ಚಾಮರಾಜನಗರ, ಏ.07: ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ(Chamarajanagar) ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಮುಂದುವರೆದಿದೆ. ನಾಮಪತ್ರ ಸಲ್ಲಿಕೆ ದಿನ ಚಾಮರಾಜನಗರದ ಗಲ್ಲಿ ಗಲ್ಲಿಯಲ್ಲಿ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಸುನೀಲ್ ಬೋಸ್, ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್(Srinivas Prasad) ಅವರನ್ನು ನಿಂದಿಸಿರುವ ಹಾಗೆ ಪೋಸ್ಟರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಈ ಪೋಸ್ಟ್ರ್ನಲ್ಲಿ ‘ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ ಬಿಟ್ಟು ಮನೆಯಲ್ಲಿರಲಿ ಎಂದು ಬರೆಯಲಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನಲೆ ಪ್ರಸಾದ್ ವಿರುದ್ಧ ಕಾಂಗ್ರೆಸ್ನ ಬಾಲರಾಜ್ ಅವರು ಪೋಸ್ಟರ್ ಹಾಕಿದ್ದಾರೆಂಬ ಆರೋಪ ಕೇಳಿಬಂದಿದ್ದು, ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ.
ಇದನ್ನೂ ಓದಿ:ಚಾಮರಾಜನಗರ ಕ್ಷೇತ್ರದಲ್ಲಿ ಮೂವರ ನಾಮಪತ್ರ ತಿರಸ್ಕೃತ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಏನಾಯ್ತು?
ಇತ್ತ ಬಾಲರಾಜು ಅವರು ಹನೂರು ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ ಸುಳ್ಳು ಆರೋಪ ಮಾಡಿದವರಿಗೆ ಮಾದಪ್ಪನೇ ತಕ್ಕ ಶಾಸ್ತಿ ಮಾಡಲಿ, ಸಂಸದ ಶ್ರೀನಿವಾಸ್ ಪ್ರಸಾದ್ ಮೇಲೆ ನನಗೆ ತುಂಬಾ ಗೌರವವಿದೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:42 am, Sun, 7 April 24