ಚಾಮರಾಜನಗರ: ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ

ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತಷ್ಟು ಪ್ರವಾಸಿಗರನ್ನ ಸೆಳೆಯಲು ಅರಣ್ಯಾಧಿಕಾರಿಗಳು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಅದರಂತೆ, ರಾಮಪುರ ಆನೆ ಬಿಡಾರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸುತ್ತಿದ್ದಾರೆ.

ಚಾಮರಾಜನಗರ: ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ
ರಾಮಪುರ ಆನೆ ಬಿಡಾರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ
Image Credit source: starofmysore
Edited By: Rakesh Nayak Manchi

Updated on: Aug 22, 2023 | 3:02 PM

ಚಾಮರಾಜನಗರ, ಆಗಸ್ಟ್ 22: ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಹೌದು, ಬಂಡಿಪುರಕ್ಕೆ (Bandipur) ಮತ್ತಷ್ಟು ಪ್ರವಾಸಿಗರನ್ನ ಸೆಳೆಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ (Rampura Elephant Camp) ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಅವರು ಪಿಸಿಸಿಎಫ್​​ಗೆ ವರದಿ ಸಲ್ಲಿಸಿದ್ದಾರೆ.

ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ. ಈಗಾಗಲೇ ಪ್ರತಿ ತಿಂಗಳು ಸಫಾರಿಯಿಂದಲೇ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಹಿನ್ನೆಲೆ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಬಂಡಿಪುರಕ್ಕೆ ಮತ್ತಷ್ಟು ಆದಾಯ ಹರಿದು ಬರಲಿರಲಿದೆ ಎಂಬುದು ಅಧಿಕಾರಿಗಳ ಪ್ಲಾನ್.

ಇದನ್ನೂ ಓದಿ: ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಜೊತೆಗೆ ಆನೆಗಳಿಗೆ ತರಬೇತಿ ನೀಡುವುದನ್ನ ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಂಡಿಪುರದಲ್ಲಿ ಸಫಾರಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತಿದ್ದರು. ಬರೋಬ್ಬರಿ 2 ಗಂಟೆಗಳ ಕಾಲ ಸಫಾರಿ ಮಾಡಿದ್ದರು. ಮೋದಿ ಸಫಾರಿ ಬಳಿಕ ರಾಜ್ಯದ ಇತರೆ ಜಿಲ್ಲೆಗಳಿಂದ ಅಲ್ಲದೆ, ಹೊರ ರಾಜ್ಯ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 22 August 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us