ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್‌ನಿಂದ ಮಹತ್ವದ ತೀರ್ಪು
ನಂದಕುಮಾರ್ ವಿರುದ್ಧ ಅತ್ಯಾಚಾರ, ವಂಚನೆ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ -ವಿವಾದವನ್ನು ಆಲಿಸಿ ಇಬ್ಬರ ಸಹಮತಿಯಿಂದ ದೈಹಿಕ ಸಂಪರ್ಕವಾಗಿದೆ ಎಂದು ಪರಿಗಣಿಸಿದೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಚಾಮರಾಜನಗರ: ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ನಂದಕುಮಾರ್ ಮತ್ತು ಶೋಭ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಈ ತೀರ್ಪು ನೀಡಿದೆ. ನಂದಕುಮಾರ್ ಮತ್ತು ಶೋಭ ಪರಸ್ಪರ ಪ್ರೀತಿಸುತ್ತಿದ್ದರು. ಪರಸ್ಪರ ಇಬ್ಬರೂ ಒಪ್ಪಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಆದರೆ ನಂದಕುಮಾರ್ ಬೇರೆ ವಿವಾಹವಾಗಿದ್ದಾರೆ. ಹೀಗಾಗಿ ಶೋಭ 2018ರಲ್ಲಿ ಅನ್ಯಾಯವಾಗಿದೆ ಎಂದು ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪೇದೆಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನಂದಕುಮಾರ್ ಮತ್ತು ಶೋಭ ಕುರಿತ ಪ್ರಕರಣದಲ್ಲಿ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಂದಕುಮಾರ್ ಮತ್ತು ಶೋಭ ಮದುವೆಯಾಗುವುದಕ್ಕೆ ನಿರ್ಧಾರ ಮಾಡಿದ್ದರು. ಆದರೆ ಜಾತಿ ಕಾರಣದಿಂದಾಗಿ ಮದುವೆ ಮುರಿದುಬಿದ್ದಿತ್ತು. ಹೀಗಾಗಿ ನಂದಕುಮಾರ್ ಮತ್ತೊಂದು ಮದುವೆಯಾಗಿದ್ದರು. ಇದರಿಂದ ತನಗೆ ಅನ್ಯಾಯವಾಗಿದೆ ಎಂದು ನಂದಕುಮಾರ್ ವಿರುದ್ಧ 2018ರಲ್ಲಿ ಶೋಭ ದೂರು ನೀಡಿದ್ದರು.
ನಂದಕುಮಾರ್ ವಿರುದ್ಧ ಅತ್ಯಾಚಾರ, ವಂಚನೆ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ -ವಿವಾದವನ್ನು ಆಲಿಸಿ ಇಬ್ಬರ ಸಹಮತಿಯಿಂದ ದೈಹಿಕ ಸಂಪರ್ಕವಾಗಿದೆ ಎಂದು ಪರಿಗಣಿಸಿದೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಆದೇಶ ನೀಡಿದೆ. ಸದ್ಯ ನಂದಕುಮಾರ್ ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ, ಶೋಭ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪೇದೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆ; ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು