ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ವರ್ಷ: 12 ಕುಟುಂಬಗಳಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ಮೃತ 36 ಮಂದಿ ಪೈಕಿ 24 ರೋಗಿಗಳ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಿದೆ. ಆದರೆ ಉಳಿದ 12 ಕುಟುಂಬಗಳಿಗೆ ಈವರೆಗೆ ನಯಾಪೈಸೆ ಪರಿಹಾರವೂ ಸಿಕ್ಕಿಲ್ಲ.

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ವರ್ಷ: 12 ಕುಟುಂಬಗಳಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ
ಚಾಮರಾಜನಗರ ಆಕ್ಸಿಜನ್ ದುರಂತ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 02, 2022 | 11:15 AM

ಚಾಮರಾಜನಗರ: ಕೊರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ ಸಂಭವಿಸಿದ ದುರಂತಕ್ಕೆ ಇಂದು (ಮೇ 2) 1 ವರ್ಷ ತುಂಬಿದೆ. ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಮೃತ 36 ಮಂದಿ ಪೈಕಿ 24 ರೋಗಿಗಳ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಿದೆ. ಆದರೆ ಉಳಿದ 12 ಕುಟುಂಬಗಳಿಗೆ ಈವರೆಗೆ ನಯಾಪೈಸೆ ಪರಿಹಾರವೂ ಸಿಕ್ಕಿಲ್ಲ. ದುಡಿಯುವ ಕೈ ಕಳೆದುಕೊಂಡ ಕುಟುಂಬಗಳು ಅತಂತ್ರವಾಗಿವೆ. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ರಾಜ್ಯ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಲಿಲ್ಲ. ದುರಂತ ಸಂಬಂಧ ಯಾರ ಮೇಲೂ ಕ್ರಮಕೈಗೊಂಡಿಲ್ಲ. ದುರಂತ ಸಂಭವಿಸಿ ಒಂದು ವರ್ಷವಾದರೂ ನ್ಯಾಯಾಂಗ ತನಿಖಾ ವರದಿ ಬಹಿರಂಗವಾಗಲಿಲ್ಲ. ಹೈಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತಿರುವ ಸಂತ್ರಸ್ತ ಕುಟುಂಬಗಳು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ.

ಹೈಕೋರ್ಟ್‌ನ ಸೂಚನೆ ನೀಡಿದ ಬಳಿಕ ದುರಂತದಲ್ಲಿ ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ತಲಾ ₹ 2 ಲಕ್ಷ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಯ ಕುಟುಂಬಗಳಿಗೆ ಹೆಚ್ಚುವರಿಯಾಗಿ ತಲಾ ₹ 3 ಲಕ್ಷವನ್ನು ತಾತ್ಕಾಲಿಕ ಪರಿಹಾರವಾಗಿ ನೀಡಲಾಯಿತು. ದುರಂತದಲ್ಲಿ ಕೋವಿಡ್‌ ರೋಗಿಗಳು ಮಾತ್ರವಲ್ಲದೇ, ಕೋವಿಡ್‌ ಲಕ್ಷಣ ಇದ್ದರೂ ಸೋಂಕು ದೃಢಪಡದ ಹಲವು ಮೃತಪಟ್ಟಿದ್ದರು. ಅವರ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಲಿಲ್ಲ. ದುರಂತದಲ್ಲಿ ಮೃತಪಟ್ಟ ಎಲ್ಲ 36 ಕುಟುಂಬಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರತಿನಿಧಿಗಳು ಭೇಟಿ ನೀಡಿ ನೀಡಿ ತಲಾ ₹ 1 ಲಕ್ಷ ಪರಿಹಾರ ನೀಡಿತ್ತು. ಎಸ್​ಡಿಪಿಐ ನಿರಂತರ ಹೋರಾಟ ಮಾಡುತ್ತಿದೆ.

ಅಂದು ಏನಾಯಿತು?

ಮೇ 2, 2021ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮೈಸೂರಿನಿಂದ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಯಾಗಲಿಲ್ಲ. ರಾತ್ರಿ 10.30ರಿಂದ ಬೆಳಗಿನ ಜಾವ 2.30 ನಡುವೆ ಆಕ್ಸಿಜನ್ ಕೊರತೆ ಉಂಟಾಗಿತ್ತು. ಆ ಅವಧಿಯಲ್ಲಿ ವೆಂಟಿಲೇಟರ್‌, ಐಸಿಯು, ಆಕ್ಸಿಜನ್ ನೆರವಿನಿಂದ ಉಸಿರಾಡುತ್ತಿದ್ದ ಹಲವು ರೋಗಿಗಳು ಮೃತಪಟ್ಟರು. ಅಂದಿನ ಚಾಮರಾಜನಗರ ಜಿಲ್ಲಾಧಿಕಾರಿ ರವಿ ಅವರ ವೈಫಲ್ಯವೇ ಈ ದುರಂತಕ್ಕೆ ಮುಖ್ಯ ಕಾರಣ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಆಕ್ಸಿಜನ್ ಪೂರೈಕೆಗೆ ತಡೆಯೊಡ್ಡಿದರು ಎಂಬ ಆರೋಪ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಕೇಳಿ ಬಂದಿತ್ತು.

‘ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ. ಚಾಮರಾಜನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ’ ಎಂದು ವರದಿ ಹೇಳಿದೆ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಸಮಿತಿ ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ನನ್ನ ಪತಿಯೂ ಅಸುನೀಗಿದ್ದರು, ಆದರೆ ಆಸ್ಪತ್ರೆಯವರು ಮುಚ್ಚಿಹಾಕಿದರು: ಮಹಿಳೆ ದೂರು

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ

Published On - 11:15 am, Mon, 2 May 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ