Chamarajanagar News: ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ

ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು ಎಂದು ಸಾಹಿತಿ ಕುಂ. ವೀರಭದ್ರದಪ್ಪ ಆರೋಪಿಸಿದ್ದಾರೆ.

Chamarajanagar News: ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ
ಕುಂ. ವೀರಭದ್ರಪ್ಪ
Follow us
Ganapathi Sharma
|

Updated on: Jun 08, 2023 | 3:47 PM

ಚಾಮರಾಜನಗರ: ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ (Kum Veerabhadrappa) ಬೆಂಬಲ ಸೂಚಿಸಿದ್ದಾರೆ. ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ ಎಂದು ಅವರು ದೂರಿದ್ದಾರೆ. ಚಾಮರಾಜನಗರದಲ್ಲಿ (Chamarajanagar) ಮಾತನಾಡಿದ ಅವರು, ನಾವು ಯಾರನ್ನ ಸೋಲಿಸಬೇಕು ಅಂತ ಇಷ್ಟಪಟ್ಟಿದ್ವೋ ಅವರು ಸೋತಿದ್ದಾರೆ. ಯಾರು ಗೆಲ್ಲಬೇಕು ಅಂತ ಆಶಯ ಹೊಂದಿದ್ದೆವೋ ಅವರು ಗೆದ್ದು 135 ಸೀಟು ತೆಗೆದುಕೊಂಡಿದ್ದಾರೆ. ಕರ್ನಾಟಕ ಜನತೆಗೆ ಗೆಲ್ಲಿಸೋದು ಎಷ್ಟು ಗೊತ್ತೋ, ಸೋಲಿಸೋದು ಸಹ ಅಷ್ಟೇ ಗೊತ್ತು ಎಂದು ಹೇಳಿದ್ದಾರೆ.

ಬಿಜೆಪಿಯವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ರು ಎಂದು ಟೀಕಿಸಿದ ಅವರು, ಅನೇಕ ಕಾರಣಗಳಿಗೆ ಚಾಮರಾಜನಗರ ನನಗೆ ಇಷ್ಟ ಆಗುತ್ತದೆ ಎಂದಿದ್ದಾರೆ. ಚಾಮರಾಜನಗರದಲ್ಲಿ ವಿ‌. ಸೋಮಣ್ಣ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು. ಬರಗೂರು ರಾಮಚಂದ್ರಪ್ಪ ಜಾರಿಗೆ ತಂದಿದ್ದ ಪುಸ್ತಕಗಳೇ ಮತ್ತೆ ಬರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಿಜೆಪಿಯವರು ಹೇಳೋದು ಭಾರತೀಯತೆ ಅಲ್ಲ, ಅವರು ಹೇಳೋದು ಹಿಂದುತ್ವ. ದೇಶದ ಎಲ್ಲರ ಹಿತಾಸಕ್ತಿ ಕಾಪಾಡೋದು ಭಾರತೀಯತೆ. ಬಿಜೆಪಿಯವರು ಹೇಳೋ ಭಾರತೀಯತೆ ಒಪ್ಪೋಕೆ ಸಾಧ್ಯವಿಲ್ಲ. ಬಿಜೆಪಿ ಅವ್ರು ಹೇಳೋದು ಆರ್​​​ಎಸ್​​ಎಸ್ ಪ್ರಣೀತ ಭಾರತೀಯತೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು ಎಂದು ವೀರಭದ್ರಪ್ಪ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Text Book Row: ಮತ್ತೆ ಪರಿಷ್ಕರಣೆ ಆಗಲಿದೆಯೇ ಪಠ್ಯ ಪುಸ್ತಕ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಪ್ರತಿಪಕ್ಷಗಳಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?