AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಪ್ರವಾಸಿಗರ ಗಮನಕ್ಕೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ: ಹೋಂಸ್ಟೇ, ರೆಸಾರ್ಟ್, ಲಾಡ್ಜ್​​ಗಳು ಬಂದ್

ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.

ಚಾಮರಾಜನಗರ: ಪ್ರವಾಸಿಗರ ಗಮನಕ್ಕೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ: ಹೋಂಸ್ಟೇ, ರೆಸಾರ್ಟ್, ಲಾಡ್ಜ್​​ಗಳು ಬಂದ್
ಬಂಡೀಪುರ ರಾಷ್ಟ್ರೀಯ ಉದ್ಯಾನವನ
ವಿವೇಕ ಬಿರಾದಾರ
|

Updated on:Apr 05, 2023 | 8:26 PM

Share

ಚಾಮರಾಜನಗರ: ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು (Bandipur National Park) ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ನಾಳೆ (ಏ.6 ರಿಂದ 9)ರ ವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್​​ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗು ರಕ್ಷಣೆ ದೃಷ್ಟಿಯಿಂದ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ಬಂಡೀಪುರ ಮತ್ತು ಮೈಸೂರು ಕಾರ್ಯಕ್ರಮ

ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: ಏಪ್ರಿಲ್​ 8, 9ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ

ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ. ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಬಂಡೀಪುರವನ್ನು ತಲುಪುವ ಮಾರ್ಗದ ದುರಸ್ತಿ ಕಾರ್ಯ ನಡೆದಿದೆ. ಅಲ್ಲದೆ ಮೇಲುಕಮನಹಳ್ಳಿಯಲ್ಲಿಯೂ (ಸಫಾರಿ ಪಾಯಿಂಟ್) ರಸ್ತೆಗಳನ್ನು ದುರಸ್ತಿ ಮಾಡಿಸಿ, ಸಫಾರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯು ನಿರತರಾಗಿದ್ದಾರೆ.

ಈ ನಿಟ್ಟಿನಲ್ಲಿ ಬಂಡೀಪುರದ ಸಫಾರಿ ರಸ್ತೆಗಳನ್ನು ಇಲಾಖೆ ಸರಿಪಡಿಸುತ್ತಿದ್ದು, ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಿರಿಯ ಅಧಿಕಾರಿಗಳು ಈಗಾಗಲೇ ಬಂಡೀಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿಷೇಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ತಮಿಳನಾಡು ಮತ್ತು ತೆಲಂಗಾಣ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 8 ಮತ್ತು 9 ರಂದು ತೆಲಂಗಾಣ ಮತ್ತು ತಮೀಳನಾಡಿಗೂ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ. ತೆಲಂಗಾಣ ಭೇಟಿ ವೇಳೆ ಪ್ರಧಾನಿ ಮೋದಿಯವರು 11,300 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹಾಗೇ ಬಿಬಿನಗರದಲ್ಲಿ ಏಮ್ಸ್​ ಆಸ್ಪತ್ರೆಗೆ ಶಂಕುಸ್ಥಾಪನೆ ಮತ್ತು ಸಿಕಂದರಾಬಾದ್​​ ರೇಲ್ವೆ ನಿಲ್ದಾಣದ ಅಭಿವೃದ್ದಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Wed, 5 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ