ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ತಪ್ಪಿದ ಭಾರಿ ದುರಂತ
ಚಾಮರಾಜನಗರ: ಕಮರವಾಡಿ ಗೇಟ್ ಬಳಿ ಖಾಸಗಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆ್ಯಕ್ಸಲ್ ಬ್ಲೇಡ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆ ಬದಿಗೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಸಂತೇಮರಳಿಯಿಂದ ಮೈಸೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 12 ಮಂದಿ ಗಾಯಳುಗಳನ್ನ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಬಂಧ ಸಂತೇಮರಳ್ಳಿ ಪೊಲೀಸ್ […]
ಚಾಮರಾಜನಗರ: ಕಮರವಾಡಿ ಗೇಟ್ ಬಳಿ ಖಾಸಗಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆ್ಯಕ್ಸಲ್ ಬ್ಲೇಡ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆ ಬದಿಗೆ ಉರುಳಿಬಿದ್ದು ಅಪಘಾತ ಸಂಭವಿಸಿದೆ.
ಸಂತೇಮರಳಿಯಿಂದ ಮೈಸೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 12 ಮಂದಿ ಗಾಯಳುಗಳನ್ನ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಬಂಧ ಸಂತೇಮರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.