AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನವಿ ಪತ್ರಗಳು ಕಸದ ಬುಟ್ಟಿಗೆ: ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವೇಕೆ? ಸಿಎಂ ವಿರುದ್ದ ವಿಜಯೇಂದ್ರ ಕಿಡಿ

ಇದೇ ಜು.10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಮನವಿ ಪತ್ರ ನೀಡಿದ್ದರು. ಆದರೆ, ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಈ ಹಿನ್ನಲೆ ಸಾಮಾಜಿಕ ಜಾಲತಾಣದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಸಿಎಂ ವಿರುದ್ದ ಕಿಡಿಕಾರಿದ್ದಾರೆ.

ಮನವಿ ಪತ್ರಗಳು ಕಸದ ಬುಟ್ಟಿಗೆ: ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವೇಕೆ? ಸಿಎಂ ವಿರುದ್ದ ವಿಜಯೇಂದ್ರ ಕಿಡಿ
ಮನವಿ ಪತ್ರ ಕಸದ ಬುಟ್ಟಿಗೆ; ಸಿಎಂ ವಿರುದ್ದ ವಿಜಯೇಂದ್ರ ಕಿಡಿ
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 13, 2024 | 5:23 PM

Share

ಚಾಮರಾಜನಗರ, ಜು.13: ಮುಖ್ಯಮಂತ್ರಿಗಳಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಟಿವಿ9 ಕನ್ನಡದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ(B.Y Vijayendra)ಅವರು ತಮ್ಮ ‘ಎಕ್ಸ್​’ ಖಾತೆಯಲ್ಲಿ ಟಿವಿ9 ಸುದ್ದಿಯನ್ನು ರಿ-ಟ್ವೀಟ್​ ಮಾಡಿ, ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ? ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಅವರ ವಿರುದ್ದ ಕಿಡಿಕಾರಿದ್ದಾರೆ.

‘ಮುಖ್ಯಮಂತ್ರಿಗಳ ಬಳಿ ಹೋದರೆ ಸಮಸ್ಯೆ ಬಗೆಹರಿಯುತ್ತದೆ’ ಎಂಬ ಭರವಸೆಯಿಂದ ಬಹುದೂರದಿಂದ ಪ್ರಯಾಸಪಟ್ಟು ಬಂದು ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುತ್ತಾರೆ. ಆದರೆ, ಜನಸಾಮಾನ್ಯರ ಕಷ್ಟ-ಕಾರ್ಪಣ್ಯಗಳತ್ತ ಕಣ್ಣಾಡಿಸುವ ಮೊದಲೇ ಅವರ ಪತ್ರಗಳು ಕಸದ ರಾಶಿ ಸೇರಿರುವುದು ಜನರ ದೂರು-ದುಮ್ಮಾನಗಳಿಗೆ ಕಾಂಗ್ರೆಸ್ ಸರ್ಕಾರ ತೋರುತ್ತಿರುವ ಉಡಾಫೆ ವರ್ತನೆಗಳಿಗೆ ಕನ್ನಡಿ ಹಿಡಿದಿದೆ.

ಇದನ್ನೂ ಓದಿ:ಚಾಮರಾಜನಗರ: ರೈತರು, ಸಾರ್ವಜನಿಕರಿಂದ ಸಿಎಂ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

ಜನಕಾಳಜಿಯ ಬಗ್ಗೆ ತಮ್ಮ ಹಳೆಯ ನೆನಪುಗಳನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೆರಳಿನಲ್ಲಿ ಜನರ ಬಗೆಗಿನ ತಾತ್ಸಾರ ನರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯವೆನಿಸಿದೆ. ಇಂತಹ ಅಪಚಾರದ ಅಮಾನವೀಯ ಕೃತ್ಯ ಯಾರಿಂದಲೇ ನಡೆದಿದ್ದರೂ, ಅದರ ನೇರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಿದೆ. ಈ ನಿಟ್ಟಿನಲ್ಲಿ ನೈತಿಕ ಜವಾಬ್ದಾರಿಯಿಂದ ಜನರಿಗೆ ಅವರು ಉತ್ತರಿಸಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸುವ ವ್ಯವದಾನ ಇಲ್ಲದಿದ್ದರೆ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕ ಬೇಕೆ ? ಎಂದು ಪ್ರಶ್ನಿಸಿದರು.

ಬಿವೈ ವಿಜಯೇಂದ್ರ ಟ್ವೀಟ್​

ಘಟನೆ ವಿವರ

ಇದೇ ಜು.10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಮನವಿ ಪತ್ರ ನೀಡಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ಸಿದ್ದರಾಮಯ್ಯ ಅವರು ರೈತರು, ಸಾರ್ವಜನಿಕರಿಂದ ಮನವಿ ಪತ್ರ ಸ್ವೀಕರಿಸಿದ್ದರು. ಆದರೆ, ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಈ ಹಿನ್ನಲೆ ಗಂಟೆಗಟ್ಟಲೇ ಕಾದು ಸಿಎಂಗೆ ಮನವಿ ಸಲ್ಲಿಸಿದ್ದ ಸಾರ್ವಜನಿಕರು, ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Sat, 13 July 24

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..