ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಸಫಾರಿ ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ
ಬಂಡೀಪುರ ಸಫಾರಿ
Edited By: ಆಯೇಷಾ ಬಾನು

Updated on: Sep 20, 2023 | 6:57 AM

ಚಾಮರಾಜನಗರ, ಸೆ.20: ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ ಹಿನ್ನೆಲೆ ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಹೇರಲಾಗಿದೆ(Bandipur Tiger Reserve And National Park). ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಅಂದರೆ ಬುಧವಾರದಂದು ಸಫಾರಿ(Safari) ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದು ಬಂಡೀಪುರ ಸಫಾರಿಗೆ ಹೋಗಲು ಪ್ಲಾನ್ ಮಾಡಿಕೊಂಡಿದ್ದರೆ ಅದನ್ನು ಕ್ಯಾನ್ಸಲ್ ಮಾಡಿ ಮುಂದೂಡಿ. ಇಲ್ಲದಿದ್ದರೆ ಸಫಾರಿ ಮಾಡಲಾಗದೆ ವಾಪಾಸ್ ಬರಬೇಕಾಗುತ್ತೆ.

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾಯಂ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆ ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಗುತ್ತೆ. ಅವರನ್ನು ಸನ್ಮಾನಿಸಲಾಗುತ್ತದೆ. ಇನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ಜೊತೆಗೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬುಧವಾರ ಸಫಾರಿ ರದ್ದುಗೊಳಿಸಲಾಗಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us