ಮಾನವ-ಕಾಡು ಪ್ರಾಣಿ ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಅರಣ್ಯಾಧಿಕಾರಿಗಳು: ರೈಲ್ವೆ ಬ್ಯಾರಿಕೇಡ್​​​ ಪ್ರಾಜೆಕ್ಟ್ ಸಕ್ಸಸ್!

ಶತಾಯ ಗತಾಯ ಕಾಡು ಪ್ರಾಣಿಗಳು ಮತ್ತು ಮಾನವನ ನಡುವೆ ಸಂಘರ್ಷಕ್ಕೆ ಬ್ರೇಕ್ ಹಾಕಲೇ ಬೇಕೆಂದು ಪಣ ತೊಟ್ಟಿರುವ ಅರಣ್ಯ ಇಲಾಖೆ ಹೊಸತೊಂದು ಮಾಸ್ಟರ್ ಪ್ಲಾನ್ ಮಾಡಿದ್ದು, ಕಾಡಾನೆ ದಾಳಿಗೆ ಶಾಶ್ವತ ಪರಿಹಾರವನ್ನ ಅರಣ್ಯಾಧಿಕಾರಿಗಳು ಕಂಡು ಹಿಡಿದಿದ್ದಾರೆ. ರೈಲ್ವೆ ಬ್ಯಾರಿಕೇಡ್​​​ ಅಳವಡಿಸುವ ಮೂಲಕ ಕಾಡಾನೆ ದಾಳಿಗೆ ಬೆಳೆ ಹಾನಿಗೆ ಶಾಶ್ವತ ಪರಿಹಾರ ನೀಡಿದ್ದಾರೆ.

ಮಾನವ-ಕಾಡು ಪ್ರಾಣಿ ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಅರಣ್ಯಾಧಿಕಾರಿಗಳು: ರೈಲ್ವೆ ಬ್ಯಾರಿಕೇಡ್​​​ ಪ್ರಾಜೆಕ್ಟ್ ಸಕ್ಸಸ್!
ರೈಲ್ವೆ ಬ್ಯಾರಿಕೇಡ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 08, 2023 | 8:08 PM

ಚಾಮರಾಜನಗರ, ಸೆಪ್ಟೆಂಬರ್​ 8: ಸದಾ ಕಾಡು ಪ್ರಾಣಿ ಮಾನವ ಸಂಘರ್ಷದ ಸುದ್ದಿಯಿಂದ ಸದ್ದು ಮಾಡುತ್ತಿದ್ದ ಚಾಮರಾಜನಗರ (chamarajanagara) ಜಿಲ್ಲೆಗೆ ಅರಣ್ಯಾಧಿಕಾರಿಗಳು ಮದ್ದು ಅರೆಯಲು ಮುಂದಾಗಿದ್ದಾರೆ. ಕಾಡು ಪ್ರಾಣಿಗಳಿಂದ ರೈತರಿಗೆ ಶಾಶ್ವತ ಪರಿಹಾರ ನೀಡುವಲ್ಲಿ ಯಶಸ್ವಿ ಕಂಡಿದ್ದಾರೆ. ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸುವಂತೆ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.

ಅತಿ ಹೆಚ್ಚು ಹುಲಿ ಸಂರಕ್ಷಿತ ಪ್ರದೇಶ ಹೊಂದಿರುವ ರಾಜ್ಯದ ಏಕೈಕ ಜಿಲ್ಲೆ ಅಂದರೆ ಅದು ಚಾಮರಾಜನಗರ ಜಿಲ್ಲೆ. ಅದೆ ರೀತಿ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾದ ಜಿಲ್ಲೆ ಎಂಬ ಅಪಖ್ಯಾತಿ ಕೂಡ ಚಾಮರಾಜನಗರ ಜಿಲ್ಲೆಗೆ ಸಲ್ಲುತ್ತೆ. ಶತಾಯ ಗತಾಯ ಕಾಡು ಪ್ರಾಣಿಗಳು ಮತ್ತು ಮಾನವನ ನಡುವೆ ಸಂಘರ್ಷಕ್ಕೆ ಬ್ರೇಕ್ ಹಾಕಲೇ ಬೇಕೆಂದು ಪಣ ತೊಟ್ಟಿರುವ ಅರಣ್ಯ ಇಲಾಖೆ ಹೊಸತೊಂದು ಮಾಸ್ಟರ್ ಪ್ಲಾನ್ ಮಾಡಿದ್ದು, ಆ ತಂತ್ರವೀಗ ಫಲ ನೀಡಲು ಶುರುಮಾಡಿದೆ.

ಕಾಡಾನೆ ದಾಳಿಗೆ ಶಾಶ್ವತ ಪರಿಹಾರವನ್ನ ಅರಣ್ಯಾಧಿಕಾರಿಗಳು ಕಂಡು ಹಿಡಿದಿದ್ದಾರೆ. ರೈಲ್ವೆ ಬ್ಯಾರಿಕೇಡ್​​​ ಅಳವಡಿಸುವ ಮೂಲಕ ಕಾಡಾನೆ ದಾಳಿಗೆ ಬೆಳೆ ಹಾನಿಗೆ ಶಾಶ್ವತ ಪರಿಹಾರ ನೀಡಿದ್ದಾರೆ. ಕಾಡಂಚಿನ ಪ್ರದೇಶಗಳಲ್ಲಿ ಆಗಾಗ್ಗೆ ಕಾಡು ಬಿಟ್ಟು ನಾಡಿಗೆ ಬರುವ ಆನೆಗಳು ರೈತರು ಬೆಳೆದಿರುವ ಬೆಳೆಗಳನ್ನು ನಾಶಪಡಿಸುತ್ತಿದ್ದವು.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

ಅಲ್ಲದೇ ಕೆಲವೊಮ್ಮೆ ಮನುಷ್ಯರನ್ನೇ ತುಳಿದು ಸಾಯಿಸಿರುವ ಸಾಕಷ್ಟು ನಿದರ್ಶನಗಳು ಕಣ್ಣ ಮುಂದಿದೆ. ಅಲ್ಲದೇ ರೈತರು ಕೂಡ ಅಕ್ರಮವಾಗಿ ವಿದ್ಯುತ್ ಹರಿಸಿ ವನ್ಯಪ್ರಾಣಿಗಳ ಸಾವಿಗೆ ಕಾರಣಾವಿರುವ ಪ್ರಕರಣ ಕೂಡ ಆಗಾಗ ಸುದ್ದಿಯಾಗಿತ್ತು. ಹೀಗಾಗಿ ಆನೆಗಳು ಹೆಚ್ಚಾಗಿ ಕಾಡಿನಿಂದ ಆಚೆ ಬರುವ ಪ್ರದೇಶಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಅಂತಹ ಜಾಗದಲ್ಲಿ ರೈಲ್ವೆ ಬ್ಯಾರಿಕೇಡ್​​​ಗಳನ್ನು ಅಳವಡಿಸಿದ್ದಾರೆ. ಈಗಾಗಲೇ ಬಂಡೀಪುರದ ಕುಂದುಕೆರೆ, ಹೆಡಿಯಾಲ ಸೇರಿದಂತೆ ಹಲವೆಡೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಈ ಮೂಲಕ ಕಾಡಾನೆ ಉಪಟಳಕ್ಕೆ ಬ್ರೇಕ್ ಬಿದ್ದಿದೆ.

ಇದನ್ನೂ ಓದಿ: ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ

ಬಂಡೀಪುರದಲ್ಲಿ ಇಲ್ಲಿಯವರೆಗೂ 60 ಕಿಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಿದ್ದು, ಈ ವರ್ಷ ಮತ್ತೇ 26 ಕಿಮೀ ನಿರ್ಮಿಸಲು ಒಪ್ಪಿಗೆ ಸಿಕ್ಕಿದೆ. ಇದರಿಂದ ಕಾಡಂಚಿನ ಗ್ರಾಮದಲ್ಲಿ ಕಾಡು ಪ್ರಾಣಿಗಳ ಹಾವಳಿ ಮತ್ತಷ್ಟು ತಪ್ಪುತ್ತೆ ಅಂತಾರೆ. ಈ ರೈಲ್ವೇ ಬ್ಯಾರಿಕೇಡ್ ಹಾಕಲು ಹೆಚ್ಚು ದುಬಾರಿ ವೆಚ್ಚ ತಗುಲುತ್ತದೆ. ಒಂದು ಕಿಲೋಮೀಟರ್ ಉದ್ದದ ರೈಲ್ವೇ ಬ್ಯಾರಿಕೇಡ್ ಹಾಕಲು ಅಂದಾಜು ಒಂದೂವರೆ ಕೋಟಿ ರೂಪಾಯಿ ಖರ್ಚಾಗುತ್ತದೆ. ಹೀಗಾಗಿ ಆನೆಗಳು ಹೆಚ್ಚಾಗಿ ಹೊರಗೆ ಬರುವ ಪ್ರದೇಶಗಳನ್ನು ಗುರುತಿಸಿ ಅಂತಹ ಜಾಗಗಳಲ್ಲಿ ಆನೆಗಳು ಕಾಡಿನಿಂದ ಹೊರಬಾರದಂತೆ ಅಧಿಕಾರಿಗಳು ಬ್ಯಾರಿಕೇಡ್​​​ ಅಳವಡಿಸುವ ಕೆಲಸ ಮಾಡುತ್ತಿದ್ದಾರೆ. ಸದ್ಯ ಈ ರೀತಿ ರೈಲ್ವೇ ಬ್ಯಾರಿಕೇಡ್ ಹಾಕಿರುವುದರಿಂದ ಕಾಡಂಚಿನ ಗ್ರಾಮಸ್ಥರು ಬೆಳೆದ ಬೆಳೆ ಆನೆ ದಾಳಿಯಿಂದ ರಕ್ಷಣೆ ಮಾಡಿಕೊಳ್ಳಬಹುದಾಗಿದೆ‌.

ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಆನೆ ಉಪಟಳ ಹೆಚ್ಚಾಗಿರುವ ಪ್ರದೇಶದಲ್ಲೂ ಕೂಡ ಮುಂದಿನ ದಿನಗಳಲ್ಲಿ ಈ ರೈಲ್ವೆ ಬ್ಯಾರಿಗೇಟ್ ಅಳವಡಿಸಿದರೆ ಕಾಡುಪ್ರಾಣಿ ಮಾನವ ಸಂಘರ್ಷ ತಪ್ಪುತ್ತೆ. ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಬ್ಯಾರಿಕೇಡ್ ಅಳವಡಿಸುತ್ತಾರಾ ಅನ್ನೋದ್ನ ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:02 pm, Fri, 8 September 23