ಚಾಮರಾಜನಗರ: ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಬಳಿ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪೇದೆ ಸಿದ್ದರಾಜು(28) ಮೃತ ದುರ್ದೈವಿ.
ಹೊಸ ಅಣಗಳ್ಳಿ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು, ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿ ಸಿದ್ದರಾಜು ಸಾವಿಗೀಡಾಗಿದ್ದಾರೆ. ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:35 am, Wed, 1 January 20