PM Modi Bandipur Visit: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಆರಂಭಿಸಿದ ಪ್ರಧಾನಿ ಮೋದಿ

|

Updated on: Apr 09, 2023 | 9:11 AM

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ (Bandipur National Park) ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ 2 ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಂಚಾರ ನಡೆಸಲಿದ್ದಾರೆ. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಹಾಗೇ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. ನಂತರ ಬಂಡೀಪುರ ಕ್ಯಾಂಪಸ್​​ನಿಂದ ಸುಮಾರು 2 ತಾಸು ಅರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.