AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ರೈತರು, ಸಾರ್ವಜನಿಕರಿಂದ ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದ್ದರು. ಆದರೆ ಇದೀಗ ಆ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಚಾಮರಾಜನಗರ: ರೈತರು, ಸಾರ್ವಜನಿಕರಿಂದ ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ
ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ
ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು|

Updated on: Jul 13, 2024 | 9:48 AM

Share

ಚಾಮರಾಜನಗರ, ಜುಲೈ.13: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಆದರೆ ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಂದ ಸಾರ್ವಜನಿಕರಿಂದ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ರೆ ಸಿಎಂ ಜಿಲ್ಲೆಗೆ ಬಂದಾಗ ಕಪ್ಪುಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ; ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ FIR

ತಮ್ಮ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ
ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ