AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ ವಿರುದ್ದ ಪೋಸ್ಟರ್ ವಾರ್; ಬಿಜೆಪಿಯಿಂದ ದೂರು

ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ(Chamarajanagar) ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಮುಂದುವರೆದಿದ್ದು, ಸಂಸದ ಶ್ರೀನಿವಾಸ್ ಪ್ರಸಾದ್(Srinivas Prasad) ಅವರನ್ನು​ ನಿಂದಿಸಿರುವ ಹಾಗೆ ಪೋಸ್ಟರ್​ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ ವಿರುದ್ದ ಪೋಸ್ಟರ್ ವಾರ್; ಬಿಜೆಪಿಯಿಂದ ದೂರು
ಸಂಸದ ಶ್ರೀನಿವಾಸ್​ ಪ್ರಸಾದ್​ ವಿರುದ್ದ ಪೋಸ್ಟರ್​ ವಾರ್​
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 07, 2024 | 10:20 AM

Share

ಚಾಮರಾಜನಗರ, ಏ.07: ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ(Chamarajanagar) ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಮುಂದುವರೆದಿದೆ. ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್(Srinivas Prasad) ಅವರನ್ನು​ ನಿಂದಿಸಿರುವ ಹಾಗೆ ಪೋಸ್ಟರ್​ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪೋಸ್ಟರ್​ನಲ್ಲಿ ಏನಿದೆ?

ಇನ್ನು ಈ ಪೋಸ್ಟ್​ರ್​ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಹಿನ್ನಲೆ ಪ್ರಸಾದ್​ ವಿರುದ್ಧ ಕಾಂಗ್ರೆಸ್​ನ ಬಾಲರಾಜ್ ಅವರು ಪೋಸ್ಟರ್​ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.

ಇದನ್ನೂ ಓದಿ:ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಏನಾಯ್ತು?

ಇತ್ತ ಬಾಲರಾಜು ಅವರು ಹನೂರು ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ ಸುಳ್ಳು ಆರೋಪ ಮಾಡಿದವರಿಗೆ ಮಾದಪ್ಪನೇ ತಕ್ಕ ಶಾಸ್ತಿ ಮಾಡಲಿ, ಸಂಸದ ಶ್ರೀನಿವಾಸ್ ಪ್ರಸಾದ್ ಮೇಲೆ ನನಗೆ ತುಂಬಾ ಗೌರವವಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 am, Sun, 7 April 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ