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಎಸ್.ಪಿ.ಸಿಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ವಹಣೆಯನ್ನು ಮಾಡುತ್ತಿದ್ದರು. ಮನೆಯಲ್ಲಿ ಪತ್ನಿ‌ ಇರದ ಸಮಯದಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಸಂಜೆ ಮನೆಗೆ ಬಂದು ನೋಡಿದ ಮೇಲೆ ಈ ವಿಷಯ ಗೊತ್ತಾಗಿದೆ. ಈ ಬಗ್ಗೆ ತೋರಣಗಲ್ಲು ಠಾಣೆಯಲ್ಲಿ ದೂರು ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣವೇನೆಂದು ಪೊಲೀಸರ ತನಿಖೆ ಬಳಿಕ ಬಯಲಾಗಲಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:45 pm, Wed, 12 July 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us