AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗಳ‌ ದುರಸ್ತಿಗೆ ಖಾಸಗಿ ನೆರವು! ಪ್ರಯೋಗಕ್ಕೆ ಮುಂದಾದ ಚಾಮರಾಜನಗರ ಡಿಸಿ ಶಿಲ್ಪಾನಾಗ್

ಜಿಲ್ಲೆಯಲ್ಲಿ ಶತಮಾನ ಪೂರೈಸಿದ ಹಾಗೂ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಕೊಠಡಿಗಳ ದುರಸ್ತಿಗೆ ಖಾಸಗಿ ಪ್ರಯೋಜಕತ್ವದಲ್ಲಿ ‌ಮಾಡುವ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಸದ್ಯ ಈ ಯೋಜನೆಗೆ ಚಾಮರಾಜನಗರದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಸರ್ಕಾರಿ ಶಾಲೆಗಳ‌ ದುರಸ್ತಿಗೆ ಖಾಸಗಿ ನೆರವು! ಪ್ರಯೋಗಕ್ಕೆ ಮುಂದಾದ ಚಾಮರಾಜನಗರ ಡಿಸಿ ಶಿಲ್ಪಾನಾಗ್
ಚಾಮರಾಜನಗರ ಸರ್ಕಾರಿ ಪ್ರಾಥಮಿಕ ಶಾಲೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 21, 2023 | 10:03 PM

Share

ಚಾಮರಾಜನಗರ, ನವೆಂಬರ್ 21: ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamarajanagar) ಸರ್ಕಾರಿ ಶಾಲೆಗಳ (Government Schools) ದುಸ್ಥಿತಿ ಒಂದೆರಡಲ್ಲ. ಈ ನಡುವೆ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಶತಮಾನ ಪೂರೈಸಿದ ಸರ್ಕಾರಿ ಶಾಲೆಗಳಿವೆ. ಅದಷ್ಟೇ ಅಲ್ಲದೆ ಸಾವಿರಕ್ಕೂ ಹೆಚ್ಚು ಶಾಲಾ ಕೊಠಡಿಗಳ ದುರಸ್ತಿ ನಡೆಯಬೇಕಿದೆ. ಖಾಸಗಿಯವರ ನೆರವಿನ ಮೂಲಕ ಶಾಲೆಗಳ‌ ದುರಸ್ತಿ ಮಾಡುವ ವಿನೂತನ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲೆಯಲ್ಲಿ ಶತಮಾನ ಪೂರೈಸಿದ ಹಾಗೂ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಕೊಠಡಿಗಳ ದುರಸ್ತಿಗೆ ಖಾಸಗಿ ಪ್ರಯೋಜಕತ್ವದಲ್ಲಿ ‌ಮಾಡುವ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಸದ್ಯ ಈ ಯೋಜನೆಗೆ ಚಾಮರಾಜನಗರದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದೀಗ ಈ ಶಾಲೆಯ ಅಭಿವೃದ್ಧಿಗೆ ಖಾಸಗಿ ಸಂಸ್ಥೆಯೊಂದು ಮುಂದೆ ಬಂದಿದೆ. ಇಂಟೆಕ್ ಸಂಸ್ಥೆಯ ಅಧಿಕಾರಿಗಳು ಈ ಶಾಲೆಯ ದುರಸ್ತಿಗೆ ಈಗಾಗ್ಲೇ ಪ್ಲ್ಯಾನ್ ಸಿದ್ದಪಡಿಸಿದ್ದಾರೆ. ಈ ಶಾಲೆಗೆ ಈಗಾಗ್ಲೇ 118 ವರ್ಷ ಪೂರೈಸಿದೆ.ಶಾಲೆಯ ಪಾರಂಪರಿಕತೆ ಉಳಿಸಿಕೊಳ್ಳುವ ಜೊತೆಗೆ ಹಳೆಯ ಮಾದರಿಯಲ್ಲಿ ಶಾಲೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದುರಸ್ತಿ ಕಾರ್ಯಕ್ಕೆ ಸಿದ್ದತೆ ನಡೆದಿದೆ.ಖಾಸಗಿ ಸಂಸ್ಥೆಗಳ ಸಿಎಸ್ಆರ್ ನಿಧಿ ಮೂಲಕ ಹಣ ತೊಡಗಿಸಲು ಚಿಂತನೆ ನಡೆದಿದೆ.

ಇನ್ನೂ ಈ ಶಾಲೆಯ ದುರಸ್ತಿ ಖಾಸಗಿ ನೆರವಿನ ಮೂಲಕ ಯಶಸ್ವಿಯಾದ್ರೆ ಜಿಲ್ಲೆಯಲ್ಲಿರುವ ಎಲ್ಲಾ ಶತಮಾನ ಪೂರೈಸಿರುವ ಶಾಲೆಗಳ ಜೊತೆಗೆ ಜಿಲ್ಲೆಯಲ್ಲಿ ಎಷ್ಟು ಶಾಲೆಗಳ ಕೊಠಡಿ ದುರಸ್ತಿ ಅಗತ್ಯವಿದೆಯೋ ಅಷ್ಟು ಕಟ್ಟಡಗಳನ್ನು ದುರಸ್ತಿ ಮಾಡುವ ಚಿಂತನೆ ಕೂಡ ಜಿಲ್ಲಾಡಳಿತ ಮುಂದಿದೆ.ಜಿಲ್ಲೆಯಲ್ಲೂ ಕೂಡ ಸಾಕಷ್ಟು ಸಂಖ್ಯೆಯಲ್ಲಿ ಗ್ರಾನೈಟ್ ಕಾರ್ಖಾನೆ ಹಾಗೂ ಕೈಗಾರಿಕೆಗಳಿದೆ.ಇವರೆಲ್ಲರ ಜೊತೆಗೆ ಶೀಘ್ರದಲ್ಲೇ ಸಭೆ ನಡೆಸಿ ಜಿಲ್ಲೆಯ ಆರೋಗ್ಯ, ಶಿಕ್ಷಣ,ಆಸ್ಪತ್ರೆ ದುರಸ್ತಿಗೆ ಅಗತ್ಯವಿರುವ ಕಡೆ ಖಾಸಗೀಯವರ ಸಿಎಸ್ಆರ್ ನಿಧಿ ಮೂಲಕ ಸಾಮಾಜಿಕ ಕಾರ್ಯಕ್ಕೆ ಬಳಸಿಕೊಂಡು ಜಿಲ್ಲೆಯ ಶಾಲೆಗಳ ಕಟ್ಟಡ ದುರಸ್ತಿಗೆ ಮುಂದಾಗ್ತಿವಿ ಅಂತಾರೆ ಡಿಸಿ ಶಿಲ್ಪಾನಾಗ್.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನ ಜನರೇ ನೀವು ಕಾವೇರಿ ನೀರನ್ನ ಕುಡಿಯುತ್ತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಒಟ್ನಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಗುಣಮಟ್ಟದ ಶಿಕ್ಷಣ ಕೊರತೆಯಿಂದ ಖಾಸಗಿ ಶಾಲೆಗಳತ್ತ ಮುಖ ಮಾಡ್ತಿದ್ದಾರೆ. ಜಿಲ್ಲೆಯಲ್ಲಿ ವಿಧ್ಯಾರ್ಥಿಗಳ ಶೂನ್ಯ ದಾಖಲಾತಿಯಿಂದ 14 ಶಾಲೆ ಮುಚ್ಚಿದೆ. ಇದನ್ನೆಲ್ಲಾ ಅರಿತು ಶಾಲೆಯ ಕಟ್ಟಡ ದುರಸ್ತಿ ಜೊತೆಗೆ ಗುಣಮಟ್ಟದ ಶಿಕ್ಷಣ ಕೊಡುವತ್ತ ಗಮನಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!