Bharat Jodo Yatra: ಕರ್ನಾಟಕದಲ್ಲಿ ಇಂದಿನಿಂದ ಭಾರತ ಐಕ್ಯತಾ ಯಾತ್ರೆ, ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಪ್ರವೇಶ

ಕಾಂಗ್ರೆಸ್​ಗೆ ಪೂರಕ ವಾತಾವರಣವಿರುವ ದೇಶದ ಕೆಲವೇ ರಾಜ್ಯಗಳ ಪೈಕಿ ಒಂದಾಗಿರುವ ಕರ್ನಾಟಕದಲ್ಲಿ ಈ ಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಿಷ್ಠವಾಗಬಹುದು ಎಂದು ಪಕ್ಷದ ನಾಯಕರು ಉತ್ಸಾಹ ತೋರಿಸುತ್ತಿದ್ದಾರೆ.

Bharat Jodo Yatra: ಕರ್ನಾಟಕದಲ್ಲಿ ಇಂದಿನಿಂದ ಭಾರತ ಐಕ್ಯತಾ ಯಾತ್ರೆ, ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಪ್ರವೇಶ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ (ಪಿಟಿಯ ಚಿತ್ರ)Image Credit source: PTI
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 30, 2022 | 7:47 AM

ಚಾಮರಾಜನಗರ / ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ‘ಭಾರತ್ ಜೋಡೋ ಯಾತ್ರಾ’ (Bharat Jodo Yatra) ಇಂದಿನಿಂದ ಕರ್ನಾಟಕದಲ್ಲಿ ಸದ್ದು ಮಾಡಲಿದೆ. ಇದನ್ನು ಕನ್ನಡದಲ್ಲಿ ‘ಭಾರತ ಐಕ್ಯತಾ ಯಾತ್ರೆ’ ಎಂದು ಕಾಂಗ್ರೆಸ್ ಅನುವಾದಿಸಿ, ಪ್ರಚಾರ ಮಾಡುತ್ತಿದೆ. ಕಾಂಗ್ರೆಸ್​ಗೆ ಪೂರಕ ವಾತಾವರಣವಿರುವ ದೇಶದ ಕೆಲವೇ ರಾಜ್ಯಗಳ ಪೈಕಿ ಒಂದಾಗಿರುವ ಕರ್ನಾಟಕದಲ್ಲಿ ಈ ಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷವು ಇನ್ನಷ್ಟು ಬಲಿಷ್ಠವಾಗಬಹುದು ಎಂದು ಪಕ್ಷದ ನಾಯಕರು ಉತ್ಸಾಹ ತೋರಿಸುತ್ತಿದ್ದಾರೆ. ಗುಂಡ್ಲುಪೇಟೆ (Gundlupete) ತಾಲ್ಲೂಕಿನಲ್ಲಿ ಕರ್ನಾಟಕ ಪ್ರವೇಶಿಸಲಿರುವ ಯಾತ್ರೆಯು, ಕರ್ನಾಟಕದಲ್ಲಿ 22 ದಿನ ಸಂಚರಿಸಲಿದ್ದು, 511 ಕಿಮೀ ಕ್ರಮಿಸಲಿದೆ.

ಕನ್ಯಾಕುಮಾರಿಯಿಂದ ಸಂಚಾರ ಆರಂಭಿಸಿರುವ ರಾಹುಲ್ ಗಾಂಧಿ ಬೆಳಿಗ್ಗೆ 9 ಗಂಟೆಗೆ ತಮಿಳುನಾಡಿನ ಗೂಡಲೂರಿನಿಂದ ಕರ್ನಾಟಕ ಪ್ರವೇಸಿಸಲಿದ್ದಾರೆ. ಊಟಿ ಕ್ಯಾಲಿಕಟ್ ಜಂಕ್ಷನ್ ಬಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಹಲವು ಶಾಸಕರು, ಪರಿಷತ್ ಸದಸ್ಯರು ಸ್ವಾಗತ ಕೋರಲಿದ್ದಾರೆ. ನಂತರ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು 250 ಗಣ್ಯರು ಪಾಲ್ಗೊಳ್ಳಲುವ ಸಾಧ್ಯತೆಯಿದೆ. ಸ್ವಾಗತದ ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ, ಅನಂತರ ಭಾರತ್ ಜೋಡೋ ಯಾತ್ರೆಯ ಸಂಚಾರ ಆರಂಭವಾಗಲಿದೆ.

ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಸುಮಾರು ನಾಲ್ಕು ಕಿಮೀ ಸಂಚರಿಸಲಿರುವ ಪಾದಯಾತ್ರಿಗಳು ಗುಂಡ್ಲುಪೇಟೆ ತಾಲ್ಲೂಕು ವೀರನಪುರ ಕ್ರಾಸ್ ಬಳಿ ಮಧ್ಯಾಹ್ನದ ಊಟಕ್ಕೆ ನಿಲ್ಲಲಿದ್ದಾರೆ. ಬಳಿಕ ಆದಿವಾಸಿಗಳು ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಡಕಳ್ಳಿ ಗೇಟ್​​ನಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದ್ದು, 7 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮ ತಲುಪಲಿದೆ. ಅಲ್ಲಿ ಕರ್ನಾಟಕದ ಮೊದಲ ದಿನದ ಪಾದಯಾತ್ರೆ ಮುಕ್ತಾಯವಾಗುತ್ತದೆ.

ಇಂದಿನ ಪಾದಯಾತ್ರೆಯಲ್ಲಿ ಬೆಂಗಳೂರು ದಕ್ಷಿಣ, ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು, ಚಾಮರಾಜನಗರ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರು, ನಾಯಕರು, ಕಾರ್ಯಕರ್ತರು, ಭಾಗಿಯಾಗಲಿದ್ದಾರೆ. 7 ಕ್ಷೇತ್ರಗಳಿಂದ ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮಾರ್ಗ ಬದಲಾವಣೆ

ಭಾರತ್ ಜೋಡೊ ಯಾತ್ರೆ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ಹಾದುಹೋಗುವ ಅಂತರರಾಜ್ಯ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಲಿದ್ದಾರೆ. ಕೇರಳದ ಸುಲ್ತಾನ್ ಬತೇರಿಯಿಂದ ಮೂಲೆಹೊಳೆ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು ಗುಂಡ್ಲುಪೇಟೆ ಕಗ್ಗಳದಹುಂಡಿ ಗ್ರಾಮದ ಕ್ರಾಸ್ ಬಳಿಯಿಂದ ಚೆನ್ನಮಲ್ಲಿಪುರ-ಹೊಂಗಹಳ್ಳಿ-ಮೂಕಹಳ್ಳಿ-ಮುಂಟಿಪುರ-ಬರಗಿ-ದೇಶಿಪುರ-ಆಲತ್ತೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕಿದೆ.

ಕೇರಳದ ಸುಲ್ತಾನ್ ಬತೇರಿಯಿಂದ ಮೂಳೆಹೊಳೆ ಮಾರ್ಗವಾಗಿ ಊಟಿಗೆ ತೆರಳುವ ವಾಹನಗಳು ಗುಂಡ್ಲುಪೇಟೆಯ ಕಗ್ಗಳದಹುಂಡಿ ಕ್ರಾಸ್ ಬಳಿಯಿಂದ ಬೇರಂಬಾಡಿ-ಬೀಚನಹಳ್ಳಿ-ಲಕ್ಕಿಪುರ-ದೇವರಹಳ್ಳಿ-ಹಂಗಳ ಮಾರ್ಗವಾಗಿ ಊಟಿಗೆ ತೆರಳಬೇಕು. ಊಟಿ ಕಡೆಯಿಂದ ಮೈಸೂರಿಗೆ ಬರುವ ವಾಹನಗಳು ಹಂಗಳ-ಹಂಗಳಪುರ-ಶಿವಪುರ-ಕೋಡಹಳ್ಳಿ-ಅಣ್ಣೂರು ಕೇರಿ ಮೂಲಕ ಗುಂಡ್ಲುಪೇಟೆ ಕೋಡಹಳ್ಳಿ ಸರ್ಕಲ್ ಬಳಿ ಚಾಮರಾಜನಗರ ರಸ್ತೆ ತಲುಪಿ ಮೈಸೂರಿಗೆ ತೆರಳಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

Published On - 7:45 am, Fri, 30 September 22

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು