ಡಾ. ರಾಜಕುಮಾರ್​​ ಸಂಬಂಧಿ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ?: ನಿಗೂಢ ಸ್ಫೋಟಕ್ಕೆ ಬೆಚ್ಚಿಬಿದ್ದ ಕುಟುಂಬ

ತಮಿಳುನಾಡಿನ ಗಾಜನೂರಿನಲ್ಲಿರುವ ವರನಟ ಡಾ.ರಾಜ್‌ಕುಮಾರ್ ಅವರ ಸಂಬಂಧಿ ಮನೆ ಬಳಿ ನಿಗೂಢ ಸ್ಫೋಟ ಸಂಭವಿಸಿದ್ದು, ಕಚ್ಚಾ ಬಾಂಬ್ ದಾಳಿಯ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದು, ತಾಳವಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಫೋಟದ ಸ್ಯಾಂಪಲ್​​ಗಳನ್ನು ಎಫ್​​ಎಸ್​​ಎಲ್​​ಗೆ ಕಳುಹಿಸಿದ್ದು, ಮಾದರಿಗಳ ವಿಶ್ಲೇಷಣೆ ನಡೆಸಿದ ನಂತರವೇ ಸ್ಫೋಟದ ಸ್ವರೂಪ ಮತ್ತು ಬಳಸಲಾದ ಸ್ಫೋಟಕಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ.

ಡಾ. ರಾಜಕುಮಾರ್​​ ಸಂಬಂಧಿ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ?: ನಿಗೂಢ ಸ್ಫೋಟಕ್ಕೆ ಬೆಚ್ಚಿಬಿದ್ದ ಕುಟುಂಬ
ಡಾ. ರಾಜಕುಮಾರ್​​ ಸಂಬಂಧಿ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ?
Edited By:

Updated on: Nov 10, 2026 | 9:36 AM

ಚಾಮರಾಜನಗರ, ನವೆಂಬರ್​​ 10: ತಮಿಳುನಾಡಿನ ಗಾಜನೂರಿನಲ್ಲಿರುವ ವರನಟ ಡಾ. ರಾಜ್​​ಕುಮಾರ್​​ ಅವರ ಸಂಬಂಧಿ ಮನೆಯಲ್ಲಿ ರಾತ್ರಿ 10.22ರ ವೇಳೆಗೆ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮನೆಯ ಗಾಜು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ತಮಿಳುನಾಡಿನ ತಾಳವಾಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ದೀಪಾವಳಿ ಹಿನ್ನೆಲೆ ಪಟಾಕಿಯಿಂದ ಈ ಸ್ಫೋಟ ಆಗಿರಬಹುದೆಂದು ಮೊದಲು ಅನುಮಾನವಿತ್ತಾದರೂ, ಸ್ಫೋಟದ ತೀವ್ರತೆ ಗಮನಿಸಿದಾಗ ಕಚ್ಚಾ ಬಾಂಬ್​ನಿಂದ ಸ್ಫೋಟ ಆಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸ್ಫೋಟಕದ ಮಾದರಿಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ.

ಒಟ್ಟು ಆರು ಜನರು ಪರಾರಿಯಾಗಿರುವ ಮಾಹಿತಿ

Mysterious Blast At Dr Rajkumar's Relative's House: ಬಾಂಬ್​ನಂತೆ ಶಬ್ದ ಕೇಳಿ ನಾವೆಲ್ಲರು ಬೆಚ್ಚಿಬಿದ್ದಿವು

Loading...

ಘಟನೆ ಬಗ್ಗೆ ಮಾಹಿತಿ ನೀಡಿರುವ ರಾಜ್​ಕುಮಾರ್​ ತಂಗಿ ಮೊಮ್ಮಗಳು ಮನೋಜ್ಞ, ದೇವರ ದಯೆಯಿಂದ ಯಾರಿಗೂ ಪ್ರಾಣಾಪಾಯ ಆಗಿಲ್ಲ. ಸ್ಫೋಟದ ಶಬ್ದ ಕೇಳಿ ಹೊರ ಬಂದ ಕೂಡಲೇ ಇಬ್ಬರು ಓಡಿ ಹೋಗಿರೋದು ಕಂಡುಬಂದಿದೆ. ನಾವು ಕೂಡ ಅವರನ್ನು ಫಾಲೋ ಮಾಡಿ ವಿಡಿಯೋ ಮಾಡಿದ್ದೇವೆ. ಆ ಹುಡುಗರು ನಮ್ಮ ಊರಿನವರೇ ಎಂದವರು ತಿಳಿಸಿದ್ದಾರೆ. ಒಟ್ಟು ಆರು ಜನರು ಪರಾರಿಯಾಗಿರುವ ಮಾಹಿತಿ ಇದೆ ಎನ್ನಲಾಗಿದೆ. ಗಾಜನೂರಿನಲ್ಲಿ ತನ್ನದೇ ಆದ ಗೌರವ ಹೊಂದಿರುವ ರಾಜಕುಮಾರ್​​ ಕುಟುಂಬದ ವಿರುದ್ಧ ಇಂತಹ ಕೃತ್ಯ ಎಸಗಿರುವುದು ಯಾರು ಎಂಬುದೇ ಸದ್ಯ ದೊಡ್ಡ ಪ್ರಶ್ನೆಯಾಗಿದೆ. ಘಟನೆ ಸಂಬಂಧ ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆಯೂ ನಡೆಯುತ್ತಿದೆ.

ಇದನ್ನೂ ಓದಿ: ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಕೇರಳದ ಆಸ್ಪತ್ರೆ ತ್ಯಾಜ್ಯದ ಹಾವಳಿ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸ್ಫೋಟದ ಬಗ್ಗೆ ತಕ್ಷಣವೇ ತಮಿಳುನಾಡಿನ ತಾಳವಾಡಿ ಪೊಲೀಸರಿಗೆ ತಿಳಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಫೋಟಕ್ಕೆ ಕಾರಣವಾದ ಮೂಲವನ್ನು ಪತ್ತೆಹಚ್ಚಲು ಪ್ರಯತ್ನಿಸಿದ್ದಾರೆ. ಪ್ರಸ್ತುತ, ಇದು ಕಚ್ಚಾ ಬಾಂಬ್ ದಾಳಿಯೇ ಅಥವಾ ಬೇರೆ ಯಾವುದಾದರೂ ಸ್ಫೋಟಕ ವಸ್ತುವಿನಿಂದ ಸಂಭವಿಸಿದೆಯೇ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಸ್ಫೋಟದ ಹಿಂದಿನ ಉದ್ದೇಶ ಮತ್ತು ಅದನ್ನು ನಡೆಸಿದವರು ಯಾರು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಫೋಟದ ಸ್ಯಾಂಪಲ್​​ಗಳನ್ನು ಎಫ್​​ಎಸ್​​ಎಲ್​​ಗೆ ಕಳುಹಿಸಿದ್ದು, ಮಾದರಿಗಳ ವಿಶ್ಲೇಷಣೆ ನಡೆಸಿದ ನಂತರವೇ ಸ್ಫೋಟದ ಸ್ವರೂಪ ಮತ್ತು ಬಳಸಲಾದ ಸ್ಫೋಟಕಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:30 am, Tue, 10 November 26

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us