ಬಂಡೀಪುರದಲ್ಲಿ ರಾತ್ರಿ ವೇಳೆ ಬಸ್​, ಆ್ಯಂಬುಲೆನ್ಸ್​ಗೆ ಮಾತ್ರ ಅವಕಾಶ; ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

'ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಮ್ಮ ಸರ್ಕಾರ ಯಾವುದೇ ಹೊಸ ಅನುಮತಿ ನೀಡಿಲ್ಲ. ಹೀಗಾಗಿ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ಎರಡು ಬಸ್‌ ಸಂಚಾರಕ್ಕೆ ಅನುಮತಿ ನೀಡಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪ್ರಮಾಣಿಕ ಆರೋಪಗಳನ್ನು ಮಾಡುತ್ತಿವೆ. ಅವು ಜನರಿಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ' ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಂಡೀಪುರದಲ್ಲಿ ರಾತ್ರಿ ವೇಳೆ ಬಸ್​, ಆ್ಯಂಬುಲೆನ್ಸ್​ಗೆ ಮಾತ್ರ ಅವಕಾಶ; ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ
Bandipur Forest
Follow us
ಸುಷ್ಮಾ ಚಕ್ರೆ
|

Updated on:Jan 09, 2025 | 9:08 PM

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್‌ಗಳು ಮತ್ತು ಆ್ಯಂಬುಲೆನ್ಸ್ ಸೇರಿದಂತೆ ನಿರ್ಬಂಧಿತ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ಸೂಕ್ಷ್ಮ ವನ್ಯಜೀವಿಗಳ ಆವಾಸ ಸ್ಥಾನವನ್ನು ರಕ್ಷಿಸಲು ಜಾರಿಯಲ್ಲಿರುವ ಕಟ್ಟುನಿಟ್ಟಾದ ರಾತ್ರಿ ಪ್ರಯಾಣ ನಿಷೇಧವನ್ನು ಈ ನಿರ್ಧಾರವು ಸ್ವಲ್ಪ ಸಡಿಲಗೊಳಿಸುತ್ತದೆ ಎಂದಿದ್ದರು. ಆದರೆ, ಇದೀಗ ಬಂಡೀಪುರದಲ್ಲಿ ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್​ಗಳಿಗೆ ಮತ್ತು 1 ಆ್ಯಂಬುಲೆನ್ಸ್​ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಜೀವವೈವಿಧ್ಯಕ್ಕೆ ಹೆಸರುವಾಸಿಯಾದ ನಿರ್ಣಾಯಕ ಹುಲಿ ಅಭಯಾರಣ್ಯವಾದ ಕಾಡಿನಲ್ಲಿ ಮಾನವ ಹಸ್ತಕ್ಷೇಪವನ್ನು ಕಡಿಮೆ ಮಾಡಲು ಈ ಮೊದಲು ನಿಷೇಧವನ್ನು ಜಾರಿಗೊಳಿಸಲಾಗಿತ್ತು. ಆದರೆ, ಅಗತ್ಯ ಸಾರಿಗೆ ಸೇವೆಗಳಿಗಾಗಿ ಪ್ರತಿಪಾದಿಸುವ ವಿವಿಧ ರಾಜಕೀಯ ನಾಯಕರು ಮತ್ತು ಸಾರ್ವಜನಿಕ ಪ್ರತಿನಿಧಿಗಳ ನಿರಂತರ ಮನವಿಯ ನಂತರ ವಿನಾಯಿತಿಗಳನ್ನು ನೀಡಲಾಗಿದೆ ಎಂದಿದ್ದರು.

ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರದ ಬಗ್ಗೆ ಮತ್ತೊಮ್ಮೆ ಚರ್ಚೆಗಳು ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಸೇವ್ ಬಂಡೀಪುರ’ (ಬಂಡೀಪುರವನ್ನು ರಕ್ಷಿಸಿ) ಎಂಬ ಅಭಿಯಾನ ಆರಂಭವಾಗಿದೆ. ಕರ್ನಾಟಕ ಸರ್ಕಾರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ 2 ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಿದೆ. ಈ ಕುರಿತು ವಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಆದ್ದರಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಗೆದ್ದರೆ ಬಂಡೀಪುರ ರಾತ್ರಿ ಸಂಚಾರ: ತೀವ್ರ ಚರ್ಚೆಗೆ ಗ್ರಾಸವಾದ ಡಿಕೆಶಿ ಹೇಳಿಕೆ ವಿಡಿಯೋ ಇಲ್ಲಿದೆ

ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಸಾಮಾಜಿಕ ಜಾಲತಾಣದಲ್ಲಿ ಇಂದು ಸಂಜೆ ಪೋಸ್ಟ್ ಹಾಕುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ಬಂಡೀಪುರ ಅರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಮ್ಮ ಸರ್ಕಾರ ಯಾವುದೇ ಹೊಸ ಅನುಮತಿ ನೀಡಿಲ್ಲ. ಹೀಗಾಗಿ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ಎರಡು ಬಸ್‌ ಸಂಚಾರಕ್ಕೆ ಅನುಮತಿ ನೀಡಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪ್ರಮಾಣಿಕ ಆರೋಪಗಳನ್ನು ಮಾಡುತ್ತಿವೆ. ಅವು ಜನರಿಗೆ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ’ ಎಂದು ಖಂಡ್ರೆ ಹೇಳಿದ್ದಾರೆ.

‘ಹಳೆ ನೀತಿ ಮುಂದುವರಿಯುತ್ತಿರುವುದನ್ನೇ ಸುಳ್ಳು ಆರೋಪ ಮಾಡಿ, ಕಾಂಗ್ರೆಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ. ಇದು ನಾಚಿಕೆಗೇಡಿತನದ ಕೆಲಸ. ಸುಳ್ಳು ಬಿಜೆಪಿ ಅವರ ಮನೆ ದೇವರಾಗಿದೆ. 2009ರಲ್ಲಿ ತುರ್ತು ಪರಿಸ್ಥಿತಿಗಳು ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಆ್ಯಂಬುಲೆನ್ಸ್‌ ಸೇವೆ ಸೇರಿದಂತೆ 2 ಬಸ್​ಗಳ ಸಂಚಾರಕ್ಕೆ ಅನುಮತಿ ನೀಡಿತ್ತು. ಇತ್ತೀಚೆಗೆ ಅದೇ ಅನುಮತಿಯನ್ನು ಕಾನೂನು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿನೊಂದಿಗೆ ಮುಂದುವರಿಸಲಾಗಿದೆ’ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿಯ ಚರ್ಚೆ; ವನ್ಯ ಪ್ರಾಣಿಗಳ ಜೀವಕ್ಕೆ ಕಂಟಕ?

‘ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲದೆ ಎಲ್ಲ ವಿಷಯಗಳನ್ನೂ ರಾಜಕೀಯಗೊಳಿಸಲು ಪ್ರಯತ್ನಿಸುತ್ತಿವೆ. ನಮ್ಮ ಸರ್ಕಾರ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಸಂಪೂರ್ಣ ಬದ್ಧವಾಗಿದೆ. ವನ್ಯಜೀವಿ ಸಂರಕ್ಷಣೆಗೆ ಕಾಯ್ದೆಯನ್ನು ತಂದದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸರ್ಕಾರ. ನಾವು ಅದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತೇವೆ. ಆದರೆ, ಬಿಜೆಪಿ ಶಾಸಕರು ದೇವರು ಎಂದು ಪೂಜಿಸುವ ಆನೆಗಳನ್ನು ಗುಂಡಿಟ್ಟು ಕೊಲ್ಲಲು ಸದನದಲ್ಲಿ ಅನುಮತಿ ಕೇಳುತ್ತಾರೆ! ಇಂತಹವರು ಈಗ ವನ್ಯಜೀವಿ ಸಂರಕ್ಷಣೆ ಬಗ್ಗೆ ಪಾಠ ಹೇಳಲು ಬರುತ್ತಿದ್ದಾರೆ. ಇದು ‘ಭೂತದ ಬಾಯಲ್ಲಿ ಭಗವದ್ಗೀತೆ’ ಓದುವಂತಾಗಿದೆ’ ಎಂದು ಅರಣ್ಯ ಸಚಿವ ಖಂಡ್ರೆ ಟೀಕಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸ0.67 ಗುಂಡ್ಲುಪೇಟೆ-ಊಟಿ ಅರಣ್ಯ ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂ.212, ಗುಂಡ್ಲುಪೇಟೆ-ಸುಲ್ತಾನ್ ಬತೇರಿ ಅರಣ್ಯ ಮಾರ್ಗಗಳಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳನ್ನು ಕಾರ್ಯಾಚರಣೆ 03-06-2009ರ ಆದೇಶದ ಪ್ರಕಾರ ಅನುಮತಿ ನೀಡಲಾಗಿರುತ್ತದೆ ಎಂದು ಪತ್ರದಲ್ಲಿ ಖಚಿತಪಡಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:08 pm, Thu, 9 January 25

‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
‘ಬಂಡವಾಳ ಗೊತ್ತಾಯ್ತು, ಪುಂಗಬೇಡ’; ಭವ್ಯಾ ಬಗ್ಗೆ ತ್ರಿವಿಕ್ರಂ ಖಾರದ ಮಾತು
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ