ಚಾಮರಾಜನಗರದಲ್ಲಿ 450 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಚಾಮರಾಜನಗರ ತಾಲೂಕಿನ ಯಡಪುರ ಬೆಟ್ಟದ ಬಳಿ ಇರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ರಾಷ್ಟ್ರಪತಿ ಕೋವಿಂದ್ ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಜೊತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಎಸ್ ಟಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಾಥ್ ನೀಡಿದ್ದಾರೆ.

ಚಾಮರಾಜನಗರದಲ್ಲಿ 450 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್​
Follow us
TV9 Web
| Updated By: ಆಯೇಷಾ ಬಾನು

Updated on:Oct 07, 2021 | 5:10 PM

ಚಾಮರಾಜನಗರ: ಅಕ್ಟೋಬರ್ 6ರಿಂದ 4 ದಿನಗಳ ಕಾಲ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ (Ramnath Kovind) ಇಂದು (ಅಕ್ಟೋಬರ್ 7) ಚಾಮರಾಜನಗರದಲ್ಲಿ 450 ಬೆಡ್ಗಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ದಾರೆ.

ಚಾಮರಾಜನಗರ ತಾಲೂಕಿನ ಯಡಪುರ ಬೆಟ್ಟದ ಬಳಿ ಇರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ರಾಷ್ಟ್ರಪತಿ ಕೋವಿಂದ್ ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಜೊತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಎಸ್ ಟಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಾಥ್ ನೀಡಿದ್ದಾರೆ. ರಾಷ್ಟ್ರಪತಿಯ ಪತ್ನಿ ಸವಿತಾ ಕೋವಿಂದ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ರಾಷ್ಟ್ರಪತಿಯವರು ದೀಪ ಬೆಳಗಿಸುವ ಮೂಲಕ ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ. 450 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ 180 ಕೋಟಿ ವೆಚ್ಚವಾಗಿದೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಯಿ ಚಾಮರಾಜನಗರ ಜಿಲ್ಲೆಯ ಜನರಿಗೆ ಅಭಿನಂಧನೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳು ಆಗಮಿಸಿರುವುದು ನಮ್ಮ ಅದೃಷ್ಟ. ಅವರ ಅಮೃತ ಹಸ್ತದಿಂದ ಉದ್ಘಾಟನೆಯಾಗಿರುವುದು ರಾಜ್ಯದ ಜನರ ಅದೃಷ್ಟ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬುಡಕಟ್ಟು ಜನರಿದ್ದಾರೆ. ನಮ್ಮ ಸರ್ಕಾರ ಹಿಂದುಳಿದವರಿಗೆ ಶಿಕ್ಷಣ, ವೈದ್ಯಕೀಯ ಸೇವೆ ನೀಡುತ್ತಿದೆ. ಚಾಮರಾಜನಗರ ಯಾವುದೇ ಕಾರಣಕ್ಕೂ ಹಿಂದುಳಿದಿಲ್ಲ, ಮುಂದುವರಿದ ಜಿಲ್ಲೆ. ಎಲ್ಲರಿಗೂ ಆರೋಗ್ಯ ಮುಖ್ಯ. ಆರೋಗ್ಯ ಕಾಪಾಡಿ ಕೊಂಡವನು ಸಾಧನೆ ಮಾಡುತ್ತಾನೆ. ಉಪನ್ಯಾಸಕರು ಪ್ರಮಾಣಿಕರಾಗಿ ಉಪನ್ಯಾಸ ಮಾಡ ಬೇಕು. ಹೊರ ಹೋದವರು ಉತ್ತಮ ವೈದ್ಯರಾಗಬೇಕು. ರಾಜ್ಯದಲ್ಲಿ ಎಂಟು ಜಿಲ್ಲೆಗೆ ವೈದ್ಯಕೀಯ ಕಾಲೇಜು ಆರಂಭಿಸ ಬೇಕು. ಪಿಪಿಪಿ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುತ್ತೆ. ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ವರ್ಷ ಮೆಡಿಕಲ್ ಕಾಲೇಜು ಆರಂಭಿಸುತ್ತೇವೆ ಎಂದರು.

ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಉದ್ಘಾಟನೆಯ ಬಳಿಕ ಮಾತನಾಡಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್, ಇದೊಂದು ಐತಿಹಾಸಿಕ ಕಾರ್ಯಕ್ರಮ. ಪ್ರಕೃತಿಯ ಸೌಂದರ್ಯವನ್ನ ಆವರಿಸಿರುವ ಜಿಲ್ಲೆಗೆ ಆಸ್ಪತ್ರೆ ಕಳಸ ಪ್ರಾಯವಾಗಿದೆ. ಚಾಮರಾಜನಗರ ಅಂದ್ರೆ ನದಿ, ಕಾಡು, ವನ್ಯಜೀವಿ ನೆನಪಾಗುತ್ತವೆ. ಚಾಮರಾಜ ಒಡೆಯರ್, ಡಾ.ರಾಜ್ ಕುಮಾರ್ ಅವರ ಹುಟ್ಟೂರು ಎಂಬುದು ಹೆಮ್ಮೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಜಿಲ್ಲೆಯಲ್ಲಿ ಹೆಚ್ಚಿದ್ದಾರೆ. ವೈದ್ಯಕೀಯ ಕಾಲೇಜು ಉದ್ಘಾಟನೆ ಆಗಿರುವುದು ಉತ್ತಮ ಚಿಕಿತ್ಸೆಗೆ ನಾಂದಿ ಹಾಡಿದೆ.

ಬಸವರಾಜ್ ಬೊಮ್ಮಯಿ ಬಂದ ಮೇಲೆ ವೈಧ್ಯಕೀಯ ಶಿಕ್ಷಣ ಸಂಸ್ಥೆಗೆ ಹೆಚ್ಚು ಅವಕಾಶ ಸಿಕ್ಕಿದೆ. ಖಾಸಗಿ ಸಂಸ್ಥೆ ನಡೆಸಿದ ಸರ್ವೇಯಲ್ಲಿ ರಾಜ್ಯ ಉತ್ತಮ ನಿರ್ವಹಣೆ ಎಂಬ ಪ್ರಶಸ್ತಿ ನೀಡಿದೆ. 750 ವಿದ್ಯಾರ್ಥಿಗಳು ಎಂಬಿಬಿಎಸ್ ಮಾಡುತ್ತಿದ್ದಾರೆ. ನರೇಂದ್ರ ಮೋದಿಯವರ ನಾಯಕತ್ವದಿಂದಾಗಿ ಕೊರೊನಾ ನಿಯಂತ್ರಣ ಮಾಡಿದ್ದಾರೆ. ಕೇಂದ್ರ ಸರ್ಕಾರ ಏಳು ವರ್ಷದಲ್ಲಿ 150 ಮೆಡಿಕಲ್ ಕಾಲೇಜು ಹೊಸದಾಗಿ ಮಂಜೂರಾತಿ ಮಾಡಿದೆ. 4500 ಆಕ್ಸಿಜನ್ ಬೆಡ್ ಹೊಸದಾಗಿ ನಿರ್ಮಿಸಲಾಗಿದೆ. 2200 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆಗೆ ಅವಕಾಶ ಕಲ್ಪಸಲಾಗಿದೆ. ಇವತ್ತು 93 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಶೇಕಡ 85ರಷ್ಟು ಮೊದಲ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಶೇಕಡ 38ರಷ್ಟು ಎರಡನೇ ಲಸಿಕೆ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡ 86 ರಷ್ಟು ಮೊದಲ ಲಸಿಕೆ ನೀಡಲಾಗಿದೆ. ಶೇಕಡ 38ರಷ್ಟು ಎರಡನೇ ಲಸಿಕೆ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಹರ್ಯಾಣದಲ್ಲೂ ಪ್ರತಿಭಟನಾ ನಿರತ ರೈತರತ್ತ ನುಗ್ಗಿದ ಕಾರು; ಪೊಲೀಸರಿಗೆ ದೂರು ನೀಡಿದ ಗಾಯಾಳು ರೈತ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟಕ್ಕೆ ಅ 7ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ

Published On - 5:01 pm, Thu, 7 October 21

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು